ಪ್ರಾತಿನಿಧಿಕ ಚಿತ್ರ 
ದೇಶ

32 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ!

ಮನ್ನಾರ್‌ನ ಉತ್ತರದ ಸಮುದ್ರ ಪ್ರದೇಶದಲ್ಲಿ ವಿಶೇಷ ಕಾರ್ಯಾಚರಣೆಯ ಸಂದರ್ಭದಲ್ಲಿ ಮೀನುಗಾರರನ್ನು ಬಂಧಿಸಲಾಗಿದೆ ಎಂದು ಶ್ರೀಲಂಕಾ ನೌಕಾಪಡೆ ಹೇಳಿಕೆಯಲ್ಲಿ ತಿಳಿಸಿದೆ.

ಕೊಲಂಬೊ: ದ್ವೀಪ ರಾಷ್ಟ್ರದ ಪ್ರಾದೇಶಿಕ ಜಲಪ್ರದೇಶಕ್ಕೆ ನುಗ್ಗಿದ ಆರೋಪದ ಮೇಲೆ 32 ಭಾರತೀಯ ಮೀನುಗಾರರನ್ನು ಬಂಧಿಸಿದ್ದಾರೆ ಮತ್ತು 5 ಮೀನುಗಾರಿಕಾ ದೋಣಿಗಳನ್ನು ಶ್ರೀಲಂಕಾ ಅಧಿಕಾರಿಗಳು ಭಾನುವಾರ ವಶಪಡಿಸಿಕೊಂಡಿದ್ದಾರೆ ಎಂದು ನೌಕಾಪಡೆ ತಿಳಿಸಿದೆ.

ಮನ್ನಾರ್‌ನ ಉತ್ತರದ ಸಮುದ್ರ ಪ್ರದೇಶದಲ್ಲಿ ವಿಶೇಷ ಕಾರ್ಯಾಚರಣೆಯ ಸಂದರ್ಭದಲ್ಲಿ ಮೀನುಗಾರರನ್ನು ಬಂಧಿಸಲಾಗಿದೆ ಎಂದು ಶ್ರೀಲಂಕಾ ನೌಕಾಪಡೆ ಹೇಳಿಕೆಯಲ್ಲಿ ತಿಳಿಸಿದೆ.

'ಶ್ರೀಲಂಕಾದ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಐದು ಮೀನುಗಾರಿಕಾ ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು 32 ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ' ಎಂದು ಹೇಳಿಕೆ ತಿಳಿಸಿದೆ.

ಇತರರ ಅಕ್ರಮ ಮೀನುಗಾರಿಕೆಯನ್ನು ತಡೆಯಲು ನೌಕಾಪಡೆಯು ಶ್ರೀಲಂಕಾದ ಪ್ರದೇಶದಲ್ಲಿ ನಿಯಮಿತ ಗಸ್ತು ಮತ್ತು ಕಾರ್ಯಾಚರಣೆಗಳನ್ನು ಮುಂದುವರೆಸಿದೆ. ಸ್ಥಳೀಯ ಮೀನುಗಾರರ ಜೀವನೋಪಾಯದ ಮೇಲೆ ಆ ಅಭ್ಯಾಸಗಳು ಬೀರುವ ಪರಿಣಾಮವನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿಕೆ ತಿಳಿಸಿದೆ.

ಬಂಧಿತ ಮೀನುಗಾರರನ್ನು ಮತ್ತು ಅವರ ದೋಣಿಗಳನ್ನು ತಲೈಮನ್ನಾರ್ ಪಿಯರ್‌ಗೆ ತರಲಾಗಿದ್ದು, ಕಾನೂನು ಕ್ರಮಕ್ಕಾಗಿ ಮನ್ನಾರ್‌ನ ಮೀನುಗಾರಿಕಾ ನಿರೀಕ್ಷಕರಿಗೆ ಹಸ್ತಾಂತರಿಸಲಾಗುವುದು ಎಂದು ನೌಕಾಪಡೆ ತಿಳಿಸಿದೆ.

ಶ್ರೀಲಂಕಾದ ಸಮುದ್ರದಲ್ಲಿ ಮೀನುಗಾರಿಕೆ ಮಾಡಿದ ಆರೋಪದ ಮೇಲೆ ನೌಕಾಪಡೆಯು ಈ ವರ್ಷ ಇದುವರೆಗೆ 131 ಭಾರತೀಯ ಮೀನುಗಾರರನ್ನು ಬಂಧಿಸಿದೆ ಮತ್ತು 18 ಮೀನುಗಾರಿಕಾ ದೋಣಿಗಳನ್ನು ವಶಪಡಿಸಿಕೊಂಡಿದೆ ಎಂದು ಹೇಳಿಕೆ ತಿಳಿಸಿದೆ.

2024 ರಲ್ಲಿ ಶ್ರೀಲಂಕಾದ ನೌಕಾಪಡೆಯು 529 ಭಾರತೀಯ ಮೀನುಗಾರರನ್ನು ಅಕ್ರಮ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ಬಂಧಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!