ಎನ್ಐಎ 
ದೇಶ

ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ಸೋರಿಕೆ: ಕಾರವಾರದಲ್ಲಿ ಇಬ್ಬರು ಸೇರಿ ಮೂವರ ಬಂಧನ

ಕಾರವಾರ ನೌಕಾ ನೆಲೆ ಮತ್ತು ಕೊಚ್ಚಿ ನೌಕಾ ನೆಲೆಯಲ್ಲಿರುವ ಭಾರತೀಯ ರಕ್ಷಣಾ ಸಂಸ್ಥೆಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಬಂಧಿತ ಆರೋಪಿಗಳು ಹಂಚಿಕೊಳ್ಳುತ್ತಿದ್ದರು ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ(NIA) ತಿಳಿಸಿದೆ.

ನವದೆಹಲಿ: ಪಾಕಿಸ್ತಾನ ಮೂಲದ ಗುಪ್ತಚರ ಅಧಿಕಾರಿಗಳಿಗೆ ರಕ್ಷಣಾ ಇಲಾಖೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ ಮೂವರನ್ನು NIA ಬಂಧಿಸಿದೆ.

ಕಾರವಾರ ನೌಕಾ ನೆಲೆ ಮತ್ತು ಕೊಚ್ಚಿ ನೌಕಾ ನೆಲೆಯಲ್ಲಿರುವ ಭಾರತೀಯ ರಕ್ಷಣಾ ಸಂಸ್ಥೆಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಬಂಧಿತ ಆರೋಪಿಗಳು ಹಂಚಿಕೊಳ್ಳುತ್ತಿದ್ದರು ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಪ್ರಕಟಣೆಯಲ್ಲಿ ತಿಳಿಸಿದೆ.

ವೇತನ್ ಲಕ್ಷ್ಮಣ್ ತಂಡೇಲ್ ಮತ್ತು ಅಕ್ಷಯ್ ರವಿ ನಾಯಕ್ ಅವರನ್ನು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ಬಂಧಿಸಲಾಗಿದ್ದರೆ, ಅಭಿಲಾಷ್ ಪಿಎ ಅವರನ್ನು ಕೇರಳದ ಕೊಚ್ಚಿಯಿಂದ ಬಂಧಿಸಲಾಗಿದೆ ಎಂದು ಎನ್ಐಎ ತಿಳಿಸಿದೆ.

ಮಂಗಳವಾರ ಸ್ಥಳೀಯ ಪೊಲೀಸರ ನೆರವಿನೊಂದಿಗೆ ಬಂಧಿಸಲಾದ ಈ ಮೂವರು ಆರೋಪಿಗಳು ಸಾಮಾಜಿಕ ಮಾಧ್ಯಮಗಳ ಮೂಲಕ ಪಾಕಿಸ್ತಾನ ಗುಪ್ತಚರ ಕಾರ್ಯಾಚರಣೆ(PIO) ಗಳೊಂದಿಗೆ ಸಂಪರ್ಕದಲ್ಲಿ ಇರುವುದು ಕಂಡುಬಂದಿದೆ ಎಂದು ಎನ್ಐಎ ಹೇಳಿದೆ.

ಎನ್ಐಎ ತನಿಖೆಯ ಪ್ರಕಾರ, ಕಾರವಾರ ನೌಕಾ ನೆಲೆ ಮತ್ತು ಕೊಚ್ಚಿ ನೌಕಾ ನೆಲೆಯಲ್ಲಿರುವ ಭಾರತೀಯ ರಕ್ಷಣಾ ಸಂಸ್ಥೆಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದರು ಮತ್ತು ಈ ಮಾಹಿತಿಗಾಗಿ ಅವರು ಪಿಐಒಗಳಿಂದ ಹಣ ಪಡೆಯುತ್ತಿದ್ದರು.

ಈ ಮೂವರು ಸೇರಿದಂತೆ ಪ್ರಕರಣದಲ್ಲಿ ಇದುವರೆಗೆ ಒಟ್ಟು ಎಂಟು ಜನರನ್ನು ಬಂಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಎನ್ಐಎ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ