ಪ್ರಧಾನಿ ಮೋದಿ - ಕತಾರ್ ಅಮೀರ್ 
ದೇಶ

ಕತಾರ್ ಅಮೀರ್ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ

ಇಂದು ದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಉಭಯ ನಾಯಕರ ನಿಯೋಗ ದ್ವಿಪಕ್ಷೀಯ ಮಾತುಕತೆ ನಡೆಸಿತು.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಪ್ರವಾಸದಲ್ಲಿರುವ ಕತಾರ್ ಅಮೀರ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರನ್ನು ಮಂಗಳವಾರ ದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಭೇಟಿ ಮಾಡಿ, ದ್ವಿಪಕ್ಷೀಯ ಮಾತುಕತೆ ನಡೆಸಿದರು.

ಇಂದು ದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಉಭಯ ನಾಯಕರ ನಿಯೋಗ ದ್ವಿಪಕ್ಷೀಯ ಮಾತುಕತೆ ನಡೆಸಿತು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವ ಎಸ್ ಜೈಶಂಕರ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಹಲವಾರು ಹಿರಿಯ ಸಚಿವರು ಭಾರತದ ನಿಯೋಗದಲ್ಲಿದ್ದರು.

ಕತಾರ್ ನಿಯೋಗದ ನೇತೃತ್ವವನ್ನು ಕತಾರ್ ಅಮೀರ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರು ವಹಿಸಿದ್ದರು.

ಇಂದು ಬೆಳಗ್ಗೆ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಕತಾರ್ ಅಮೀರ್ ಅವರಿಗೆ ಗಾರ್ಡ್ ಆಫ್ ಹಾನರ್ ಮತ್ತು ವಿದ್ಯುಕ್ತ ಸ್ವಾಗತ ನೀಡಲಾಯಿತು.

ಕತಾರ್ ಅಮೀರ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಹಾಗೂ ಹಿರಿಯ ಸಚಿವರು ಸ್ವಾಗತಿಸಿದರು.

ಕತಾರ್‌ನ ಅಮೀರ್ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಸೋಮವಾರ ದೆಹಲಿಗೆ ಆಗಮಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಖುದ್ದು ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್‌ನ ಅಮೀರ್ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರನ್ನು ಬರಮಾಡಿಕೊಂಡರು.

ಪ್ರಧಾನಿ ಮೋದಿ ಅವರ ಆಹ್ವಾನದ ಮೇರೆಗೆ ಕತಾರ್ ಅಮೀರ್ ಭಾರತಕ್ಕೆ ಎರಡು ದಿನಗಳ ಭೇಟಿ ನೀಡಿದ್ದಾರೆ. ಇದು ಕತಾರ್ ಅಮೀರ್ ಭಾರತಕ್ಕೆ ನೀಡುತ್ತಿರುವ ಎರಡನೇ ಭೇಟಿಯಾಗಿದೆ. ಅವರು ಈ ಹಿಂದೆ ಮಾರ್ಚ್ 2015ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT