ಗಡಿ ಭದ್ರತಾ ಪಡೆ ಸಾಂದರ್ಭಿಕ ಚಿತ್ರ 
ದೇಶ

ಪಂಜಾಬ್: ಗಡಿಯಲ್ಲಿ ಪಾಕಿಸ್ತಾನಿ ಒಳನುಸುಳುಕೋರನನ್ನು ಗುಂಡಿಕ್ಕಿ ಹತ್ಯೆಗೈದ BSF!

ಅಂತಾರಾಷ್ಟ್ರೀಯ ಗಡಿಯ ಔಟ್ ಪೋಸ್ಟ್ ತಶ್ಪತನ್ ಪ್ರದೇಶದಲ್ಲಿ ಯಾರೋ ಅನುಮಾನಾಸ್ಪದವಾಗಿ ಓಡಾಡುತ್ತಿರುವುದನ್ನು ಗಡಿ ಭದ್ರತಾ ಸಿಬ್ಬಂದಿ ಗಮನಿಸಿದ್ದಾರೆ

ಅಮೃತಸರ: ಪಂಜಾಬ್‌ನ ಪಠಾಣ್‌ಕೋಟ್‌ನ ಅಂತರಾಷ್ಟ್ರೀಯ ಗಡಿಯಲ್ಲಿ ಬುಧವಾರ ಮುಂಜಾನೆ ಬಿಎಸ್‌ಎಫ್ ಪಡೆಗಳು ಪಾಕಿಸ್ತಾನಿ ಒಳನುಸುಳುಕೋರನನ್ನು ಗುಂಡಿಕ್ಕಿ ಕೊಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಗಡಿಯ ಔಟ್ ಪೋಸ್ಟ್ ತಶ್ಪತನ್ ಪ್ರದೇಶದಲ್ಲಿ ಯಾರೋ ಅನುಮಾನಾಸ್ಪದವಾಗಿ ಓಡಾಡುತ್ತಿರುವುದನ್ನು ಗಡಿ ಭದ್ರತಾ ಸಿಬ್ಬಂದಿ ಗಮನಿಸಿದ್ದಾರೆ

ಬಿಎಸ್ ಎಫ್ ಪಡೆಗಳ ಪ್ರತಿರೋಧದ ನಡುವೆಯೂ ನುಸುಳುಕೋರ ದೇಶದ ಗಡಿಯೊಳಗೆ ಒಳ ನುಗ್ಗಿದ್ದಾನೆ. ಬಳಿಕ ಆತನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು,ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಪಾಕಿಸ್ತಾನ ರೇಂಜರ್‌ಗಳೊಂದಿಗೆ ತೀವ್ರ ಪ್ರತಿಭಟನೆಯನ್ನು ದಾಖಲಿಸಲಾಗುವುದು ಎಂದು ಬಿಎಸ್‌ಎಫ್, ಜಮ್ಮು ಗಡಿರೇಖೆಯ ವಕ್ತಾರರು ಹೇಳಿದ್ದಾರೆ. ಪಂಜಾಬ್‌ನಲ್ಲಿ 553ಕಿ.ಮೀ ವ್ಯಾಪ್ತಿಯನ್ನು ಒಳಗೊಂಡಂತೆ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯಲ್ಲಿ BSF ಸಿಬ್ಬಂದಿ ಹಗಲಿರುಳು ದೇಶ ಕಾಯುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!