ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

Delhi Railway Station Stampede: ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು, ಕೇಂದ್ರ ಸಚಿವ ರಾಜನಾಥ್ ಸಿಂಗ್ ಸಂತಾಪ

ಪ್ರಧಾನಿ ನರೇಂದ್ರ ಮೋದಿ X ನಲ್ಲಿ ಟ್ವೀಟ್ ಮಾಡಿ ಪ್ರಕರಣದ ಕುರಿತು ಸಂತಾಪ ಸೂಚಿಸಿದ್ದಾರೆ.

ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ
Srinivasa Murthy VN
Updated On : 16 Feb 2025, 8:38 am

ನವದೆಹಲಿ: ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು, ಕೇಂದ್ರ ಸಚಿವ ರಾಜನಾಥ್ ಸಿಂಗ್ ಸಂತಾಪ ಸೂಚಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ X ನಲ್ಲಿ ಟ್ವೀಟ್ ಮಾಡಿ ಪ್ರಕರಣದ ಕುರಿತು ಸಂತಾಪ ಸೂಚಿಸಿದ್ದಾರೆ. 'ನವದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಿಂದ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರೊಂದಿಗೆ ನನ್ನ ಆಲೋಚನೆಗಳು ಇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಈ ಕಾಲ್ತುಳಿತದಿಂದ ಗಾಯಗೊಂಡ ಎಲ್ಲರಿಗೂ ಅಧಿಕಾರಿಗಳು ಸಹಾಯ ಮಾಡುತ್ತಿದ್ದಾರೆ" ಎಂದು ಅವರು ಟ್ವೀಟ್ ಮಾಡಿದ್ದಾರೆ.

ರಾಷ್ಟ್ರಪತಿ ಮುರ್ಮು ಆಘಾತ

Advertisement

Advertisement

ಅಂತೆಯೇ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಆಘಾತ ವ್ಯಕ್ತಪಡಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, "ನವದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಜೀವಹಾನಿ ಸಂಭವಿಸಿದ ಬಗ್ಗೆ ತಿಳಿದು ತೀವ್ರ ದುಃಖವಾಯಿತು. ಮೃತರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ಅವರು X ನಲ್ಲಿ ಪೋಸ್ಟ್ ಮಾಡಿದ್ದಾರೆ.

ನವದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ಸುದ್ದಿ ಕೇಳಿ ಆಘಾತವಾಯಿತು. ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಕಾಲ್ತುಳಿತದಿಂದ ಉಂಟಾದ ಜೀವಹಾನಿಯಿಂದ ನನಗೆ ತುಂಬಾ ನೋವಾಗಿದೆ. ಈ ದುಃಖದ ಸಮಯದಲ್ಲಿ, ನನ್ನ ಆಲೋಚನೆಗಳು ಮೃತ ಕುಟುಂಬಗಳೊಂದಿಗೆ ಇವೆ. ಗಾಯಾಳುಗಳು ಬೇಗನೆ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

Also Read

Delhi Railway Station Stampede: ರೈಲ್ವೇ ಇಲಾಖೆ 10 ಲಕ್ಷ ರೂ ಪರಿಹಾರ ಘೋಷಣೆ

ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು ಕೂಡ ಟ್ವೀಟ್ ಮೂಲಕ ಕಾಲ್ತುಳಿತ ಪ್ರಕರಣಕ್ಕೆ ಸಂತಾಪ ಸೂಚಿಸಿದ್ದಾರೆ. 'ನವದೆಹಲಿ ರೈಲು ನಿಲ್ದಾಣದಲ್ಲಿ ಒಂದು ದುರದೃಷ್ಟಕರ ಘಟನೆ ನಡೆದಿದೆ. ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಆಯುಕ್ತರೊಂದಿಗೆ ಮಾತನಾಡಿ ಪರಿಸ್ಥಿತಿಯನ್ನು ನಿಭಾಯಿಸುವಂತೆ ಕೇಳಿಕೊಂಡಿದ್ದೇನೆ. ಪರಿಹಾರ ಸಿಬ್ಬಂದಿಯನ್ನು ನಿಯೋಜಿಸುವಂತೆ ಸಿಎಸ್‌ಗೆ ತಿಳಿಸಲಾಗಿದೆ. ಸಿಎಸ್ ಮತ್ತು ಸಿಪಿಗೆ ಸ್ಥಳದಲ್ಲಿದ್ದು ಪರಿಹಾರ ಕ್ರಮಗಳನ್ನು ನಿಯಂತ್ರಿಸಲು ಸೂಚಿಸಿದ್ದೇನೆ. ನಾನು ನಿರಂತರವಾಗಿ ಕಾರ್ಯಾಚರಣೆಗಳನ್ನು ಮೇಲ್ವಿಚಾರಣೆ ಮಾಡುತ್ತಿದ್ದೇನೆ ಎಂದು X ಮೂಲಕ ಮಾಹಿತಿ ನೀಡಿದ್ದಾರೆ.

ಇನ್ನು ರೈಲು ನಿಲ್ದಾಣದ ಮೂಲಕ ಪ್ರಯಾಣಿಕರು ಭಾರಿ ಸಂಖ್ಯೆಯಲ್ಲಿ ಓಡಾಡುತ್ತಿರುವುದನ್ನು ತೋರಿಸುವ ಹಲವಾರು ವೀಡಿಯೊಗಳು ಹೊರಬಂದಿವೆ. ಹಲವರು ಮಕ್ಕಳನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗುತ್ತಿರುವುದು ಕಂಡುಬಂದರೆ, ಇನ್ನು ಕೆಲವರು ಗೊಂದಲದ ನಡುವೆ ತಮ್ಮ ಸಾಮಾನುಗಳೊಂದಿಗೆ ಹೆಣಗಾಡುತ್ತಿರುವುದು ಕಂಡುಬಂದಿದೆ. ಜನದಟ್ಟಣೆಗೆ ನಿಖರವಾದ ಕಾರಣ ಸ್ಪಷ್ಟವಾಗಿಲ್ಲವಾದರೂ, ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭ ಮೇಳಕ್ಕಾಗಿ ಕಾರ್ಯನಿರ್ವಹಿಸುವ ಎರಡು ವಿಶೇಷ ರೈಲುಗಳ ವಿಳಂಬವೇ ಈ ಪರಿಸ್ಥಿತಿಗೆ ಕಾರಣ ಎಂದು ಆರಂಭಿಕ ವರದಿಗಳು ಸೂಚಿಸುತ್ತವೆ. ಏತನ್ಮಧ್ಯೆ, ರೈಲ್ವೆ ಸಚಿವಾಲಯವು ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement