ಪ್ರಧಾನಿ ಮೋದಿ ಭೇಟಿ ಮಾಡಿದ ರಿಷಿ ಸುನಕ್ ಹಾಗೂ ಅವರ ಕುಟುಂಬ  
ದೇಶ

'ರಿಷಿ ಸುನಕ್ ಭಾರತದ ಉತ್ತಮ ಸ್ನೇಹಿತ': ಕುಟುಂಬಸ್ಥರೊಂದಿಗೆ ಮೋದಿ ಭೇಟಿ ಮಾಡಿದ ಇಂಗ್ಲೆಂಡ್ ಮಾಜಿ ಪ್ರಧಾನಿ

ರಿಷಿ ಸುನಕ್ ಭಾರತದ ಉತ್ತಮ ಸ್ನೇಹಿತ, ಭಾರತ-ಯುಕೆ ಸಂಬಂಧಗಳ ಬಗ್ಗೆ ಅವರು ಉತ್ಸುಕರಾಗಿದ್ದಾರೆ ಎಂದು ಪ್ರಧಾನಿ ಮೋದಿ ಭೇಟಿ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ನವದೆಹಲಿ: ಇಂಗ್ಲೆಂಡ್ ಮಾಜಿ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಕುಟುಂಬವು ನಿನ್ನೆ ಮಂಗಳವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿತು. ಉಭಯ ನಾಯಕರು ಹಲವು ವಿಷಯಗಳ ಕುರಿತು ಮಾತುಕತೆ ನಡೆಸಿದ್ದಾರೆ.

ರಿಷಿ ಸುನಕ್ ಭಾರತದ ಉತ್ತಮ ಸ್ನೇಹಿತ, ಭಾರತ-ಯುಕೆ ಸಂಬಂಧಗಳ ಬಗ್ಗೆ ಅವರು ಉತ್ಸುಕರಾಗಿದ್ದಾರೆ ಎಂದು ಪ್ರಧಾನಿ ಮೋದಿ ಭೇಟಿ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಇಂಗ್ಲೆಂಡ್ ಮಾಜಿ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಕುಟುಂಬವನ್ನು ಭೇಟಿ ಮಾಡಿದ್ದು ಸಂತೋಷವಾಯಿತು. ನಾವು ಅನೇಕ ವಿಷಯಗಳ ಕುರಿತು ಮಾತುಕತೆ ನಡೆಸಿದ್ದೇವೆ. ಸುನಕ್ ಅವರು ಭಾರತದ ಉತ್ತಮ ಸ್ನೇಹಿತ. ಭಾರತ-ಯುಕೆ ಸಂಬಂಧ ಮತ್ತಷ್ಟು ಗಟ್ಟಿಯಾಗಲು ಅವರು ಉತ್ಸುಕರಾಗಿದ್ದಾರೆ ಎಂದು ಪ್ರಧಾನಿ ಹೇಳಿದ್ದಾರೆ.

ಲೋಕಸಭೆಯ ಪ್ರಧಾನ ಕಾರ್ಯದರ್ಶಿ ಉತ್ಪಲ್ ಕುಮಾರ್ ಸಿಂಗ್ ಅವರು ಸುನಕ್ ಮತ್ತು ಅವರ ಕುಟುಂಬವನ್ನು ಸ್ವಾಗತಿಸಿದರು. ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ ಪಿ ಸಿ ಮೋದಿ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ತಮ್ಮ ಭೇಟಿಯ ಸಮಯದಲ್ಲಿ ಸುನಕ್ ಕುಟುಂಬವು ಸಂಸತ್ ಭವನವನ್ನು ವೀಕ್ಷಿಸಿದರು. ಅದರ ವಾಸ್ತುಶಿಲ್ಪದ ಭವ್ಯತೆಯನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಗ್ಯಾಲರಿಗಳು, ಕೊಠಡಿಗಳು, ಸಂವಿಧಾನ ಮಂಟಪ ಮತ್ತು ಸಂವಿಧಾನ್ ಸದನದಂತಹ ಸ್ಥಳಗಳಿಗೆ ಭೇಟಿ ನೀಡಿದರು.

ಪ್ರಸ್ತುತ ಭಾರತ ಭೇಟಿಯಲ್ಲಿರುವ ರಿಷಿ ಸುನಕ್ ಅವರು ಸೋಮವಾರ ದೆಹಲಿಯಲ್ಲಿ ವಿದೇಶಾಂಗ ಸಚಿವ (EAM) ಎಸ್. ಜೈಶಂಕರ್ ಅವರನ್ನು ಭೇಟಿ ಮಾಡಿದ್ದರು.

ಭಾರತದ ಪಂಜಾಬ್ ಮೂಲದ ಇಂಗ್ಲೆಂಡ್ ನ ಹ್ಯಾಂಪ್ಶೈರ್ ನ ಪೋಷಕರಿಗೆ ಜನಿಸಿದ ರಿಷಿ ಸುನಕ್, 2022 ರಿಂದ 2024 ರವರೆಗೆ ಯುಕೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಮೊದಲ ಭಾರತೀಯ ಮೂಲದ ವ್ಯಕ್ತಿಯಾಗಿದ್ದಾರೆ. ಭಾರತದ ಬಗ್ಗೆ ಪ್ರೀತಿ, ಗೌರವವನ್ನು ಹಿಂದಿನಿಂದಲೂ ಹೊಂದಿರುವ ಅವರು ಭಾರತವನ್ನು ದ್ವಿಪಕ್ಷೀಯ ಸಹಕಾರದ ಎಲ್ಲಾ ಕ್ಷೇತ್ರಗಳಲ್ಲಿ ಇಂಗ್ಲೆಂಡಿನ ಅವಶ್ಯಕ ಪಾಲುದಾರ ಎಂದು ಬಣ್ಣಿಸಿದ್ದಾರೆ.

ರಿಷಿ ಸುನಕ್ ಅವರು ಇತ್ತೀಚೆಗೆ ಅಂದರೆ ಮೊನ್ನೆ 15ರಂದು ತಮ್ಮ ಕುಟುಂಬಸ್ಥರೊಂದಿಗೆ ತಾಜ್ ಮಹಲ್ ಗೆ ಭೇಟಿ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

SCROLL FOR NEXT