ರಣವೀರ್ ಅಲ್ಹಾಬಾದಿಯಾ 
ದೇಶ

ಲೈಂಗಿಕತೆ ಕುರಿತು ಆಕ್ಷೇಪಾರ್ಹ ಹೇಳಿಕೆ: ಅಲ್ಹಾಬಾದಿಯಾ, ಸಮಯ್ ರೈನಾಗೆ ಮಹಾ ಪೊಲೀಸರಿಂದ ಸಮನ್ಸ್

ಈ ಹಿಂದೆ, ಸೈಬರ್ ಅಧಿಕಾರಿಗಳು ಅಲ್ಹಾಬಾದಿಯಾ ಅವರಿಗೆ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದರೂ ಅವರು ಹಾಜರಾಗಿರಲಿಲ್ಲ.

ಮುಂಬೈ: ಯೂಟ್ಯೂಬ್ ರಿಯಾಲಿಟಿ ಶೋ ಇಂಡಿಯಾಸ್ ಗಾಟ್ ಲ್ಯಾಟೆಂಟ್ ಕಾರ್ಯಕ್ರಮದಲ್ಲಿ ಪೋಷಕರು ಮತ್ತು ಲೈಂಗಿಕತೆ ಕುರಿತು ನೀಡಿದ ಆಕ್ಷೇಪಾರ್ಹ ಹೇಳಿಕೆಗಳಿಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪಾಡ್‌ಕ್ಯಾಸ್ಟರ್ ರಣವೀರ್ ಅಲ್ಹಾಬಾದಿಯಾ ಹಾಗೂ ಹಾಸ್ಯನಟ ಸಮಯ್ ರೈನಾ ಅವರಿಗೆ ಮುಂಬೈ ಸೈಬರ್ ಕ್ರೈಂ ಪೊಲೀಸರು ಸೋಮವಾರ ಸಮನ್ಸ್ ಜಾರಿ ಮಾಡಿದ್ದಾರೆ.

ವರ್ಚುವಲ್ ಮೂಲಕ ತಮ್ಮ ಹೇಳಿಕೆ ದಾಖಲಿಸಿಕೊಳ್ಳಬೇಕು ಎಂಬ ಸಮಯ್ ರೈನಾ ಅವರ ಮನವಿಯನ್ನು ಸೈಬರ್ ಮತ್ತು ಮಾಹಿತಿ ಭದ್ರತಾ ವಿಭಾಗವಾದ ಪೊಲೀಸರು ತಿರಸ್ಕರಿಸಿದ್ದು, ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರೈನಾ ಅವರ ವೆಬ್ ಶೋ "ಇಂಡಿಯಾಸ್ ಗಾಟ್ ಲ್ಯಾಟೆಂಟ್" ನಲ್ಲಿ ಪೋಷಕರು ಮತ್ತು ಲೈಂಗಿಕತೆಯ ಬಗ್ಗೆ ಅಸಭ್ಯ ಹೇಳಿಕೆ ನಂತರ ರಣವೀರ್ ಅಲ್ಹಾಬಾದಿಯಾ ಮತ್ತು ಇತರರ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ.

ತಾನು ಅಮೆರಿಕದಲ್ಲಿದ್ದು, ವಿಡಿಯೋ-ಕಾನ್ಫರೆನ್ಸಿಂಗ್ ಮೂಲಕ ತಮ್ಮ ಹೇಳಿಕೆ ದಾಖಲಿಸುವಂತೆ ಮಹಾರಾಷ್ಟ್ರ ಸೈಬರ್‌ಗೆ ರೈನಾ ವಿನಂತಿಸಿದ್ದರು. ಆದರೆ ಅವರ ವಿನಂತಿಯನ್ನು ತಿರಸ್ಕರಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಹಿಂದೆ, ಮುಂಬೈ ಪೊಲೀಸರು ರೈನಾ ಅವರಿಗೆ ಫೆಬ್ರವರಿ 17ಕ್ಕು ಮುನ್ನ ಖಾರ್ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೆ ಅವರು ವಿದೇಶದಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದಾಗಿ ಮಾಹಿತಿ ನೀಡಿದ್ದರು.

ಇನ್ನು ಯೂಟ್ಯೂಬ್‌ನಲ್ಲಿ ಜನಪ್ರಿಯರಾಗಿರುವ ಅಲ್ಹಾಬಾದಿಯಾ ಅವರಿಗೂ ಮಹಾರಾಷ್ಟ್ರ ಪೊಲೀಸರು ನೋಟಿಸ್ ನೀಡಿದ್ದು, ಫೆಬ್ರವರಿ 24 ರಂದು ವಿಚಾರಣಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ಈ ಹಿಂದೆ, ಸೈಬರ್ ಅಧಿಕಾರಿಗಳು ಅಲ್ಹಾಬಾದಿಯಾ ಅವರಿಗೆ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದರೂ ಅವರು ಹಾಜರಾಗಿರಲಿಲ್ಲ.

ಈಗ ಫೆಬ್ರವರಿ 24 ರಂದು ವಿಚಾರಣೆಗೆ ಹಾಜರಾಗುವಂತೆ ಮತ್ತೆ ಸಮನ್ಸ್ ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ