ರಜನಿಕಾಂತ್, ಶಂಕರ್ ಸಾಂದರ್ಭಿಕ ಚಿತ್ರ 
ದೇಶ

ಎಂಥಿರನ್ ನಿರ್ದೇಶಕ ಎಸ್.ಶಂಕರ್ ಗೆ ಇಡಿ ಶಾಕ್: 10 ಕೋಟಿ ರೂ ಆಸ್ತಿ ವಶಕ್ಕೆ!

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಶಂಕರಿಗೆ ಅವರಿಗೆ ಸೇರಿದ ರೂ.10 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಾರಿ ನಿರ್ದೇಶನಾಲಯ ಗುರುವಾರ ತಿಳಿಸಿದೆ.

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಐಶ್ವರ್ಯ ರೈ ಅಭಿನಯದ 'ಎಂಥಿರನ್' ನಿರ್ದೇಶಕ ಎಸ್. ಶಂಕರ್ ಗೆ ಇಡಿ ಶಾಕ್ ನೀಡಿದೆ. 2010 ರಲ್ಲಿ ತೆರೆ ಕಂಡಿದ್ದ ಈ ಚಿತ್ರ ಕೃತಿಚೌರ್ಯ ಮತ್ತು ಹಕ್ಕುಸ್ವಾಮ್ಯ ಉಲ್ಲಂಘನೆಯ ಆರೋಪಗಳನ್ನು ಎದುರಿಸಿತ್ತು.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಶಂಕರಿಗೆ ಅವರಿಗೆ ಸೇರಿದ ರೂ.10 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಾರಿ ನಿರ್ದೇಶನಾಲಯ ಗುರುವಾರ ತಿಳಿಸಿದೆ. ದೇಶದಲ್ಲಿ ಇದೇ ಮೊದಲ ಬಾರಿಗೆ ಸಿನಿಮಾ ಕೃತಿಚೌರ್ಯ ಅಥವಾ ಹಕ್ಕು ಸ್ವಾಮ್ಯ ಉಲ್ಲಂಘನೆ ಆಧಾರದ ಮೇಲೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಆಸ್ತಿ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿರ್ದೇಶಕ ಎಸ್ ಶಂಕರ್ ಅವರ ಮೂರು ಸ್ಥಿರಾಸ್ತಿಗಳನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (PMLA) ವಶಕ್ಕೆ ಪಡೆದು ಫೆಬ್ರವರಿ 17 ರಂದು ತಾತ್ಕಾಲಿಕ ಆದೇಶ ಹೊರಡಿಸಲಾಗಿದೆ. ಈ ಆಸ್ತಿಗಳ ಒಟ್ಟು ಮೌಲ್ಯ 10.11 ಕೋಟಿ ರೂಪಾಯಿ ಎಂದು ED ಹೇಳಿಕೆಯಲ್ಲಿ ತಿಳಿಸಿದೆ.

ಮೇ 19, 2011 ರಂದು ಚೆನ್ನೈನ ಎಗ್ಮೋರ್ ನ್ಯಾಯಾಲಯದಲ್ಲಿ ಶಂಕರ್ ವಿರುದ್ಧ ಜಿಗುಬಾ ಎಂಬ ಶೀರ್ಷಿಕೆಯ ಕಥೆಯ ಲೇಖಕ ಆರೂರ್ ತಮಿಳುನಾಡನ್ ಅವರು ಸಲ್ಲಿಸಿದ ದೂರಿನಿಂದ ಹಣ ವರ್ಗಾವಣೆ ಪ್ರಕರಣ ಹೊರಗೆ ಬಂದಿತ್ತು. ಶಂಕರ್ ನಿರ್ದೇಶಿಸಿದ ತಮಿಳು ಚಲನಚಿತ್ರ ಎಂಥಿರನ್ (ರೋಬೋಟ್) ಕಥಾಹಂದರವನ್ನು ಜಿಗುಬಾದಿಂದ ನಕಲು ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

2010ರ ಬ್ಲಾಸ್ಟರ್ ಎಂಥಿರನ್ ಆ ಸಂದರ್ಭದಲ್ಲಿ ವಿಶ್ವದಾದ್ಯಂತ ರೂ.290 ಕೋಟಿ ಗಳಿಸಿತ್ತು. ಕಥೆ, ಚಿತ್ರಕಥೆ, ಸಂಭಾಷಣೆ,ನಿರ್ದೇಶನಕ್ಕಾಗಿ ಶಂಕರ್ ರೂ. 11.5 ಕೋಟಿ ಸಂಭಾವನೆ ಪಡೆದಿರುವುದು ತನಿಖೆಯಿಂದ ತಿಳಿದುಬಂದಿದೆ. ಅಲ್ಲದೇ ಅವರು ಹಕ್ಕುಸ್ವಾಮ್ಯ ಉಲ್ಲಂಘಿಸಿರುವುದಕ್ಕೆ ದಾಖಲೆಗಳು ಸಿಕ್ಕಿವೆ ಎಂದು ಇಡಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್