ನಿರ್ಮಾಣ ಹಂತದ ಎಸ್ ಎಲ್ ಬಿಸಿ ಸುರಂಗ ಮಾರ್ಗದ ಚಿತ್ರ 
ದೇಶ

ತೆಲಂಗಾಣ: ನಿರ್ಮಾಣ ಹಂತದ ಸುರಂಗ ಕುಸಿತ, 6 ಕಾರ್ಮಿಕರು ಸಿಲುಕಿರುವ ಶಂಕೆ!

ಕಂಪನಿ ನೀಡಿದ ಮಾಹಿತಿಯ ಪ್ರಕಾರ ಆರರಿಂದ ಎಂಟು ಕಾರ್ಮಿಕರು ಸಿಲುಕಿರುವ ಸಾಧ್ಯತೆಯಿದೆ. ಕೆಲವು ಕಾರ್ಮಿಕರು ಕೆಲಸದ ಭಾಗವಾಗಿ 12-13 ಕಿ.ಮೀ ಒಳಗೆ ಹೋದಾಗ ಸುರಂಗದೊಳಗೆ ಮೇಲ್ಫಾವಣಿ ಕುಸಿದು ಈ ಘಟನೆ ಸಂಭವಿಸಿದೆ

ಹೈದರಾಬಾದ್: ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ) ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಶನಿವಾರ ಛಾವಣಿಯ ಒಂದು ಭಾಗ ಕುಸಿದು ಕನಿಷ್ಠ ಆರು ಕಾರ್ಮಿಕರು ಸಿಲುಕಿರುವ ಶಂಕೆ ಸಾಧ್ಯತೆಯಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ನಿರ್ಮಾಣ ಕಂಪನಿಯ ತಂಡ ಸುರಂಗದೊಳಗೆ ಹೋಗಿದ್ದು, ಪರಿಶೀಲಿಸುತ್ತಿದೆ ಎಂದು ಅವರು ಹೇಳಿದರು.

ಕಂಪನಿ ನೀಡಿದ ಮಾಹಿತಿಯ ಪ್ರಕಾರ ಆರರಿಂದ ಎಂಟು ಕಾರ್ಮಿಕರು ಸಿಲುಕಿರುವ ಸಾಧ್ಯತೆಯಿದೆ. ಕೆಲವು ಕಾರ್ಮಿಕರು ಕೆಲಸದ ಭಾಗವಾಗಿ 12-13 ಕಿ.ಮೀ ಒಳಗೆ ಹೋದಾಗ ಸುರಂಗದೊಳಗೆ ಮೇಲ್ಫಾವಣಿ ಕುಸಿದು ಈ ಘಟನೆ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರು ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಇತರ ಅಧಿಕಾರಿಗಳಿಗೆ ಅಪಘಾತ ಸ್ಥಳಕ್ಕೆ ತಲುಪಿ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಮುಖ್ಯಮಂತ್ರಿಗಳ ನಿರ್ದೇಶನದಂತೆ ರಾಜ್ಯದ ನೀರಾವರಿ ಸಚಿವ ಎನ್.ಉತ್ತಮ್ ಕುಮಾರ್ ರೆಡ್ಡಿ, ನೀರಾವರಿ ಸಲಹೆಗಾರ ಆದಿತ್ಯನಾಥ ದಾಸ್ ಮತ್ತು ಇತರ ನೀರಾವರಿ ಅಧಿಕಾರಿಗಳು ವಿಶೇಷ ಹೆಲಿಕಾಪ್ಟರ್‌ನಲ್ಲಿ ಘಟನಾ ಸ್ಥಳಕ್ಕೆ ತೆರಳಿದ್ದಾರೆ

ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರು ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಇತರ ಅಧಿಕಾರಿಗಳಿಗೆ ಅಪಘಾತ ಸ್ಥಳಕ್ಕೆ ತಲುಪಿ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.ಮುಖ್ಯಮಂತ್ರಿಗಳ ನಿರ್ದೇಶನದಂತೆ ರಾಜ್ಯದ ನೀರಾವರಿ ಸಚಿವ ಎನ್.ಉತ್ತಮ್ ಕುಮಾರ್ ರೆಡ್ಡಿ, ನೀರಾವರಿ ಸಲಹೆಗಾರ ಆದಿತ್ಯನಾಥ ದಾಸ್ ಮತ್ತು ಇತರ ನೀರಾವರಿ ಅಧಿಕಾರಿಗಳು ವಿಶೇಷ ಹೆಲಿಕಾಪ್ಟರ್‌ನಲ್ಲಿ ಘಟನಾ ಸ್ಥಳಕ್ಕೆ ತೆರಳಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್