ಸಾವು (ಸಾಂಕೇತಿಕ ಚಿತ್ರ) online desk
ದೇಶ

ಹೈದಾರಾಬಾದ್: ಅಪಾರ್ಟ್‌ಮೆಂಟ್ ಲಿಫ್ಟ್ ನಲ್ಲಿ ಸಿಲುಕಿ 6 ವರ್ಷದ ಬಾಲಕ ಸಾವು

ಬಾಲಕ ತನ್ನ ಅಜ್ಜನೊಂದಿಗೆ ಅಪಾರ್ಟ್‌ಮೆಂಟ್ ಸಂಕೀರ್ಣದಲ್ಲಿರುವ ಸಂಬಂಧಿಕರನ್ನು ಭೇಟಿ ಮಾಡಲು ಬಂದಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಹೈದಾರಾಬಾದ್: ಅಪಾರ್ಟ್‌ಮೆಂಟ್ ಸಂಕೀರ್ಣವೊಂದರಲ್ಲಿ ಲಿಫ್ಟ್ ಶಾಫ್ಟ್ ಮತ್ತು ಗೋಡೆಯ ನಡುವೆ ಸಿಲುಕಿ ಆರು ವರ್ಷದ ಬಾಲಕ ಮೃತಪಟ್ಟಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮಸಾಬ್ ಟ್ಯಾಂಕ್ ಪ್ರದೇಶದಲ್ಲಿರುವ ಅಪಾರ್ಟ್‌ಮೆಂಟ್ ನಲ್ಲಿ ಶುಕ್ರವಾರ ಈ ಘಟನೆ ನಡೆದಿದ್ದು, ಲಿಫ್ಟ್ ಬಾಗಿಲು ಮತ್ತು ಗೋಡೆಯ ನಡುವಿನ ಅಂತರಕ್ಕೆ ಜಾರಿಬಿದ್ದಿದ್ದ ಬಾಲಕ ಎರಡು ಗಂಟೆಗಳಿಗೂ ಹೆಚ್ಚು ಕಾಲ ಮೊದಲ ಮಹಡಿಯ ಬಳಿ ಸಿಲುಕಿಕೊಂಡಿದ್ದನು.

ಹೈದರಾಬಾದ್ ವಿಪತ್ತು ಪ್ರತಿಕ್ರಿಯೆ ಮತ್ತು ಆಸ್ತಿ ಸಂರಕ್ಷಣಾ ಸಂಸ್ಥೆ(ಹೈಡ್ರಾ) ಹಾಗೂ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಗ್ಯಾಸ್ ಕಟ್ಟರ್‌ಗಳನ್ನು ಬಳಸಿ ಲಿಫ್ಟ್ ಫ್ರೇಮ್ ಮತ್ತು ನೆಲದ ಸ್ಲ್ಯಾಬ್ ಅನ್ನು ಕತ್ತರಿಸಿ ಬಾಲಕನನ್ನು ರಕ್ಷಿಸಿ, ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದಾಗ್ಯೂ, ಮರಣೋತ್ತರ ಪರೀಕ್ಷೆಯ ನಂತರ ಸಾವಿನ ನಿಖರವಾದ ಕಾರಣವನ್ನು ನಿರ್ಧರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಎರಡು ಗಂಟೆಗಳಿಗೂ ಹೆಚ್ಚು ಕಾಲ ಲಿಫ್ಟ್ ಶಾಫ್ಟ್‌ನಲ್ಲಿ ಸಿಲುಕಿಕೊಂಡಿದ್ದ ಮಗು ಉಸಿರುಗಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಬಾಲಕ ತನ್ನ ಅಜ್ಜನೊಂದಿಗೆ ಅಪಾರ್ಟ್ಮೆಂಟ್ ಸಂಕೀರ್ಣದಲ್ಲಿರುವ ಸಂಬಂಧಿಕರನ್ನು ಭೇಟಿ ಮಾಡಲು ಬಂದಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಲಿಫ್ಟ್ ನ ಗ್ರಿಲ್ ಬಾಗಿಲು ಮುಚ್ಚುವ ಮೊದಲೇ ಲಿಫ್ಟ್ ಮೇಲೆ ಏರಲು ಪ್ರಾರಂಭಿಸಿತು. ಈ ವೇಳೆ ಬಾಲಕ ಹೊರಬರಲು ಪ್ರಯತ್ನಿಸಿದಾಗ ಲಿಫ್ಟ್ ಬಾಗಿಲು ಮತ್ತು ಗೋಡೆಯ ನಡುವೆ ಸಿಲುಕಿಕೊಂಡನು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ