ನದಿ ಸ್ವಚ್ಛಗೊಳಿಸುತ್ತಿರುವ ಪೌರ ಕಾರ್ಮಿಕರು 
ದೇಶ

ಕುಂಭಮೇಳ: ಗಂಗಾ ನದಿ ತೀರದಲ್ಲಿ ಬಯಲು ಮಲವಿಸರ್ಜನೆ?': UP ಸರ್ಕಾರಕ್ಕೆ ಎನ್‌ಜಿಟಿ ನೋಟಿಸ್

ಕುಂಭಮೇಳ ಸ್ಥಳದಲ್ಲಿ ನೈರ್ಮಲ್ಯ ಸೌಲಭ್ಯ ಕಳಪೆಯಾಗಿದೆ. ರಾಜ್ಯ ಸರ್ಕಾರ ದೊಡ್ಡ ಪ್ರಮಾಣದ ಮಾಲಿನ್ಯವನ್ನು ತಡೆಯುವಲ್ಲಿ ವಿಫಲವಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ನವದೆಹಲಿ: ಮಹಾ ಕುಂಭಮೇಳದಲ್ಲಿ ನೈರ್ಮಲ್ಯ ಸೌಲಭ್ಯಗಳು ಅಸಮರ್ಪಕವಾಗಿರುವುದರಿಂದ ಲಕ್ಷಾಂತರ ಜನ ಗಂಗಾ ನದಿಯ ದಡದಲ್ಲಿ ಬಯಲು ಮಲವಿಸರ್ಜನೆ ಮಾಡಲು ಕಾರಣವಾಗಿದೆ ಎಂಬ ಆರೋಪದ ಮೇಲೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(NGT) ಇತ್ತೀಚೆಗೆ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ನಿಪುನ್ ಭೂಷಣ್ ಎಂಬವರು ಉತ್ತರ ಪ್ರದೇಶ ಸರ್ಕಾರದಿಂದ 10 ಕೋಟಿ ರೂ. ಪರಿಸರ ಪರಿಹಾರ ಕೋರಿ ಅರ್ಜಿ ಸಲ್ಲಿಸಿದ ನಂತರ ಪ್ರಯಾಗ್‌ರಾಜ್ ಮೇಳ ಪ್ರಾಧಿಕಾರ ಮತ್ತು ಉತ್ತರ ಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿ(UP PCB)ಗೂ ಎನ್ ಜಿಟಿ ನೋಟಿಸ್ ನೀಡಿದೆ.

ಕುಂಭಮೇಳ ಸ್ಥಳದಲ್ಲಿ ನೈರ್ಮಲ್ಯ ಸೌಲಭ್ಯ ಕಳಪೆಯಾಗಿದೆ. ರಾಜ್ಯ ಸರ್ಕಾರ ದೊಡ್ಡ ಪ್ರಮಾಣದ ಮಾಲಿನ್ಯವನ್ನು ತಡೆಯುವಲ್ಲಿ ವಿಫಲವಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ನವೆಂಬರ್ 2024 ರ ನೀರಿನ ಗುಣಮಟ್ಟದ ಪರೀಕ್ಷೆಯನ್ನು ಸಹ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಇದು ಸಂಗಮ್‌ನ ಕೆಳಭಾಗದಲ್ಲಿ 100 ಮಿಲಿಲೀಟರ್‌ಗೆ 3,300 MPN ಮಲ ಕೋಲಿಫಾರ್ಮ್ ಮಟ್ಟವನ್ನು ದಾಖಲಿಸಿದೆ. ಇದು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (MoEFCC) ನಿಗದಿಪಡಿಸಿದ 2,500 MPN/100 ml ನ ಮಿತಿಯನ್ನು ಮೀರಿದೆ.

ಅಂತಹ ಮಾಲಿನ್ಯಕಾರಕಗಳ ಉಪಸ್ಥಿತಿಯು ಕಾಲರಾ, ಹೆಪಟೈಟಿಸ್ ಎ ಮತ್ತು ಪೋಲಿಯೊದಂತಹ ಕಾಯಿಲೆಗಳಿಗೆ ಕಾರಣವಾಗಬಹುದು ಮತ್ತು ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡುವ ಲಕ್ಷಾಂತರ ಭಕ್ತರಿಗೆ ಅಪಾಯವನ್ನುಂಟುಮಾಡುತ್ತದೆ ಎಂದು ವಾದಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

SCROLL FOR NEXT