ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ದೆಹಲಿಯ ನೂತನ ಸಿಎಂ ಆಗಿ ರೇಖಾ ಗುಪ್ತಾ ಆಯ್ಕೆ, ಪರ್ವೇಶ್ ಡಿಸಿಎಂ; ನಾಳೆ ಪ್ರಮಾಣವಚನ ಸ್ವೀಕಾರ

ಫೆಬ್ರವರಿ 5ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ 27 ವರ್ಷಗಳ ವನವಾಸ ಅಂತ್ಯಗೊಂಡಿತ್ತು.

ದೆಹಲಿಯ ನೂತನ ಸಿಎಂ ಆಗಿ ರೇಖಾ ಗುಪ್ತಾ, ಡಿಸಿಎಂ ಆಗಿ ಪರ್ವೇಶ್ ಆಯ್ಕೆ — TNIE
Vishwanath S
Updated On : 19 Feb 2025, 8:22 pm

ನವದೆಹಲಿ: ರೇಖಾ ಗುಪ್ತಾ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಫೆಬ್ರವರಿ 5ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ 27 ವರ್ಷಗಳ ವನವಾಸ ಅಂತ್ಯಗೊಂಡಿತ್ತು. ದೆಹಲಿ ವಿಧಾನಸಭೆಯ ಚುನಾವಣೆಯ ಫಲಿತಾಂಶ ಬಂದ 11 ದಿನಗಳ ಬಳಿಕ ಸಿಎಂ ಹೆಸರನ್ನು ಬಿಜೆಪಿ ಘೋಷಿಸಿದೆ.

ಪ್ರಸ್ತುತ ಭಾರತೀಯ ಜನತಾ ಪಕ್ಷ ಆಳುತ್ತಿರುವ ರಾಜ್ಯಗಳಲ್ಲಿ ಏಕೈಕ ಮಹಿಳಾ ಮುಖ್ಯಮಂತ್ರಿಯಾಗಿರುವ ರೇಖಾ ಗುಪ್ತಾ, ದೆಹಲಿ ಚುನಾವಣೆಯಲ್ಲಿ ಶಾಲಿಮಾರ್ ಬಾಗ್ ವಿಧಾನಸಭಾ ಕ್ಷೇತ್ರದಿಂದ 29,595 ಮತಗಳ ಅಂತರದಿಂದ ಗೆದ್ದಿದ್ದರು. ಮೊದಲ ಬಾರಿ ಶಾಸಕಿಯಾಗಿರುವ 50 ವರ್ಷದ ರೇಖಾ ಗುಪ್ತಾ ಅವರು ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರಾಗಿದ್ದರು.

ನವದೆಹಲಿ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಿದ್ದ ಪರ್ವೇಶ್ ವರ್ಮಾ ಉಪಮುಖ್ಯಮಂತ್ರಿಯಾಗಲಿದ್ದಾರೆ. ನಿಯೋಜಿತ ಮುಖ್ಯಮಂತ್ರಿಗಳು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರನ್ನು ರಾಜಭವನದಲ್ಲಿ ಭೇಟಿಯಾಗಿ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ದೆಹಲಿಯ ನೂತನ ಸಿಎಂ ಮತ್ತು ಅವರ ಸಚಿವ ಸಂಪುಟ ಗುರುವಾರ ಪ್ರತಿಷ್ಠಿತ ರಾಮಲೀಲಾ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದೆ.

Advertisement

Advertisement

ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ಪದಗ್ರಹಣ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಅವರ ಸಂಪುಟ ಸಹೋದ್ಯೋಗಿಗಳು ಮತ್ತು ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ಮುಖ್ಯಮಂತ್ರಿಗಳು ಸೇರಿದಂತೆ ಸುಮಾರು 50,000 ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಕೇಸರಿ ಪಕ್ಷವು 70 ಸದಸ್ಯರ ವಿಧಾನಸಭೆಯಲ್ಲಿ 48 ಸ್ಥಾನಗಳನ್ನು ಗೆಲ್ಲುವ ಮೂಲಕ ಆಮ್ ಆದ್ಮಿ ಪಕ್ಷದ (ಎಎಪಿ) ದಶಕದ ಆಡಳಿತವನ್ನು ಕೊನೆಗೊಳಿಸಿತು. ಆಮ್ ಆದ್ಮಿ ಪಕ್ಷವು ಕೇವಲ 22 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಯಿತು. ಅರವಿಂದ್ ಕೇಜ್ರಿವಾಲ್ ಅವರು ನವದೆಹಲಿ ಕ್ಷೇತ್ರ ಮತ್ತು ಮನೀಶ್ ಸಿಸೋಡಿಯಾ ಅವರು ಜಂಗ್ಪುರದಿಂದ ಸೋತಿದ್ದರು.

Also Read

ದೆಹಲಿ ನೂತನ ಸಿಎಂ ಆಯ್ಕೆಗೆ ವೀಕ್ಷಕರಾಗಿ ರವಿಶಂಕರ್ ಪ್ರಸಾದ್, ಒಪಿ ಧಂಕರ್ ನೇಮಕ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments