ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ ಜೆಪಿ ನಡ್ಡಾ 
ದೇಶ

ಮಹಾಕುಂಭ ಮೇಳ 2025: ಮುಕ್ತಾಯಕ್ಕೆ ಇನ್ನೂ ನಾಲ್ಕು ದಿನ ಬಾಕಿ, ತ್ರಿವೇಣಿ ಸಂಗಮದಲ್ಲಿ ಮಿಂದೆದ್ದ ಜೆಪಿ ನಡ್ಡಾ, ಯೋಗಿ ಆದಿತ್ಯನಾಥ್!

ಇಂದು ಅರೈಲ್‌ನಲ್ಲಿರುವ ತ್ರಿವೇಣಿ ಅತಿಥಿ ಗೃಹಕ್ಕೆ ಆಗಮಿಸಿದ ಜೆ. ಪಿ. ನಡ್ಡಾ ಅವರನ್ನು ಸಿಎಂ ಯೋಗಿ ಆದಿತ್ಯನಾಥ್ ಸ್ವಾಗತಿಸಿದರು. ತದನಂತರ ಮಧ್ಯಾಹ್ನ 3 ಗಂಟೆಗೆ ಉಭಯ ನಾಯಕರು ಗಂಗಾ ನದಿಗೆ ಅರ್ಘ್ಯ ಸಲ್ಲಿಸಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು.

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳ ಮುಕ್ತಾಯಕ್ಕೆ ಕೇವಲ ಇನ್ನೂ ಕೇವಲ ನಾಲ್ಕು ದಿನಗಳು ಬಾಕಿ ಉಳಿದಿದ್ದು, 41 ನೇ ದಿನವಾದ ಶನಿವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಹಾಗೂ ಸಿಎಂ ಯೋಗಿ ಆದಿತ್ಯನಾಥ್ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ.

ಇಂದು ಅರೈಲ್‌ನಲ್ಲಿರುವ ತ್ರಿವೇಣಿ ಅತಿಥಿ ಗೃಹಕ್ಕೆ ಆಗಮಿಸಿದ ಜೆ. ಪಿ. ನಡ್ಡಾ ಅವರನ್ನು ಸಿಎಂ ಯೋಗಿ ಆದಿತ್ಯನಾಥ್ ಸ್ವಾಗತಿಸಿದರು. ತದನಂತರ ಮಧ್ಯಾಹ್ನ 3 ಗಂಟೆಗೆ ಉಭಯ ನಾಯಕರು ಗಂಗಾ ನದಿಗೆ ಅರ್ಘ್ಯ ಸಲ್ಲಿಸಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ಬಡೇ ಹನುಮಾನ್ ದೇವಾಲಯ ಮತ್ತು ಅಕ್ಷಯವತ್‌ಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಶನಿವಾರ ಬೆಳಗ್ಗೆ 8ಗಂಟೆಯವರೆಗೂ ಸುಮಾರು 33. 10 ಲಕ್ಷ ಭಕ್ತರು ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಇಲ್ಲಿಯವರೆಗೂ ಸುಮಾರು 59. 64 ಕೋಟಿ ಯಾತ್ರಾರ್ಥಿಗಳು ಪುಣ್ಯ ಸ್ನಾನ ಮಾಡುವ ಮೂಲಕ ಇತಿಹಾಸದಲ್ಲಿ ಹೊಸ ದಾಖಲೆ ಮಾಡಲಾಗಿದೆ.

ಜನದಟ್ಟಣೆ ಸವಾಲಿನ ನಡುವೆಯೂ ಭಕ್ತರಿಗೆ ತೊಂದರೆಯಾಗದಂತೆ ಉತ್ತರ ಪ್ರದೇಶ ಸರ್ಕಾರದಿಂದ ಸೂಕ್ತ ವ್ಯವಸ್ಥೆ ಮಾಡಲಾಗಿದ್ದು, ಕೆಲವೊಂದು ತೊಂದರೆಗಳ ಹೊರತಾಗಿಯೂ ಮಹಾ ಕುಂಭ ಮೇಳ ಯಶಸ್ವಿಯಾಗಿ ನಡೆಯುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಯೋಗಿ ಆದಿತ್ಯನಾಥ್ ಅವರ ಪ್ರಯತ್ನವನ್ನು ಜನರು ಶ್ಲಾಘಿಸಿದ್ದಾರೆ. ಇದೇ 26 ರಂದು ಮಹಾಶಿವರಾತ್ರಿ ದಿನದಂದು ಕುಂಭ ಮೇಳ ಮುಕ್ತಾಯವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!