ದ್ವಿಪಕ್ಷೀಯ ಮಾತುಕತೆ 
ದೇಶ

ಕಾರ್ಯತಂತ್ರದ ಪಾಲುದಾರಿಕೆ ವೃದ್ಧಿಸುವ ಒಪ್ಪಂದಕ್ಕೆ ಭಾರತ, ಕತಾರ್ ಸಹಿ

ಪ್ರಧಾನಿ ನರೇಂದ್ರ ಮೋದಿ ಅವರು ಭಾರತಕ್ಕೆ ಭೇಟಿ ನೀಡಿರುವ ಕತಾರ್ ಅಮೀರ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರೊಂದಿಗೆ ಇಂದು ದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಿದರು.

ನವದೆಹಲಿ: ಭಾರತ ಮತ್ತು ಕತಾರ್ ಮಂಗಳವಾರ ಉಭಯ ದೇಶಗಳ ನಡುವೆ ಕಾರ್ಯತಂತ್ರದ ಪಾಲುದಾರಿಕೆ ವೃದ್ಧಿಸುವ ಒಪ್ಪಂದಕ್ಕೆ ಸಹಿ ಹಾಕಿವೆ.

ಪ್ರಧಾನಿ ನರೇಂದ್ರ ಮೋದಿ ಅವರು ಭಾರತಕ್ಕೆ ಭೇಟಿ ನೀಡಿರುವ ಕತಾರ್ ಅಮೀರ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರೊಂದಿಗೆ ಇಂದು ದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಬಳಿಕ ಉಭಯ ನಾಯಕರ ಸಮ್ಮುಖದಲ್ಲಿ ಕಾರ್ಯತಂತ್ರದ ಪಾಲುದಾರಿಕೆ ವೃದ್ಧಿಸುವ ಒಪ್ಪಂದ ದಾಖಲೆಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು.

ಕತಾರ್ ಅಮೀರ್ ಭೇಟಿ "ನಮ್ಮ ಬೆಳೆಯುತ್ತಿರುವ ಬಹುಮುಖ ಪಾಲುದಾರಿಕೆಗೆ ಮತ್ತಷ್ಟು ವೇಗ" ನೀಡುತ್ತದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.

ಪ್ರಧಾನಿ ಮೋದಿ ಮತ್ತು ಕತಾರ್ ಅಮೀರ್ ಹೈದರಾಬಾದ್ ಹೌಸ್‌ನಲ್ಲಿ ಹಲವಾರು ದ್ವಿಪಕ್ಷೀಯ ವಿಷಯಗಳನ್ನು ಒಳಗೊಂಡ ಮಾತುಕತೆ ನಡೆಸಿದರು.

ಭಾರತ ಮತ್ತು ಕತಾರ್ ನಡುವೆ ದ್ವಿಮುಖ ತೆರಿಗೆಯನ್ನು ತಪ್ಪಿಸುವ ಮತ್ತು ಆದಾಯದ ಮೇಲಿನ ತೆರಿಗೆಗೆ ಸಂಬಂಧಿಸಿದಂತೆ ಆರ್ಥಿಕ ವಂಚನೆಯನ್ನು ತಡೆಗಟ್ಟುವ ಪರಿಷ್ಕೃತ ಒಪ್ಪಂದವನ್ನು ಸಹ ಈ ವೇಳೆ ವಿನಿಮಯ ಮಾಡಿಕೊಳ್ಳಲಾಯಿತು.

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಖುದ್ದು ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್‌ನ ಅಮೀರ್ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರನ್ನು ಬರಮಾಡಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್