ಸಾಂದರ್ಭಿಕ ಚಿತ್ರ 
ದೇಶ

ಮಧ್ಯ ಪ್ರದೇಶ: ಪೊಲೀಸ್ ಎನ್‌ಕೌಂಟರ್‌ಗೆ ಮೂವರು ಮಹಿಳಾ ನಕ್ಸಲರು ಬಲಿ

ಅರಣ್ಯ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ರಾಜ್ಯ ಪೊಲೀಸರ ನಕ್ಸಲ್ ವಿರೋಧಿ ಪಡೆ ಮತ್ತು ಸ್ಥಳೀಯ ಪೊಲೀಸ್ ತಂಡಗಳು ಭಾಗವಹಿಸಿದ್ದವು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ದಬಾರ್ ಅವರು ಹೇಳಿದ್ದಾರೆ.

ಬಾಲಾಘಾಟ್: ಮಧ್ಯಪ್ರದೇಶದ ಬಾಲಾಘಾಟ್ ಜಿಲ್ಲೆಯಲ್ಲಿ ಬುಧವಾರ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮಹಿಳಾ ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಛತ್ತೀಸ್‌ಗಢ ಗಡಿ ಬಳಿಯ ಅರಣ್ಯ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ರಾಜ್ಯ ಪೊಲೀಸರ ನಕ್ಸಲ್ ವಿರೋಧಿ ಪಡೆ ಮತ್ತು ಸ್ಥಳೀಯ ಪೊಲೀಸ್ ತಂಡಗಳು ಭಾಗವಹಿಸಿದ್ದವು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ದಬಾರ್ ಅವರು ಹೇಳಿದ್ದಾರೆ.

ಜಿಲ್ಲಾ ಕೇಂದ್ರದಿಂದ ಸುಮಾರು 90 ಕಿ.ಮೀ ದೂರದಲ್ಲಿರುವ ಸ್ಥಳದಲ್ಲಿ ಇಂದು ಬೆಳಗ್ಗೆ ಗುಂಡಿನ ಚಕಮಕಿ ನಡೆದಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ದಬಾರ್ ಅವರು ಪಿಟಿಐಗೆ ತಿಳಿಸಿದ್ದಾರೆ.

"ಗಾರ್ಹಿ ಪೊಲೀಸ್ ಠಾಣೆ ಪ್ರದೇಶದ ಸುಪ್ಖರ್ ಅರಣ್ಯ ಶ್ರೇಣಿಯ ರೊಂಡಾ ಅರಣ್ಯ ಶಿಬಿರದ ಬಳಿ ನಡೆದ ಎನ್‌ಕೌಂಟರ್‌ನಲ್ಲಿ ಹಾಕ್ ಪಡೆ ಮತ್ತು ಪೊಲೀಸರು ಮೂವರು ಹಾರ್ಡ್‌ಕೋರ್ ನಕ್ಸಲರನ್ನು ಹೊಡೆದುರುಳಿಸಿದ್ದಾರೆ" ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ನಕ್ಸಲರಿಂದ ಒಂದು ಐಎನ್‌ಎಸ್‌ಎಎಸ್ ರೈಫಲ್, ಒಂದು ಸೆಲ್ಫ್-ಲೋಡಿಂಗ್ ರೈಫಲ್(ಎಸ್‌ಎಲ್‌ಆರ್) ಮತ್ತು .303 ರೈಫಲ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಅಗತ್ಯ ದೈನಂದಿನ ಬಳಕೆಯ ವಸ್ತುಗಳನ್ನು ಸಹ ವಶಪಡಿಸಿಕೊಂಡಿದ್ದಾರೆ. ಕೆಲವು ನಕ್ಸಲರು ಎನ್‌ಕೌಂಟರ್‌ನಲ್ಲಿ ಗಾಯಗೊಂಡಿದ್ದಾರೆ. ಆದರೆ ಅವರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಪ್ಪಿಸಿಕೊಂಡ ನಕ್ಸಲರನ್ನು ಪತ್ತೆಹಚ್ಚಲು ಹನ್ನೆರಡು ಪೊಲೀಸ್ ತಂಡಗಳು ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ