ಪ್ರಧಾನಿ ಮೋದಿ 
ದೇಶ

ಬೊಜ್ಜು ನಿವಾರಣೆಗೆ ಆರೋಗ್ಯ ಸಲಹೆ ನೀಡಿದ ಪ್ರಧಾನಿ ಮೋದಿ!

ತಮ್ಮ ಮಾಸಿಕ ಆಕಾಶವಾಣಿಯ 'ಮನ್ ಕಿ ಬಾತ್' ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ, ಆಹಾರದಲ್ಲಿ ಕಡಿಮೆ ಎಣ್ಣೆ ಬಳಸುವುದು ಮತ್ತು ಸ್ಥೂಲಕಾಯತೆ ನಿಭಾಯಿಸುವುದು ಕೇವಲ ವೈಯಕ್ತಿಕ ಆಯ್ಕೆಯಾಗಿರದೆ ನಮ್ಮ ಕುಟುಂಬದ ಕಡೆಗೆ ನಮ್ಮ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ನವದೆಹಲಿ: ಅಧಿಕ ತೂಕ ಅಥವಾ ಬೊಜ್ಜು ಸಮಸ್ಯೆ ನಿವಾರಣೆಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉತ್ತಮ ಆರೋಗ್ಯ ಸಲಹೆ ನೀಡಿದ್ದಾರೆ. ಆಹಾರದಲ್ಲಿ ಕಡಿಮೆ ಪ್ರಮಾಣದ ಎಣ್ಣೆ ಬಳಸುವಂತೆ ಅವರು ಜನರಿಗೆ ಸಲಹೆ ನೀಡಿದ್ದಾರೆ. ಅಡುಗೆ ಎಣ್ಣೆ ಬಳಕೆಯನ್ನು ಶೇ.10 ರಷ್ಟು ಕಡಿತಗೊಳಿಸುವಂತೆ ಅವರು ಮನವಿ ಮಾಡಿದ್ದಾರೆ.

ತಮ್ಮ ಮಾಸಿಕ ಆಕಾಶವಾಣಿಯ 'ಮನ್ ಕಿ ಬಾತ್' ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ, ಆಹಾರದಲ್ಲಿ ಕಡಿಮೆ ಎಣ್ಣೆ ಬಳಸುವುದು ಮತ್ತು ಸ್ಥೂಲಕಾಯತೆ ನಿಭಾಯಿಸುವುದು ಕೇವಲ ವೈಯಕ್ತಿಕ ಆಯ್ಕೆಯಾಗಿರದೆ ಕುಟುಂಬದ ದೃಷ್ಟಿಯಿಂದ ಇದು ನಮ್ಮ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಜನರು ಆರೋಗ್ಯಕರ ಜೀವನ ಶೈಲಿ ಅಳವಡಿಸಿಕೊಳ್ಳುವಂತೆ ಇರುವ ಡಬಲ್ ಒಲಿಂಪಿಕ್ ಪದಕ ವಿಜೇತ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಮತ್ತು ಬಾಕ್ಸಿಂಗ್ ಚಾಂಪಿಯನ್ ನಿಖತ್ ಜರೀನ್ ಅವರ ಸಂದೇಶಗಳನ್ನು ಮೋದಿ ನುಡಿದರು.

ಡೆಹ್ರಾಡೂನ್‌ನಲ್ಲಿ ರಾಷ್ಟ್ರೀಯ ಕ್ರೀಡಾಕೂಟದ ಉದ್ಘಾಟನೆಯ ಸಂದರ್ಭದಲ್ಲಿ ಬಹಳ ಮುಖ್ಯವಾದ ವಿಷಯ ಪ್ರಸ್ತಾಪಿಸಿದ್ದೆ. ಅದು ದೇಶದಲ್ಲಿ ಹೊಸ ಚರ್ಚೆಯನ್ನು ಪ್ರಾರಂಭಿಸಿದೆ. ಅದು ಬೊಜ್ಜಿನ ವಿಚಾರವಾಗಿದೆ. ಪಿಟ್ ಮತ್ತು ಆರೋಗ್ಯ ರಾಷ್ಟ್ರವಾಗಲು ಬೊಜ್ಜಿನ ಸಮಸ್ಯೆಯಿಂದ ಮುಕ್ತಿ ಹೊಂದಬೇಕಾಗಿದೆ ಎಂದು ಮೋದಿ ಹೇಳಿದರು.

ಅಧ್ಯಯನವೊಂದರ ಪ್ರಕಾರ ಎಂಟು ಜನರಲ್ಲಿ ಒಬ್ಬರು ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕಳೆದ ವರ್ಷಗಳಲ್ಲಿ ಸ್ಥೂಲಕಾಯದ ಪ್ರಕರಣಗಳು ದ್ವಿಗುಣಗೊಂಡಿವೆ. ನ್ನೂ ಹೆಚ್ಚು ಆತಂಕಕಾರಿ ಸಂಗತಿಯೆಂದರೆ ಸ್ಥೂಲಕಾಯದ ಸಮಸ್ಯೆ ಮಕ್ಕಳಲ್ಲಿ ನಾಲ್ಕು ಪಟ್ಟು ಹೆಚ್ಚಾಗಿದೆ ಎಂದು ಪ್ರಧಾನಿ ಹೇಳಿದರು.

2022ರ ವಿಶ್ವ ಆರೋಗ್ಯ ಸಂಸ್ಥೆ ದತ್ತಾಂಶದ ಪ್ರಕಾರ ವಿಶ್ವದಾದ್ಯಂತ ಸುಮಾರು 250 ಕೋಟಿ ಜನರು ಅಧಿಕ ತೂಕವನ್ನು ಹೊಂದಿರುವುದನ್ನು ತೋರಿಸುತ್ತದೆ. ಅಂದರೆ ಅವರು ಅಗತ್ಯಕ್ಕಿಂತ ಹೆಚ್ಚು ತೂಕವನ್ನು ಹೊಂದಿದ್ದಾರೆ. ಈ ಅಂಕಿಅಂಶಗಳು ತುಂಬಾ ಗಂಭೀರವಾಗಿದ್ದು, ಇದು ಏಕೆ ಉಂಟಾಗುತ್ತಿದೆ ಎಂಬುದರತ್ತ ಯೋಚಿಸುವಂತೆ ಮಾಡಿದೆ. ಅಧಿಕ ತೂಕ ಅಥವಾ ಬೊಜ್ಜು ಅನೇಕ ರೀತಿಯ ಸಮಸ್ಯೆಗಳು ಮತ್ತು ರೋಗಗಳಿಗೆ ಕಾರಣವಾಗುತ್ತದೆ. ಸಣ್ಣ ಪ್ರಯತ್ನಗಳಿಂದ ಈ ಸವಾಲನ್ನು ನಿಭಾಯಿಸಬಹುದು ಎಂದು ಮೋದಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT