ಯೋಧ-ಏಕ್ತಾ ಕಪೂರ್ online desk
ದೇಶ

Porn ಸಿನಿಮಾನಲ್ಲಿ ಭಾರತೀಯ ಸೈನಿಕನ ಪಾತ್ರ: Ekta kapoor ವಿರುದ್ಧ ದೂರು; ತಪ್ಪು ಮಾಹಿತಿ ಹರಡುವವರ ವಿರುದ್ಧ ಮಾನಷ್ಟ ಮೊಕದ್ದಮೆಯ ಎಚ್ಚರಿಕೆ

ಏಕ್ತಾ ಕಪೂರ್ ಅವರನ್ನು ಕಿರುತೆರೆಯ ಕಿಂಗ್ ಮೇಕರ್ ಎಂದೇ ಕರೆಯಲಾಗುತ್ತದೆ. ಹಲವಾರು ಟಿವಿ ಧಾರಾವಾಹಿಗಳ ನಿರ್ಮಾಪಕಿ ಆಗಿರುವ ಏಕ್ತಾ ಕಪೂರ್ ಆಲ್ಟ್ ಬಾಲಾಜಿ ಹೆಸರಿನ ಒಟಿಟಿಯನ್ನೂ ಸಹ ನಡೆಸುತ್ತಿದ್ದಾರೆ.

ಸಾಫ್ಟ್ ಪೋರ್ನ್ ಸಿನಿಮಾ (porn) ದಲ್ಲಿ ಭಾರತೀಯ ಸೈನಿಕನ ಪಾತ್ರ ಬಳಸಿದ್ದಕ್ಕಾಗಿ ನಿರ್ಮಾಪಕಿ ಏಕ್ತಾ ಕಪೂರ್ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಭಾರತೀಯ ಸೈನಿಕರಿಗೆ ಅಪಮಾನ ಎಸಗಿದ್ದಾರೆ ಎಂಬ ಆರೋಪದ ಮೇಲೆ ಏಕ್ತಾ ಕಪೂರ್ ವಿರುದ್ಧ ಪ್ರಕರಣವೂ ದಾಖಲಾಗಿದೆ.

ಏಕ್ತಾ ಕಪೂರ್ ಅವರನ್ನು ಕಿರುತೆರೆಯ ಕಿಂಗ್ ಮೇಕರ್ ಎಂದೇ ಕರೆಯಲಾಗುತ್ತದೆ. ಹಲವಾರು ಟಿವಿ ಧಾರಾವಾಹಿಗಳ ನಿರ್ಮಾಪಕಿ ಆಗಿರುವ ಏಕ್ತಾ ಕಪೂರ್ ಆಲ್ಟ್ ಬಾಲಾಜಿ ಹೆಸರಿನ ಒಟಿಟಿಯನ್ನೂ ಸಹ ನಡೆಸುತ್ತಿದ್ದಾರೆ.

ಈ ಆಲ್ಟ್ ಬಾಲಾಜಿ ಒಟಿಟಿಯಲ್ಲಿ ಸಾಫ್ಟ್ ಪಾರ್ನ್ ರೀತಿಯ ವೆಬ್ ಸರಣಿ, ಸಿನಿಮಾಗಳನ್ನು ಪ್ರಸಾರ ಮಾಡಲಾಗುತ್ತದೆ. ಈ ರೀತಿಯ ವೆಬ್ ಸೀರೀಸ್ ನಲ್ಲಿ ಸೈನಿಕನ ಪಾತ್ರವನ್ನು ಬಳಸಿಕೊಂಡು ಸಮವಸ್ತ್ರದಲ್ಲಿದ್ದಾಗಲೇ ಲೈಂಗಿಕ ಕ್ರಿಯೆಯಲ್ಲಿ ತೊಡಗುವ ದೃಶ್ಯವನ್ನು ಚಿತ್ರೀಕರಿಸಲಾಗಿತ್ತು.

ಸೈನಿಕನಿಗೆ ಅವಮಾನ ಮಾಡಲಾಗಿದೆ ಎಂದು ಯೂಟ್ಯೂಬರ್ ವಿಕಾಸ್ ಪಾಠಕ್ (ಹಿಂದೂಸ್ತಾನಿ ಬಾವ್) ಪೊಲೀಸ್ ಠಾಣೆಗೆ ಏಕ್ತಾ ಕಪೂರ್ ವಿರುದ್ಧ ದೂರು ನೀಡಿದ್ದರು. ದೂರು ದಾಖಲಿಸಿಕೊಂಡಿರುವ ಪೊಲೀಸರು ಎಫ್​ಐಆರ್ ನಮೂದು ಮಾಡಿಕೊಂಡಿದ್ದರು. ಆದರೆ ವಿಚಾರಣೆ ನಡೆಸಿರಲಿಲ್ಲ. ಇದೀಗ ನ್ಯಾಯಾಲಯ ಮಧ್ಯಪ್ರವೇಶ ಮಾಡಿದ್ದು, ಪೊಲೀಸರಿಗೆ ಸೂಚನೆ ನೀಡಿ ಏಕ್ತಾ ಕಪೂರ್ ವಿಚಾರಣೆ ನಡೆಸಿ, ಮೇ 9ರ ಒಳಗಾಗಿ ವರದಿ ನೀಡುವಂತೆ ಸೂಚಿಸಿದೆ.

ಸೆಕ್ಷನ್ 202 ಅಡಿಯಲ್ಲಿ ಕೇಸು ದಾಖಲಿಸಿಕೊಂಡಿರುವ ಪೊಲೀಸರು ಏಕ್ತಾ ಕಪೂರ್ ವಿಚಾರಣೆ ನಡೆಸಿರಲಿಲ್ಲ. ಏಕ್ತಾ ಕಪೂರ್ ಮಾತ್ರವೇ ಅಲ್ಲದೆ, ಆಲ್ಟ್ ಬಾಲಾಜಿಯ ಇತರೆ ಸಹ ಮಾಲೀಕರು, ಆ ವೆಬ್ ಸರಣಿಯ ನಿರ್ದೇಶಕರು ಇನ್ನೂ ಕೆಲವರ ವಿರುದ್ಧ ದೂರು ದಾಖಲಾಗಿದೆ.

ಇದಕ್ಕೆ ಪ್ರತಿಕ್ರಿಯೆಯಾಗಿ, ಏಕ್ತಾ ಕಪೂರ್ ಅವರ ವಕೀಲ ರಿಜ್ವಾನ್ ಸಿದ್ದಿಕಿ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿ, ಪೊಲೀಸರು 2020 ರಲ್ಲಿ ದೂರನ್ನು ಈಗಾಗಲೇ ಮುಕ್ತಾಯಗೊಳಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು. ನ್ಯಾಯಾಲಯವು ದೂರನ್ನು ಗಮನಕ್ಕೆ ತೆಗೆದುಕೊಂಡಿಲ್ಲ, ಆದರೆ ಅದರ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಪ್ರಾಥಮಿಕ ತನಿಖೆಯನ್ನು ಮಾತ್ರ ಕೋರಿದೆ ಎಂದು ಅವರು ಒತ್ತಿ ಹೇಳಿದರು. ನನ್ನ ಕಕ್ಷಿದಾರರು ತಪ್ಪು ಮಾಡಿದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳ ಜೊತೆಗೆ 100 ಕೋಟಿ ರೂಪಾಯಿಗಳ ನಾಗರಿಕ ಮಾನನಷ್ಟ ಮೊಕದ್ದಮೆ ಹೂಡಲು ಯೋಚಿಸುತ್ತಿದ್ದಾರೆ" ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ರಷ್ಯಾ ಸಂಬಂಧಗಳು ವ್ಯಾಪಾರ ಒಪ್ಪಂದಕ್ಕೆ ಅಡ್ಡಿಯಾಗಬಹುದು: ಯುರೋಪಿಯನ್ ಒಕ್ಕೂಟ ವಾರ್ನಿಂಗ್!

ಭಾರತದ ಅಣೆಕಟ್ಟು-ನದಿಗಳು ನಮ್ಮದಾಗಲಿದೆ: Op Sindoorಗೆ ಪ್ರತೀಕಾರ ಹೇಳ್ತೀವಿ; ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಬೆದರಿಕೆ!

Bumrah ಓವರ್​ನಲ್ಲಿ 6 ಸಿಕ್ಸರ್ ಸಿಡಿಸುವ ಸವಾಲು: ಆದ್ರೆ Saim Ayub ಆಡಿದ 3 ಪಂದ್ಯದಲ್ಲೂ ಸುತ್ತಿದ್ದು ಶೂನ್ಯ, ಕಳಪೆ ದಾಖಲೆ ಬರೆದ Pak ಬ್ಯಾಟರ್, Video!

ಬರೇಲಿಯಲ್ಲಿ ದಿಶಾ ಪಠಾನಿ ಮನೆಯ ಹೊರಗೆ ಗುಂಡು ಹಾರಿಸಿದ್ದ ಇಬ್ಬರು ಶಂಕಿತರು ಎನ್‌ಕೌಂಟರ್‌ನಲ್ಲಿ ಸಾವು

ನವೆಂಬರ್ ಒಳಗೆ ಬೆಂಗಳೂರಿನ ಎಲ್ಲಾ ಗುಂಡಿಗಳನ್ನು ಮುಚ್ಚಿ: ಗುತ್ತಿಗೆದಾರರಿಗೆ DCM ಡಿಕೆಶಿ ಗಡುವು

SCROLL FOR NEXT