ಸಾಂದರ್ಭಿಕ ಚಿತ್ರ 
ದೇಶ

ಪಾಟ್ನಾ: ಆಟೋರಿಕ್ಷಾಗೆ ಟ್ರಕ್ ಡಿಕ್ಕಿ; ಭೀಕರ ಅಪಘಾತದಲ್ಲಿ ಏಳು ಮಂದಿ ಸಾವು

ಪೊಲೀಸರ ಪ್ರಕಾರ, ಆರು ಕಾರ್ಮಿಕರು ಕೆಲಸ ಮುಗಿಸಿ ಆಟೋದಲ್ಲಿ ಮನೆಗೆ ತೆರಳುತ್ತಿದ್ದಾಗ ಈ ಭೀಕರ ಅಪಘಾತ ಸಂಭವಿಸಿದೆ.

ಪಾಟ್ನಾ: ಬಿಹಾರದ ಪಾಟ್ನಾ ಜಿಲ್ಲೆಯ ಮಸೌರ್ಹಿ-ನೌಬತ್‌ಪುರ ರಸ್ತೆಯ ಧನಿಚಕ್ ಮೋರ್ ಬಳಿ ಭಾನುವಾರ ರಾತ್ರಿ ವೇಗವಾಗಿ ಬಂದ ಟ್ರಕ್ ಆಟೋರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಏಳು ಜನ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಮೃತರನ್ನು ಮಾತೇಂದ್ರ ಬಿಂದ್(25), ವಿನಯ್ ಬಿಂದ್ (30), ಉಮೇಶ್ ಬಿಂದ್(38), ರಮೇಶ್ ಬಿಂದ್ (52), ಉಮೇಶ್ ಬಿಂದ್ (30), ಸೂರಜ್ ಠಾಕೂರ್ (20) ಮತ್ತು ಆಟೋ ಚಾಲಕ ಸುಶೀಲ್ ಕುಮಾರ್ (35) ಎಂದು ಗುರುತಿಸಲಾಗಿದೆ.

ಮೃತರಲ್ಲಿ ಆರು ಜನ ದೋರಿಪರ್ ಮೂಲದವರಾಗಿದ್ದು, ಆಟೋ ಚಾಲಕ ಸುಶೀಲ್ ಕುಮಾರ್ ಹನ್ಸಾದಿಹ್ ಗ್ರಾಮದವರಾಗಿದ್ದಾರೆ.

ಪೊಲೀಸರ ಪ್ರಕಾರ, ಆರು ಕಾರ್ಮಿಕರು ಕೆಲಸ ಮುಗಿಸಿ ಆಟೋದಲ್ಲಿ ಮನೆಗೆ ತೆರಳುತ್ತಿದ್ದಾಗ ಈ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ ಪರಿಣಾಮ, ಎರಡೂ ವಾಹನಗಳು ರಸ್ತೆಬದಿಯ ನೀರು ತುಂಬಿದ ಕಂದಕಕ್ಕೆ ಬಿದ್ದಿದ್ದು, ನಂತರ ಜೆಸಿಬಿ ಯಂತ್ರವನ್ನು ಬಳಸಿ ಮೃತರ ಶವಗಳನ್ನು ಅವಶೇಷಗಳಿಂದ ಹೊರತೆಗೆಯಲಾಗಿದೆ.

ಟ್ರಕ್ ನ ಆಕ್ಸಲ್ ಮುರಿದು ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾಗೆ ಡಿಕ್ಕಿ ಹೊಡೆದಿದೆ ಎಂದು ತೋರುತ್ತಿದೆ ಎಂದು ಮರ್ಹೌರ್ಹಿ ಪೊಲೀಸ್ ಠಾಣೆಯ ಎಸ್‌ಎಚ್‌ಒ ವಿಜಯ್ ಯದ್ವೇಂದು ಅವರು ತಿಳಿಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT