ಕೇಂದ್ರ ಜಲಶಕ್ತಿ ಸಚಿವ ಸಿಆರ್ ಪಾಟೀಲ್ ಅವರನ್ನು ಭೇಟಿ ಮಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ 
ದೇಶ

ಕೇಂದ್ರ ಜಲಶಕ್ತಿ ಸಚಿವ- ಡಿಕೆ ಶಿವಕುಮಾರ್ ಭೇಟಿ; ರಾಜ್ಯದ 6 ಹೊಸ ನೀರಾವರಿ ಯೋಜನೆಗಳಿಗೆ ಅನುಮೋದನೆಗೆ ಮನವಿ

ಈ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (PMKSY) ಅಡಿಯಲ್ಲಿ 11,123 ಕೋಟಿ ರೂ.ಗಳ ಅಂದಾಜು ವೆಚ್ಚದ ಆರು ಹೊಸ ನೀರಾವರಿ ಯೋಜನೆಗಳಿಗೆ ಅನುದಾನ ಕೋರಿದ್ದಾರೆ.

ನವದೆಹಲಿ: ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳವಾರ ಕೇಂದ್ರ ಜಲಶಕ್ತಿ ಸಚಿವ ಸಿಆರ್ ಪಾಟೀಲ್ ಅವರನ್ನು ಭೇಟಿ ಮಾಡಿ ರಾಜ್ಯದ 6 ಹೊಸ ನೀರಾವರಿ ಯೋಜನೆಗಳಿಗೆ ಅನುಮೋದನೆ ಮತ್ತು ಹಣಕಾಸಿನ ನೆರವು ನೀಡುವಂತೆ ಕೋರಿದರು. ಜೊತೆಗೆ ಈಗಾಗಲೇ ಅಸ್ತಿತ್ವದಲ್ಲಿರುವ ನೀರಾವರಿ ಯೋಜನೆಗಳಿಗೆ ಕೇಂದ್ರದಿಂದ ಅನುಮೋದನೆ ಮತ್ತು ಹಣ ಬಿಡುಗಡೆಗೂ ಮನವಿ ಮಾಡಿದರು.

ಈ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (PMKSY) ಅಡಿಯಲ್ಲಿ 11,123 ಕೋಟಿ ರೂ.ಗಳ ಅಂದಾಜು ವೆಚ್ಚದ ಆರು ಹೊಸ ನೀರಾವರಿ ಯೋಜನೆಗಳಿಗೆ ಅನುದಾನ ಕೋರಿದ್ದಾರೆ.

ಈ ಆರು ಹೊಸ ಪ್ರಸ್ತಾವನೆಗಳಲ್ಲಿ ಪ್ರವಾಹ ನಿರ್ವಹಣೆ ಮತ್ತು ಬೆಣ್ಣೆಹಳ್ಳದಲ್ಲಿ ಗಡಿ ಪ್ರದೇಶದ ಕಾರ್ಯಕ್ರಮ; ಭೀಮಾ ನದಿಗೆ ಅಡ್ಡಲಾಗಿ ಸೋಂತಿ ಏತ ನೀರಾವರಿ ಯೋಜನೆಯಡಿ 16,000 ಹೆಕ್ಟೇರ್‌ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವುದು, ಮಲಪ್ರಭಾ ಕಾಲುವೆ ವಿಸ್ತರಣೆ, ನವೀಕರಣ ಮತ್ತು ಆಧುನೀಕರಣ (ERM), ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಇಂಡಿ ಶಾಖಾ ಕಾಲುವೆ, ಘಟಪ್ರಭಾ ಬಲದಂಡೆ ಕಾಲುವೆ, ಚಿಕ್ಕೋಡಿ ಶಾಖಾ ಕಾಲುವೆ ಮತ್ತು ತುಂಗಭದ್ರಾ ಎಡದಂಡೆ ಕಾಲುವೆ ಕಾಮಗಾರಿ ಸೇರಿವೆ.

ಈ ಉದ್ದೇಶಿತ ಯೋಜನೆಗಳಿಂದ ವಿಜಯಪುರ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಿಗೆ ಅನುಕೂಲವಾಗಲಿದೆ.

ಮೇಕೆದಾಟು ಯೋಜನೆಗೆ ಮಂಜೂರಾತಿ, ಭದ್ರಾ ಮೇಲ್ದಂಡೆ ಯೋಜನೆಗೆ ಆರ್ಥಿಕ ನೆರವು, ಕೃಷ್ಣಾ ಜಲವಿವಾದ ನ್ಯಾಯಮಂಡಳಿ (ಕೆಡಬ್ಲ್ಯುಡಿಟಿ-2) ತೀರ್ಪಿನ ಗೆಜೆಟ್ ಅಧಿಸೂಚನೆ, ಕಳಸಾ-ಭಂಡೂರಿ ನಾಲಾ ಯೋಜನೆಗಳಿಗೆ ಮಂಜೂರಾತಿ, ಮಹಾನದಿಯಿಂದ ಹೆಚ್ಚುವರಿ ನೀರನ್ನು ಕೃಷ್ಣಾ-ಕಾವೇರಿ ನದಿಗೆ ಮತ್ತು ಪೆನ್ನಾರ್-ಪಾಲಾರ್ ಜಲಾನಯನ ಪ್ರದೇಶಗಳಿಗೆ ಹರಿಸುವ ಕುರಿತು ಮತ್ತು ರಾಜ್ಯದ ಇತರ ನೀರಾವರಿ ಯೋಜನೆಗಳ ಬಗ್ಗೆಯೂ ಕೇಂದ್ರ ಜಲಶಕ್ತಿ ಸಚಿವರಿಗೆ ಸಲ್ಲಿಸಿರುವ ಮನವಿಯಲ್ಲಿ ಪ್ರಸ್ತಾಪಿಸಲಾಗಿದೆ.

ದಕ್ಷ ನೀರಾವರಿ ನಿರ್ವಹಣೆಗಾಗಿ ಸ್ವಯಂಚಾಲಿತ ಅಣೆಕಟ್ಟುಗಳು ಮತ್ತು ಕಾಲುವೆ ವ್ಯವಸ್ಥೆಗಳಿಗಾಗಿ ಶೀಘ್ರದಲ್ಲೇ ಮತ್ತೊಂದು ಪ್ರಸ್ತಾವನೆಯನ್ನು ಸಲ್ಲಿಸುವುದಾಗಿ ಡಿಸಿಎಂ ಶಿವಕುಮಾರ್ ಕೇಂದ್ರ ಜಲಶಕ್ತಿ ಸಚಿವರಿಗೆ ತಿಳಿಸಿದರು.

ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಅಡಿಯಲ್ಲಿ ಆರ್‌ಡಿಪಿಆರ್ ಇಲಾಖೆ ಮೂಲಕ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯ ಪ್ರಸ್ತಾವನೆಯನ್ನು ಮರುಸಲ್ಲಿಸುವಂತೆ ಕೇಂದ್ರ ಜಲಶಕ್ತಿ ಸಚಿವಾಲಯವು ಡಿಕೆ ಶಿವಕುಮಾರ್ ಅವರಿಗೆ ಸೂಚಿಸಿದೆ. ಸದ್ಯ ಈ ಯೋಜನೆಗೆ ನೀರಾವರಿ ಇಲಾಖೆ ಮೂಲಕ ಪ್ರಸ್ತಾವನೆ ಸಲ್ಲಿಸಲಾಗಿದೆ.

ಸಭೆಯಲ್ಲಿ ಕೇಂದ್ರ ಜಲಶಕ್ತಿ ರಾಜ್ಯ ಸಚಿವ ವಿ ಸೋಮಣ್ಣ, ಸಣ್ಣ ನೀರಾವರಿ ಸಚಿವ ಬೋಸರಾಜು, ದೆಹಲಿಯಲ್ಲಿರುವ ಕರ್ನಾಟಕದ ಪ್ರತಿನಿಧಿ ಟಿಬಿ ಜಯಚಂದ್ರ, ನೀರಾವರಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT