ದೆಹಲಿ ಮೆಟ್ರೋ ನಿಲ್ದಾಣಕ್ಕೆ ನುಗ್ಗಿದ ಜನಸಮೂಹ 
ದೇಶ

Delhi metro ನಿಲ್ದಾಣದಲ್ಲಿ ಹೈ ಡ್ರಾಮಾ: ಟಿಕೆಟ್ ಇಲ್ಲ.. ಸೆಕ್ಯುರಿಟಿ ಚೆಕ್ ಇಲ್ಲ...; ಏಕಾಏಕಿ ನುಗ್ಗಿದ ಜನ, ಕೈ ಕಟ್ಟಿ ನಿಂತ ಭದ್ರತಾ ಸಿಬ್ಬಂದಿ, Video Viral

ಈ ವಿಡಿಯೋ ಯಾವಾಗ ಸೆರೆ ಹಿಡಿದದ್ದು ಎಂಬುದು ಸ್ಪಷ್ಟವಾಗಿಲ್ಲ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.

ನವದೆಹಲಿ: ನಿಯಮಗಳನ್ನೆಲ್ಲಾ ಗಾಳಿಗೆ ತೂರಿ ಯಾವುದೇ ಭದ್ರತೆ ಇಲ್ಲದೆ ಜನಸಮೂಹವೊಂದು ದೆಹಲಿ ಮೆಟ್ರೋ ನಿಲ್ದಾಣಕ್ಕೆ ನುಗ್ಗಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ಬೆಂಗಳೂರಿನಲ್ಲಿ ಮೆಟ್ರೋ ರೈಲು ದರ ಏರಿಕೆ ವ್ಯಾಪಕ ಚರ್ಚೆಗೀಡಾಗಿರುವಂತೆಯೇ ಬೆಂಗಳೂರು ಮೆಟ್ರೋ ರೈಲಿನಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಕುಸಿತವಾಗಿದೆ. ಆದರೆ ಇದಕ್ಕೆ ತದ್ವಿರುದ್ಧ ಎಂಬಂತೆ ಅತ್ತ ದೆಹಲಿಯಲ್ಲಿ ಜನಸಮೂಹವೊಂದು ಏಕಾಏಕಿ ಮೆಟ್ರೋ ನಿಲ್ದಾಣಕ್ಕೆ ನುಗ್ಗಿದ್ದು, ಟಿಕೆಟ್ ಇಲ್ಲದೆ ಸೆಕ್ಯುರಿಟಿ ಚೆಕ್ ಇಲ್ಲದೇ ನಿಯಮಗಳನ್ನು ಗಾಳಿಗೆ ತೂರಿ ಮನಸೋ ಇಚ್ಚೆ ವರ್ತಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪೋಸ್ಟ್ ಗಳ ಅನ್ವಯ ಇತ್ತೀಚೆಗೆ ನಡೆದ ಶಬ್ ಇ ಬರಾತ್ ಹಬ್ಬದ ದಿನದಂದೇ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದ್ದು, ಸಾಮೂಹಿಕ ಪ್ರಾರ್ಥನೆಗೆ ಬಂದ ಯುವಕರು ಏಕಾಏಕಿ ಮೆಟ್ರೋ ನಿಲ್ದಾಣಕ್ಕೆ ನುಗ್ಗಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ದೆಹಲಿ ಪೊಲೀಸರು ಕುಲಂಕುಷ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತ ವಿಡಿಯೊವೊಂದು ವ್ಯಾಪಕ ವೈರಲ್ ಆಗುತ್ತಿದ್ದು, ಈ ವಿಡಿಯೋ ಯಾವಾಗ ಸೆರೆ ಹಿಡಿದದ್ದು ಎಂಬುದು ಸ್ಪಷ್ಟವಾಗಿಲ್ಲ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಅಂತೆಯೇ ಇಷ್ಟು ಜನ ಏಕಾಏಕಿ ಮೆಟ್ರೋ ನಿಲ್ದಾಣಕ್ಕೆ ನುಗ್ಗಿದಾಗ ಅಲ್ಲಿದ್ದ ಭದ್ರತಾ ಸಿಬ್ಬಂದಿ ಏನು ಮಾಡುತ್ತಿದ್ದರು ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT