ಮಹಾಕುಂಭ ಮೇಳದಲ್ಲಿ ಭಕ್ತರಿಂದ ಸಂಗಮದಲ್ಲಿ ಪವಿತ್ರ ಸ್ನಾನ 
ದೇಶ

ಮಹಾಕುಂಭಮೇಳದಲ್ಲಿ ಇದುವರೆಗೆ 60 ಕೋಟಿ ಭಕ್ತರಿಂದ ಪವಿತ್ರ ಸ್ನಾನ: ಯುಪಿ ಸರ್ಕಾರ

ಜನವರಿ 13 ರಂದು ಪ್ರಾರಂಭವಾದ ಕುಂಭಮೇಳಕ್ಕೆ ಫೆಬ್ರವರಿ 26 ರಂದು ಮಹಾ ಶಿವರಾತ್ರಿಯಂದು ತೆರೆ ಬೀಳಲಿದೆ.

ಲಖನೌ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಇದುವರೆಗೆ 60 ಕೋಟಿ ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶ ಸರ್ಕಾರ ಶನಿವಾರ ತಿಳಿಸಿದೆ.

ಜನವರಿ 13 ರಂದು ಪ್ರಾರಂಭವಾದ ಕುಂಭಮೇಳಕ್ಕೆ ಫೆಬ್ರವರಿ 26 ರಂದು ಮಹಾ ಶಿವರಾತ್ರಿಯಂದು ತೆರೆ ಬೀಳಲಿದೆ. ಈ ಹಿನ್ನೆಲೆಯಲ್ಲಿ ಪ್ರಯಾಗರಾಜ್​ ಗೆ ಭಕ್ತರ ದಂಡೇ ಹರಿದು ಬರುತ್ತಿದೆ. 144 ವರ್ಷಗಳಿಗೊಮ್ಮೆ ನಡೆಯುವ ಕುಂಭ ಮೇಳೆ ಕಣ್ತುಂಬಿಕೊಳ್ಳಬೇಕು ಎಂಬುದು ಬಹುತೇಕರ ಆಶಯ.

ಭಾರತದ 110 ಕೋಟಿ ಸನಾತನ ಅನುಯಾಯಿಗಳಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ಪವಿತ್ರ ಸಂಗಮದಲ್ಲಿ ಸ್ನಾನ ಮಾಡಿದ್ದಾರೆ ಮತ್ತು ಫೆಬ್ರವರಿ 26 ರಂದು ನಡೆಯುವ ಅಂತಿಮ 'ಅಮೃತ ಸ್ನಾನ'ದ ವೇಳೆಗೆ ಈ ಸಂಖ್ಯೆ 65 ಕೋಟಿಯನ್ನು ಮೀರುವ ನಿರೀಕ್ಷೆಯಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಈ ಮಹಾ ಕುಂಭವು ಯಾವುದೇ ಧಾರ್ಮಿಕ, ಸಾಂಸ್ಕೃತಿಕ ಅಥವಾ ಸಾಮಾಜಿಕ ಕಾರ್ಯಕ್ರಮದಲ್ಲಿ ಅತಿ ಹೆಚ್ಚು ಜನರ ಭಾಗವಹಿಸುವಿಕೆಯನ್ನು ದಾಖಲಿಸಿದೆ ಎಂದು ಉತ್ತರ ಪ್ರದೇಶ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್