ಸುಪ್ರೀಂ ಕೋರ್ಟ್  
ದೇಶ

FIR ದಾಖಲಾಗದಿದ್ದರೂ ಜಿಎಸ್ ಟಿ, ಕಸ್ಟಮ್ಸ್‌ಗೆ ಸಂಬಂಧಿಸಿದ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಪಡೆಯಬಹುದು: ಸುಪ್ರೀಂ ಕೋರ್ಟ್

ಜಿಎಸ್‌ಟಿ ಮತ್ತು ಕಸ್ಟಮ್ಸ್ ಕಾಯ್ದೆಗಳ ಅಡಿಯಲ್ಲಿ ಬಂಧನಕ್ಕೆ ಒಳಗಾಗಬಹುದಾದ ವ್ಯಕ್ತಿಗಳು ಎಫ್‌ಐಆರ್ ದಾಖಲಿಸುವ ಮೊದಲೇ ನಿರೀಕ್ಷಣಾ ಜಾಮೀನು ಪಡೆಯಲು ಅರ್ಹರಾಗಿರುತ್ತಾರೆ ಎಂದು ಅದು ಹೇಳಿದೆ.

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ ಕಾಯ್ದೆ, ಸುಂಕ ನಿಯಮಗಳಿಗೆ ನಿರೀಕ್ಷಣಾ ಜಾಮೀನು ನಿಬಂಧನೆ ಅನ್ವಯಿಸುತ್ತದೆ ಮತ್ತು ಎಫ್‌ಐಆರ್ ದಾಖಲಿಸದಿದ್ದರೂ ಕೂಡ ವ್ಯಕ್ತಿಗಳು ಬಂಧನ ಪೂರ್ವ ಜಾಮೀನಿಗಾಗಿ ನ್ಯಾಯಾಲಯಗಳ ಮೊರೆ ಹೋಗಬಹುದು ಎಂದು ಸುಪ್ರೀಂ ಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ.

ಕಸ್ಟಮ್ಸ್ ಕಾಯ್ದೆ, ಜಿಎಸ್‌ಟಿ ಕಾಯ್ದೆಗಳಲ್ಲಿನ ದಂಡ ವಿಧಿಸುವ ನಿಬಂಧನೆಗಳು ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಸಿಆರ್‌ಪಿಸಿ ಮತ್ತು ಸಂವಿಧಾನಕ್ಕೆ ಹೊಂದಿಕೆಯಾಗುವುದಿಲ್ಲ ಎಂದು ಹೇಳಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಕಳೆದ ವರ್ಷ ಮೇ 16ರಂದು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್ ಮತ್ತು ಬೇಲಾ ಎಂ. ತ್ರಿವೇದಿ ಅವರನ್ನೊಳಗೊಂಡ ಪೀಠವು ಕಾಯ್ದಿರಿಸಿತ್ತು.

ಇಂದು ತೀರ್ಪು ಪ್ರಕಟಿಸಿದ ಸಿಜೆಐ, ನಿರೀಕ್ಷಣಾ ಜಾಮೀನಿನಂತಹ ವಿಷಯಗಳ ಕುರಿತು ಸಿಆರ್‌ಪಿಸಿ ಮತ್ತು ನಂತರದ ಕಾನೂನು, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (BNSS) ನ ನಿಬಂಧನೆಗಳು ಕಸ್ಟಮ್ಸ್ ಮತ್ತು ಜಿಎಸ್‌ಟಿ ಕಾಯ್ದೆಗಳ ಅಡಿಯಲ್ಲಿ ವ್ಯಕ್ತಿಗಳಿಗೆ ಅನ್ವಯಿಸುತ್ತವೆ ಎಂದು ಹೇಳಿದರು.

ಜಿಎಸ್‌ಟಿ ಮತ್ತು ಕಸ್ಟಮ್ಸ್ ಕಾಯ್ದೆಗಳ ಅಡಿಯಲ್ಲಿ ಬಂಧನಕ್ಕೆ ಒಳಗಾಗಬಹುದಾದ ವ್ಯಕ್ತಿಗಳು ಎಫ್‌ಐಆರ್ ದಾಖಲಿಸುವ ಮೊದಲೇ ನಿರೀಕ್ಷಣಾ ಜಾಮೀನು ಪಡೆಯಲು ಅರ್ಹರಾಗಿರುತ್ತಾರೆ ಎಂದು ಅದು ಹೇಳಿದೆ.

2018 ರಲ್ಲಿ ರಾಧಿಕಾ ಅಗರ್ವಾಲ್ ಎಂಬುವವರು ಈ ಸಂಬಂಧ ಪ್ರಮುಖ ಅರ್ಜಿಯನ್ನು ಸಲ್ಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT