ಯುಜಿಸಿ ಕರಡು ನಿಯಮ 2025 ರ ವಿರುದ್ಧ ತಿರುವನಂತಪುರದಲ್ಲಿ ಆಯೋಜಿಸಲಾದ ರಾಷ್ಟ್ರೀಯ ಉನ್ನತ ಶಿಕ್ಷಣ ಸಮಾವೇಶವನ್ನು ಕೇರಳ ಮುಖ್ಯಮಂತ್ರಿ ಉದ್ಘಾಟಿಸಿದರು. 
ದೇಶ

UGC ಕರಡು ವಿರುದ್ಧ ಕರ್ನಾಟಕ ಸೇರಿ ದಕ್ಷಿಣದ ನಾಲ್ಕು ರಾಜ್ಯಗಳ ಜಂಟಿ ನಿರ್ಣಯ: ನಿಯಮ ಹಿಂತೆಗೆದುಕೊಳ್ಳಲು ಒತ್ತಾಯ

ಉನ್ನತ ಶಿಕ್ಷಣದ ಬಗ್ಗೆ ಕಾನೂನು ರಚಿಸುವಲ್ಲಿ ರಾಜ್ಯಗಳ ಅಧಿಕಾರವನ್ನು ನಿಯಮಗಳು ಉಲ್ಲಂಘಿಸುತ್ತವೆ ಮತ್ತು ಹೀಗಾಗಿ ದೇಶದ ಫೆಡರಲ್ ಅಡಿಪಾಯವನ್ನು ಹಾಳುಮಾಡುತ್ತವೆ ಎಂದು ಹೇಳಿದರು.

ತಿರುವನಂತಪುರ: ಬಿಜೆಪಿಯೇತರ ಆಡಳಿತವಿರುವ ದಕ್ಷಿಣ ಭಾರತದ ರಾಜ್ಯಗಳ ಸಚಿವರು ಭಾಗವಹಿಸಿದ್ದ ಕೇರಳ ಸರ್ಕಾರ ಪ್ರಾಯೋಜಿತ ಯುಜಿಸಿ ಕರಡು ನಿಯಮಗಳು, 2025 ರ ರಾಷ್ಟ್ರೀಯ ಸಮಾವೇಶದಲ್ಲಿ, ರಾಜ್ಯ ಸರ್ಕಾರಗಳ ಪಾತ್ರವನ್ನು ಕುಗ್ಗಿಸುವ ಮತ್ತು ಸಂವಿಧಾನದ ಒಕ್ಕೂಟ ಮನೋಭಾವಕ್ಕೆ ವಿರುದ್ಧವಾದ ನಿಯಮಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುವ 15 ಅಂಶಗಳ ನಿರ್ಣಯವನ್ನು ಅಂಗೀಕರಿಸಲಾಯಿತು.

ಸಮಾವೇಶವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಈ ನಿಯಮಗಳನ್ನು ಉನ್ನತ ಶಿಕ್ಷಣದಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ದುರ್ಬಲಗೊಳಿಸುವ, ಧಾರ್ಮಿಕ ಮತ್ತು ಕೋಮು ಸಿದ್ಧಾಂತಗಳನ್ನು ಉತ್ತೇಜಿಸುವವರ ನಿಯಂತ್ರಣದಲ್ಲಿ ವಲಯವನ್ನು ಇರಿಸುವ ಪ್ರಯತ್ನದ ಭಾಗವಾಗಿ ಮಾತ್ರ ಇದನ್ನು ನೋಡಬಹುದಾಗಿದೆ ಎಂದರು.

ಉನ್ನತ ಶಿಕ್ಷಣದ ಬಗ್ಗೆ ಕಾನೂನು ರಚಿಸುವಲ್ಲಿ ರಾಜ್ಯಗಳ ಅಧಿಕಾರವನ್ನು ನಿಯಮಗಳು ಉಲ್ಲಂಘಿಸುತ್ತವೆ ಮತ್ತು ಹೀಗಾಗಿ ದೇಶದ ಫೆಡರಲ್ ಅಡಿಪಾಯವನ್ನು ಹಾಳುಮಾಡುತ್ತವೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಮತ್ತು ಯುಜಿಸಿ ರಾಜ್ಯ ಸರ್ಕಾರಗಳನ್ನು ವಿಶ್ವವಿದ್ಯಾಲಯಗಳ ಆಡಳಿತದಿಂದ ಹೊರಗಿಡಲು ಪ್ರಯತ್ನಿಸುತ್ತಿವೆ. ರಾಜ್ಯ ಸರ್ಕಾರಗಳು ಜಾರಿಗೆ ತಂದ ಕಾನೂನುಗಳಿಂದ ಸ್ಥಾಪಿಸಲಾದ ಮತ್ತು ರಾಜ್ಯಗಳ ಹಣಕಾಸು ಮತ್ತು ಆಡಳಿತ ಸಂಪನ್ಮೂಲಗಳನ್ನು ಬಳಸಿಕೊಂಡು ನಡೆಸುವ ವಿಶ್ವವಿದ್ಯಾಲಯಗಳ ಮೇಲೆ ರಾಜ್ಯಗಳು ಯಾವುದೇ ನಿಜವಾದ ನಿಯಂತ್ರಣವನ್ನು ಹೊಂದಿರುವುದಿಲ್ಲ ಎಂಬುದು ಸತ್ಯಕ್ಕೆ ದೂರವಾದ ಮಾತು ಎಂದು ಹೇಳಿದರು.

ಸಮಾವೇಶವನ್ನು ಆಯೋಜಿಸುವಲ್ಲಿ ಸರ್ಕಾರದ ಪ್ರಯತ್ನಗಳನ್ನು ಶ್ಲಾಘಿಸಿದ ವಿರೋಧ ಪಕ್ಷದ ನಾಯಕ ವಿ ಡಿ ಸತೀಶನ್, ಯುಜಿಸಿ ತನ್ನ ಸಾಂವಿಧಾನಿಕ ಆದೇಶದೊಳಗೆ ಕಾರ್ಯನಿರ್ವಹಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉನ್ನತ ಶಿಕ್ಷಣ ಸಚಿವೆ ಆರ್ ಬಿಂದು, ಕರಡು ನಿಯಮಗಳು ಸಾಂವಿಧಾನಿಕ ನಿಬಂಧನೆಗಳನ್ನು ಉಲ್ಲಂಘಿಸುವುದಲ್ಲದೆ, ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಶೈಕ್ಷಣಿಕ ಗುಣಮಟ್ಟವನ್ನು ದುರ್ಬಲಗೊಳಿಸುತ್ತವೆ ಎಂದರು,

ತೆಲಂಗಾಣ ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಅವರು ಕರಡು ನಿಯಮಗಳು ರಾಜ್ಯಗಳನ್ನು ತಮ್ಮ ವಿಶ್ವವಿದ್ಯಾಲಯಗಳಲ್ಲಿ ಕೇವಲ ವೀಕ್ಷಕರನ್ನಾಗಿ ಮಾಡಿಬಿಟ್ಟಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಮತ್ತು ಯುಜಿಸಿಗಳ ನಿಯಮ ಉಲ್ಲಂಘನೆಗಳ ವಿರುದ್ಧ ಇದೇ ರೀತಿಯ ಅಭಿಪ್ರಾಯಗಳನ್ನು ಕ್ರಮವಾಗಿ ಕರ್ನಾಟಕ ಮತ್ತು ತಮಿಳುನಾಡಿನ ಉನ್ನತ ಶಿಕ್ಷಣ ಸಚಿವರಾದ ಎಂ ಸಿ ಸುಧಾಕರ್ ಮತ್ತು ಗೋವಿ ಚೆಝಿಯಾನ್ ಅವರು ಕೂಡ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT