ಜೈಪುರ: ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾಗೆ ಕೊಲೆ ಬೆದರಿಕೆ ಬಂದಿದೆ. ಶುಕ್ರವಾರ ರಾತ್ರಿ ದೌಸಾದ ಸಲಾವಾಸ್ ಜೈಲಿನಿಂದ ಕೈದಿಯೊಬ್ಬ ಸಿಎಂಗೆ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 29 ವರ್ಷದ ರಿಂಕು ಜೈಪುರ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಮುಖ್ಯಮಂತ್ರಿಗೆ ಕೊಲೆ ಬೆದರಿಕೆ ಹಾಕಿದ್ದು, ಸಲಾವಾಸ್ ಜೈಲಿಗೆ ಕರೆ ಮಾಡಲು ಬಳಸಿದ ಮೊಬೈಲ್ ಫೋನ್ ಸ್ಥಳವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.
ಬೆಳಗ್ಗೆ 3ರಿಂದ 7ರವರೆಗೆ ಜೈಲಿನಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ಜೈಲಿನಿಂದ ಫೋನ್ ವಶಪಡಿಸಿಕೊಳ್ಳಲಾಗಿದೆ,. ಈ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.