ಶಕ್ತಿಕಾಂತ ದಾಸ್ 
ದೇಶ

ಪ್ರಧಾನಿ ಮೋದಿ ಪ್ರಧಾನ ಕಾರ್ಯದರ್ಶಿಯಾಗಿ ಆರ್‌ಬಿಐ ಮಾಜಿ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನಿವೃತ್ತ ಐಎಎಸ್ ಅಧಿಕಾರಿ ಶಕ್ತಿಕಾಂತ ದಾಸ್ ಅವರನ್ನು ಪ್ರಧಾನ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ-2 ಆಗಿ ನೇಮಕ ಮಾಡಲು ಸಂಪುಟ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ.

ನವದೆಹಲಿ: ಆರ್‌ಬಿಐ ಮಾಜಿ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರ 2ನೇ ಪ್ರಧಾನ ಕಾರ್ಯದರ್ಶಿಯಾಗಿ ಕೇಂದ್ರ ಸರ್ಕಾರ ಶನಿವಾರ ನೇಮಕ ಮಾಡಿದೆ.

"ನಿವೃತ್ತ ಐಎಎಸ್ ಅಧಿಕಾರಿ ಶಕ್ತಿಕಾಂತ ದಾಸ್ ಅವರನ್ನು ಪ್ರಧಾನ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ-2 ಆಗಿ ನೇಮಕ ಮಾಡಲು ಸಂಪುಟ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ. ಅವರು ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದೆ" ಎಂದು ಕೇಂದ್ರ ಸರ್ಕಾರದ ಸುತ್ತೋಲೆ ತಿಳಿಸಿದೆ.

ಶಕ್ತಿಕಾಂತ್ ದಾಸ್ ಅವರು ಡಿಸೆಂಬರ್ 2018 ರಿಂದ ಡಿಸೆಂಬರ್ 2024 ರವರೆಗೆ ಆರು ವರ್ಷಗಳ ಕಾಲ ಆರ್‌ಬಿಐ ಗವರ್ನರ್ ಆಗಿ ಸೇವೆ ಸಲ್ಲಿಸಿದ್ದರು. ಕಳೆದ ಡಿಸೆಂಬರ್ 10 ರಂದು ನಿವೃತ್ತರಾಗಿದ್ದರು. ಆರ್ ಬಿಐ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿತ್ತು.

1980 ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ಶಕ್ತಿಕಾಂತ್ ದಾಸ್ ಅವರು, ಕಳೆದ 38 ವರ್ಷಗಳಲ್ಲಿ ಆಡಳಿತದ ವಿವಿಧ ಕ್ಷೇತ್ರಗಳಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಹಣಕಾಸು, ತೆರಿಗೆ, ಕೈಗಾರಿಕೆಗಳು ಮತ್ತು ಮೂಲಸೌಕರ್ಯ ಸೇರಿದಂತೆ ಇತರ ಕ್ಷೇತ್ರಗಳಲ್ಲಿ ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel