ಸಂಗ್ರಹ ಚಿತ್ರ 
ದೇಶ

Delhi Earthquake: ದೆಹಲಿ-NCR​ನಲ್ಲಿ 4.0 ತೀವ್ರತೆಯ ಭೂಕಂಪ; ಸುರಕ್ಷತಾ ಮುನ್ನೆಚ್ಚರಿಕೆ ಅನುಸರಿಸಿ ಎಂದ ಪ್ರಧಾನಿ ಮೋದಿ

ಭೂಕಂಪನದ ಕೇಂದ್ರಬಿಂದು ದೌಲಾ ಕುವಾನ್‌ನಲ್ಲಿರುವ ದುರ್ಗಾಬಾಯಿ ದೇಶಮುಖ್ ಮಹಾವಿದ್ಯಾಲಯದ ಬಳಿ ಪತ್ತೆಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನವದೆಹಲಿ: ದೆಹಲಿ-ಎನ್​ಸಿಆರ್​ನಲ್ಲಿ ಸೋಮವಾರ 4.0 ತೀವ್ರತೆಯ ಭೂಕಂಪ ಸಂಭವಿಸಿದ್ದು, ಭೂಮಿಯ ಕಂಪನಕ್ಕೆ ಜನತೆ ಬೆಚ್ಚಿ ಬಿದ್ದಿದೆ.

ದೆಹಲಿ, ನೋಯ್ಡಾ, ಗಾಜಿಯಾಬಾದ್ ಮತ್ತು ಗುರುಗ್ರಾಮ ಸೇರಿದಂತೆ ಹಲವು ಪ್ರದೇಶಗಳಲ್ಲಿ ಜನರು ಪ್ರಬಲ ಭೂಕಂಪನದ ಅನುಭವವನ್ನು ಅನುಭವಿಸಿದ್ದಾರೆ.

ಬೆಳಗ್ಗೆ 5.36 ಸುಮಾರಿಗೆ ಭೂಮಿ ಕಂಪಿಸಿದೆ. ಭೂಮಿಯ ಕಂಪನಕ್ಕೆ ಬೆದರಿದ ಜನರು ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಭೂಕಂಪನದಿಂದ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ. 5 ಕಿಲೋಮೀಟ‌ರ್ ಆಳದಲ್ಲಿ ಭೂಮಿ ಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.

ಈ ನಡುವೆ ಭೂಕಂಪನದ ಕೇಂದ್ರಬಿಂದು ದೌಲಾ ಕುವಾನ್‌ನಲ್ಲಿರುವ ದುರ್ಗಾಬಾಯಿ ದೇಶಮುಖ್ ಮಹಾವಿದ್ಯಾಲಯದ ಬಳಿ ಪತ್ತೆಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭೂಕಂಪನ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿಯವರು, ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ. ಪ್ರತಿಯೊಬ್ಬರೂ ಶಾಂತವಾಗಿರಲು ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸಲು ಮತ್ತು ಸಂಭವನೀಯ ಭೂಕಂಪಗಳ ಬಗ್ಗೆ ಎಚ್ಚರದಿಂದಿರುವಂತೆ ಮನವಿ ಮಾಡಿದ್ದಾರೆ. ಅಲ್ಲದೆ, ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ