ದೆಹಲಿ ವಿಧಾನಸಭೆಯಿಂದ ಅಮಾನತುಗೊಂಡಿರುವ ಆಪ್ ಶಾಸಕರಾದ ಅತಿಶಿ ಸೇರಿದಂತೆ 12 ಮಂದಿ ದೆಹಲಿಯ ವಿಧಾನಸಭೆ ಆವರಣದಲ್ಲಿ ಪ್ರತಿಭಟನೆ ನಡೆಸಿದರು. 
ದೇಶ

ದೆಹಲಿ ವಿಧಾನಸಭೆಯಲ್ಲಿ ತೀವ್ರ ಗದ್ದಲ, ಕೋಲಾಹಲ: ಆತಿಶಿ ಸೇರಿ 12 AAP ಶಾಸಕರು ಅಮಾನತು!

ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆಗೆದುಹಾಕುವ ಮೂಲಕ ಬಿಜೆಪಿ ತನ್ನ ನಿಜ ಬಣ್ಣ ತೋರಿಸಿದೆ ಎಂದು ಅವರು ನಿನ್ನೆ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದರು.

ನವದೆಹಲಿ: ದೆಹಲಿ ವಿಧಾನಸಭೆ ಅಧಿವೇಶನದ ಎರಡನೇ ದಿನವಾದ ಇಂದು ಮಂಗಳವಾರ ಲೆಫ್ಟಿನೆಂಟ್ ಗವರ್ನರ್ (LG) ವಿ.ಕೆ. ಸಕ್ಸೇನಾ ಅವರ ಭಾಷಣದ ಸಮಯದಲ್ಲಿ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ದೆಹಲಿ ವಿಧಾನಸಭಾ ಸ್ಪೀಕರ್ ವಿಜೇಂದರ್ ಗುಪ್ತಾ ಅವರು ವಿರೋಧ ಪಕ್ಷದ ನಾಯಕರಾದ ಅತಿಶಿ, ಮಾಜಿ ಸಚಿವ ಗೋಪಾಲ್ ರೈ ಮತ್ತು ಇತರ ಒಂಬತ್ತು ಮಂದಿ ಎಎಪಿ ಶಾಸಕರನ್ನು ದಿನದ ಮಟ್ಟಿಗೆ ಅಮಾನತುಗೊಳಿಸಿದ ಪ್ರಸಂಗ ನಡೆಯಿತು.

ಸದನದಿಂದ ಹೊರಹಾಕಲ್ಪಟ್ಟ ಎಎಪಿ ನಾಯಕರಲ್ಲಿ ಅತಿಶಿ, ಗೋಪಾಲ್ ರೈ, ವೀರ್ ಸಿಂಗ್ ಧಿಂಗ್ನ್, ಮುಖೇಶ್ ಅಹ್ಲಾವತ್, ಚೌಧರಿ ಜುಬೈರ್ ಅಹ್ಮದ್, ಅನಿಲ್ ಝಾ, ವಿಶೇಷ್ ರವಿ ಮತ್ತು ಜರ್ನೈಲ್ ಸಿಂಗ್ ಒಳಗೊಂಡಿದ್ದಾರೆ. ಮುಖ್ಯಮಂತ್ರಿ ಕಚೇರಿಯಿಂದ ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆಗೆದುಹಾಕುವ ಮೂಲಕ ಬಿಜೆಪಿ ಸಂವಿಧಾನ ರಚನೆಕಾರನಿಗೆ ಅಗೌರವ ತೋರಿದೆ ಎಂದು ಇಂದು ಸದನ ಆರಂಭವಾಗುತ್ತಿದ್ದಂತೆ ಆತಿಶಿ ಆರೋಪಿಸಿದರು.

ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆಗೆದುಹಾಕುವ ಮೂಲಕ ಬಿಜೆಪಿ ತನ್ನ ನಿಜ ಬಣ್ಣ ತೋರಿಸಿದೆ. ಬಾಬಾಸಾಹೇಬ್ ಅವರನ್ನು ಮೋದಿ ಬದಲಾಯಿಸಬಹುದು ಎಂದು ಬಿಜೆಪಿಯವರ ಭಾವನೆಯೇ ಎಂದು ಅವರು ನಿನ್ನೆ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದರು.

ಅಮಾನತುಗೊಂಡ ಎಎಪಿ ಶಾಸಕರು ನಂತರ ವಿಧಾನಸಭೆ ಆವರಣದಲ್ಲಿ ಅಂಬೇಡ್ಕರ್ ಭಾವಚಿತ್ರಗಳೊಂದಿಗೆ ಪ್ರತಿಭಟನೆ ನಡೆಸಿದರು, "ಬಾಬಾ ಸಾಹೇಬ್ ಕಾ ಯೇ ಅಪ್ಮಾನ್ ನಹೀಂ ಸಹೇಗಾ ಹಿಂದೂಸ್ತಾನ್ (ಬಾಬಾ ಸಾಹೇಬ್‌ಗೆ ಆದ ಅವಮಾನವನ್ನು ಭಾರತ ಸಹಿಸುವುದಿಲ್ಲ)" ಎಂಬ ಘೋಷಣೆಗಳನ್ನು ಕೂಗಿದರು.

ಹೊಸದಾಗಿ ಆಯ್ಕೆಯಾದ ಶಾಸಕರೊಂದಿಗೆ ಮೂರು ದಿನಗಳ ದೆಹಲಿ ವಿಧಾನಸಭೆ ಅಧಿವೇಶನ ನಿನ್ನೆ ಆರಂಭವಾಯಿತು. ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ಬಿಜೆಪಿ ಮತ್ತು ವಿರೋಧ ಪಕ್ಷದ ಶಾಸಕರು ಸ್ಪೀಕರ್ ವಿಜೇಂದರ್ ಗುಪ್ತಾ ಅವರ ಮಾರ್ಗದರ್ಶನದಲ್ಲಿ ವಿಧಾನಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಇಂದು 2ನೇ ದಿನ, ಹಿಂದಿನ ಆಮ್ ಆದ್ಮಿ ಪಕ್ಷ (AAP) ಸರ್ಕಾರದ ಕಾರ್ಯಕ್ಷಮತೆಗೆ ಸಂಬಂಧಿಸಿದಂತೆ ಬಾಕಿ ಇರುವ 14 ಸಿಎಜಿ (ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್) ವರದಿಗಳನ್ನು ಮಂಡಿಸಲು ಬಿಜೆಪಿ ಸರ್ಕಾರ ಕ್ರಮ ಕೈಗೊಳ್ಳುವ ಮೊದಲು, ಸಭೆಯ ಆರಂಭದಲ್ಲಿಯೇ ವಿರೋಧ ಪಕ್ಷಗಳಿಂದ ಗದ್ದಲ ಉಂಟಾಯಿತು.

ಬಾಕಿ ಇರುವ ಲೆಕ್ಕಪರಿಶೋಧನೆಗಳು ರಾಜ್ಯ ಹಣಕಾಸು, ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ, ವಾಹನ ವಾಯು ಮಾಲಿನ್ಯ, ಮದ್ಯ ನಿಯಂತ್ರಣ ಮತ್ತು ದೆಹಲಿ ಸಾರಿಗೆ ನಿಗಮದ ಕಾರ್ಯನಿರ್ವಹಣೆ ಸೇರಿದಂತೆ ಹಲವಾರು ವಿಷಯಗಳನ್ನು ಒಳಗೊಂಡಿವೆ. ಎಎಪಿ ಆಡಳಿತವು ಈ ಸಿಎಜಿ ವರದಿಗಳನ್ನು ತಡೆಹಿಡಿದಿತ್ತು ಎಂದು ಬಿಜೆಪಿ ಆರೋಪಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT