ಮಲ್ಲಿಕಾರ್ಜುನ ಖರ್ಗೆ 
ದೇಶ

ಅಸ್ಸಾಂನಲ್ಲಿ ಬಿಜೆಪಿ 'ಸುಳ್ಳುಗಳ' ಕಾರ್ಖಾನೆ ಸ್ಥಾಪಿಸಿದೆ, ಸಿಎಂ ಇದರ ಸೂತ್ರಧಾರ: ಮಲ್ಲಿಕಾರ್ಜುನ ಖರ್ಗೆ

ಅಸ್ಸಾಂನ ಜನರು ಬಿಜೆಪಿ ಮೇಲೆ ಕೋಪಗೊಂಡಿದ್ದಾರೆ ಮತ್ತು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರಲಿದ್ದಾರೆ ಎಂದು ಅವರು ಹೇಳಿದ್ದಾರೆ.

ನವದೆಹಲಿ: ಅಸ್ಸಾಂನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸುಳ್ಳುಗಳ ಕಾರ್ಖಾನೆಯನ್ನು ಸ್ಥಾಪಿಸಿದ್ದಾರೆ ಮತ್ತು ಇದರ "ಮಾಸ್ಟರ್ ಮೈಂಡ್" ಮುಖ್ಯಮಂತ್ರಿಯಾಗಿದ್ದಾರೆ ಎಂದು ಬಿಜೆಪಿ 'ದುರಾಡಳಿತ'ದ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ವಾಗ್ದಾಳಿ ನಡೆಸಿದ್ದಾರೆ.

ಅಸ್ಸಾಂನ ಜನರು ಬಿಜೆಪಿ ಮೇಲೆ ಕೋಪಗೊಂಡಿದ್ದಾರೆ ಮತ್ತು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಹಿಂದಿಯಲ್ಲಿ ಪೋಸ್ಟ್ ಮಾಡಿರುವ ಖರ್ಗೆ, 'ಮೋದಿ ಜಿ ಅಸ್ಸಾಂನಲ್ಲಿ 'ಜುಮ್ಲಾಸ್ (ಸುಳ್ಳುಗಳು) ಕಾರ್ಖಾನೆಯನ್ನು ಸ್ಥಾಪಿಸಿದ್ದಾರೆ. ಇದರ ಹಿಂದಿರುವ ಮಾಸ್ಟರ್ ಮೈಂಡ್ ಬಿಜೆಪಿಯ ಅತ್ಯಂತ ಭ್ರಷ್ಟರಾಗಿರುವ ಮುಖ್ಯಮಂತ್ರಿಯವರದ್ದು ಎಂದಿದ್ದಾರೆ.

'ಇತ್ತೀಚೆಗೆ, ಅಸ್ಸಾಂನಲ್ಲಿ ಕಾಂಗ್ರೆಸ್ ನಾಯಕರ ಮೇಲೆ ರಾಜಕೀಯವಾಗಿ ಮತ್ತು ದೈಹಿಕವಾಗಿ ಎರಡೂ ರೀತಿಯಲ್ಲಿ ದಾಳಿ ಮಾಡಲಾಗಿದೆ!. 2026ರಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರುವ ಮೂಲಕ ಸಾರ್ವಜನಿಕರು ಈ ದಾಳಿಗಳಿಗೆ ಪ್ರತಿಕ್ರಿಯಿಸುತ್ತಾರೆ' ಎಂದು ಹೇಳಿದ್ದಾರೆ.

2026ರಲ್ಲಿ ಅಸ್ಸಾಂನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

'ಬಿಜೆಪಿಯ ಭೂ ಮಾಫಿಯಾದಿಂದಾಗಿ ಅಸ್ಸಾಂ ಭ್ರಷ್ಟಾಚಾರ, ದ್ವೇಷ ಮತ್ತು ದುರಾಡಳಿತದ ಪರಿಣಾಮಗಳನ್ನು ಅನುಭವಿಸುತ್ತಿದೆ. ಯುವ ಜನತನೆಯನ್ನು ಕಾಡುತ್ತಿರುವ ನಿರುದ್ಯೋಗ, ಚಹಾ ತೋಟದ ಕಾರ್ಮಿಕರ ಅಸಹಾಯಕತೆ, ಅಕ್ರಮ ವಿದೇಶಿಗರ ವಿಷಯದಲ್ಲಿ ಸುಪ್ರೀಂ ಕೋರ್ಟ್‌ ಛೀಮಾರಿ ಮತ್ತು ಬಿಜೆಪಿಯ ಬೂಟಾಟಿಕೆ ಎಲ್ಲರಿಗೂ ತಿಳಿದಿದೆ. ಅಭಿವೃದ್ಧಿ ಮತ್ತು ಆರ್ಥಿಕತೆ ಎರಡರಲ್ಲೂ ರಾಜ್ಯವು ಹಿಂದುಳಿದಿದೆ' ಎಂದು ಆರೋಪಿಸಿದರು.

'ಅಸ್ಸಾಂನಲ್ಲಿರುವ 3.5 ಕೋಟಿ ಜನರು ತೀವ್ರ ಕೋಪಗೊಂಡಿದ್ದಾರೆ. ಮೋದಿ ಜಿ ಅವರ ಯಾವುದೇ ಘೋಷಣೆ ಈಗ ಅವರ ಕೋಪವನ್ನು ಶಮನಗೊಳಿಸಲು ಸಾಧ್ಯವಿಲ್ಲ. ಅಸ್ಸಾಂ ಮತ್ತು ಈಶಾನ್ಯದಲ್ಲಿ ಬದಲಾವಣೆ ಖಚಿತ' ಎಂದು ಖರ್ಗೆ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

Batman masks, offline maps: ನಟಿ ರಿಚಾ ಚಡ್ಡಾ ಐಡಿಯಾ ಫಾಲೋ ಮಾಡ್ತಿರುವ ಯುವಕರು; Facial recognition camera ಫುಲ್ ಕನ್‌ಫ್ಯೂಸ್, ದೆಹಲಿ ಪೊಲೀಸರು ತಬ್ಬಿಬ್ಬು..!

ಪಂಜಾಬ್: ಫೇಸ್‌ಬುಕ್ ಲೈವ್‌ನಲ್ಲಿರುವಾಗಲೇ ಮಾದಕವಸ್ತು ವಿರೋಧಿ ಹೋರಾಟಗಾರ ಪರ್ವಿಂದರ್ ಸಿಂಗ್ ಜೋತಾ ಗುಂಡೇಟಿಗೆ ಬಲಿ!

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)