ಪ್ರಯಾಗ್‌ರಾಜ್‌ನ ಮೇಜಾ ಪೊಲೀಸ್ ಠಾಣೆ ಪ್ರದೇಶದ ಹೆದ್ದಾರಿಯಲ್ಲಿ ಮಹಾ ಕುಂಭಕ್ಕೆ ಭಕ್ತರನ್ನು ಕರೆದೊಯ್ಯುತ್ತಿದ್ದ ಬಸ್ ಮತ್ತು ಬೊಲೆರೊ ಕಾರು ನಡುವೆ ಡಿಕ್ಕಿ ಸಂಭವಿಸಿದ ನಂತರ ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಇತರರು. 
ದೇಶ

ಪ್ರಯಾಗ್ ರಾಜ್ ಹೆದ್ದಾರಿಯಲ್ಲಿ ಭೀಕರ ಅಪಘಾತ: 10 ಮಂದಿ ಮಹಾಕುಂಭ ಭಕ್ತರ ಸಾವು

ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯ ಭಕ್ತರು ಮಹಾ ಕುಂಭಕ್ಕೆ ಸ್ನಾನ ಮಾಡಲು ಹೋಗುತ್ತಿದ್ದಾಗ, ಅವರು ಪ್ರಯಾಣಿಸುತ್ತಿದ್ದ ಬೊಲೆರೊ ಹೆದ್ದಾರಿಯಲ್ಲಿ ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ.

ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ಮೇಜಾ ಪೊಲೀಸ್ ಠಾಣೆ ಪ್ರದೇಶದಲ್ಲಿ ನಿನ್ನೆ ಶುಕ್ರವಾರ ತಡರಾತ್ರಿ ಹೆದ್ದಾರಿಯಲ್ಲಿ ಬೊಲೆರೊ ಕಾರು ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೊಲೆರೊ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಹತ್ತು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯವರು ಮಹಾ ಕುಂಭಕ್ಕೆ ಹೋಗುತ್ತಿದ್ದಾಗ, ಅವರು ಪ್ರಯಾಣಿಸುತ್ತಿದ್ದ ಬೊಲೆರೊ ಹೆದ್ದಾರಿಯಲ್ಲಿ ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ ಎಂದು ಉಪ ಪೊಲೀಸ್ ಆಯುಕ್ತ (ಡಿಸಿಪಿ) ವಿವೇಕ್ ಚಂದ್ರ ಯಾದವ್ ಹೇಳಿದ್ದಾರೆ.

ಬೊಲೆರೊದಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ 10 ಜನರು ಅಪಘಾತದಲ್ಲಿ ಮೃತಪಟ್ಟಿದ್ದು, ಬಸ್ ನಲ್ಲಿದ್ದ 19 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಡಿಸಿಪಿ ತಿಳಿಸಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ದುಃಖ ವ್ಯಕ್ತಪಡಿಸಿದ್ದಾರೆ. "ಪ್ರಯಾಗರಾಜ್ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ಉತ್ತರ ಪ್ರದೇಶ ಸಿಎಂ ಸಂತಾಪ ಸೂಚಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿಗಳು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದಾರೆ.

ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಅವರು ಹಾರೈಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ SIR: ವಿದೇಶಾಂಗ ಸಚಿವ ಜೈಶಂಕರ್, ಎಲ್.ಕೆ ಅಡ್ವಾಣಿ ಸೇರಿದಂತೆ ಹಲವು ಮತದಾರರಿಗೆ ನೋಟಿಸ್; CEO ಕೊಟ್ಟ ಸ್ಪಷ್ಟನೆ ಏನು?

ಇದು ಎಂತಹ ವಿಶೇಷ ತೀವ್ರ ಪರಿಷ್ಕರಣೆ? ಅರ್ಹರನ್ನು ಕಿತ್ತುಹಾಕಿ, ಅನರ್ಹರನ್ನು ಸೇರಿಸುವುದೇ SIR: ಕಪಿಲ್ ಸಿಬಲ್ ಕಿಡಿ!

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ ಪ್ರಶ್ನಿಸಿದ ಟಾಟಾ ಟ್ರಸ್ಟ್ಸ್!

ಸಿಎಂ ಡಿಕೆ ಶಿವಕುಮಾರ್‌ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?

ಅಂತಹ ಮನಸ್ಥಿತಿ ಇದ್ದಾಗ ಮೊದಲೇ ಅದರಿಂದ ದೂರ ಇರಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಹದೇವಪ್ಪ ಟಾಂಗ್!