ದೆಹಲಿ ಸಂಪುಟ ಸಭೆ  online desk
ದೇಶ

ದೆಹಲಿ ಸರ್ಕಾರದ ಮೊದಲ ಸಂಪುಟ ಸಭೆ: ಆಯುಷ್ಮಾನ್ ಭಾರತ್ ಯೋಜನೆ ಸೇರಿದಂತೆ ಪ್ರಮುಖ ನಿರ್ಣಯ ಅಂಗೀಕಾರ

ಭಾರತೀಯ ಜನತಾ ಪಕ್ಷದ ನೇತೃತ್ವದ ದೆಹಲಿ ಸಚಿವ ಸಂಪುಟ ತನ್ನ ಮೊದಲ ಸಭೆಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯ ಅನುಷ್ಠಾನಕ್ಕೆ ಅನುಮೋದನೆ ನೀಡಿದೆ ಎಂದು ಸಚಿವ ಪಂಕಜ್ ಸಿಂಗ್ ಗುರುವಾರ ತಿಳಿಸಿದ್ದಾರೆ.

ದೆಹಲಿ: ದೆಹಲಿಯಲ್ಲಿ ಇಂದಿನಿಂದ ಅಸ್ತಿತ್ವಕ್ಕೆ ಬಂದಿರುವ ಬಿಜೆಪಿ ನೇತೃತ್ವದ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ಇಂದು (ಫೆ.20) ರಂದು ಸಂಜೆ ನಡೆದಿದೆ.

ಭಾರತೀಯ ಜನತಾ ಪಕ್ಷದ ನೇತೃತ್ವದ ದೆಹಲಿ ಸಚಿವ ಸಂಪುಟ ತನ್ನ ಮೊದಲ ಸಭೆಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯ ಅನುಷ್ಠಾನಕ್ಕೆ ಅನುಮೋದನೆ ನೀಡಿದೆ ಎಂದು ಸಚಿವ ಪಂಕಜ್ ಸಿಂಗ್ ಗುರುವಾರ ತಿಳಿಸಿದ್ದಾರೆ.

ಇದೇ ವೇಳೆ ದೆಹಲಿ ಸರ್ಕಾರದ ಖಾತೆಗಳನ್ನು ಸಂಪುಟ ಸಭೆಯಲ್ಲಿ ಹಂಚಿಕೆ ಮಾಡಲಾಗಿದೆ. ಮುಖ್ಯಮಂತ್ರಿ ರೇಖಾ ಗುಪ್ತಾ ಹಣಕಾಸು, ಸೇವೆಗಳು ಮತ್ತು ಜಾಗೃತ ಖಾತೆಯನ್ನು ತಮ್ಮ ಬಳಿ ಇರಿಸಿಕೊಂಡಿದ್ದಾರೆ. ಪರ್ವೇಶ್ ವರ್ಮಾ ಅವರಿಗೆ ಲೋಕೋಪಯೋಗಿ ಇಲಾಖೆ, ನೀರು, ಶಾಸಕಾಂಗ ವ್ಯವಹಾರಗಳು, ನೀರಾವರಿ ಮತ್ತು ಪ್ರವಾಹ ನಿಯಂತ್ರಣ ಖಾತೆ ನೀಡಲಾಗಿದೆ.

ಆಶಿಶ್ ಸೂದ್ ಅವರಿಗೆ ಗೃಹ, ವಿದ್ಯುತ್, ನಗರಾಭಿವೃದ್ಧಿ ಮತ್ತು ಶಿಕ್ಷಣ ಖಾತೆ ನೀಡಲಾಗಿದ್ದರೆ, ಮಂಜಿಂದರ್ ಸಿರ್ಸಾ ಅವರಿಗೆ ಕೈಗಾರಿಕೆಗಳು ಮತ್ತು ಪರಿಸರ ಖಾತೆ ನೀಡಲಾಗಿದೆ.

ದೆಹಲಿ ವಿಧಾನಸಭೆಯ ಮೊದಲ ಸದನ ಸಭೆಯಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತಾ 14 ಸಿಎಜಿ ವರದಿಗಳನ್ನು ಮಂಡಿಸುವುದಾಗಿ ಘೋಷಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!