ರಕ್ಷಣಾ ಕಾರ್ಯಾಚರಣೆ 
ದೇಶ

ಉತ್ತರಾಖಂಡ: ಹಿಮಪಾತದಲ್ಲಿ ಸಿಲುಕಿದ್ದ 32 ಕಾರ್ಮಿಕರ ರಕ್ಷಣೆ, ಹಿಮದಡಿ ಇನ್ನೂ 23 ಮಂದಿ; ರಕ್ಷಣಾ ಕಾರ್ಯಾಚರಣೆ ಸ್ಥಗಿತ

ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ 55ಕ್ಕೂ ಹೆಚ್ಚು ಕಾರ್ಮಿಕರು ಹಿಮಪಾತದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಮೋಲಿ: ಉತ್ತರಾಖಂಡದ ಚಮೋಲಿ ಜಿಲ್ಲೆಯ ಮಾನಾ ಬಳಿ ಶುಕ್ರವಾರ ಸಂಭವಿಸಿದ ಭಾರೀ ಹಿಮಪಾತದಲ್ಲಿ ಸಿಲುಕಿದ್ದ ಗಡಿ ರಸ್ತೆ ಸಂಸ್ಥೆ(ಬಿಆರ್‌ಒ) 55 ಕಾರ್ಮಿಕರ ಪೈಕಿ 32 ಮಂದಿಯನ್ನು ರಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ 55ಕ್ಕೂ ಹೆಚ್ಚು ಕಾರ್ಮಿಕರು ಹಿಮಪಾತದಲ್ಲಿ ಸಿಲುಕಿಕೊಂಡಿದ್ದರು. ಇದುವರೆಗೆ 32 ಜನರನ್ನು ರಕ್ಷಿಸಲಾಗಿದೆ. ಇನ್ನೂ 23 ಕಾರ್ಮಿಕರು ಹಿಮದಡಿ ಸಿಲುಕಿದ್ದು, ಭಾರೀ ಹಿಮಪಾತದಿಂದಾಗಿ ರಕ್ಷಣಾ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ಮಾನಾದ ಗಡಿ ಪ್ರದೇಶದ ಗಡಿ ರಸ್ತೆ ಸಂಸ್ಥೆ ಶಿಬಿರದ ಬಳಿ ಭಾರೀ ಹಿಮಪಾತ ಸಂಭವಿಸಿದ್ದು, ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ 57 ಕಾರ್ಮಿಕರು ಸಿಲುಕಿಕೊಂಡಿದ್ದಾರೆ. ಈ ಕಾರ್ಮಿಕರಲ್ಲಿ 32 ಕಾರ್ಮಿಕರನ್ನು ರಕ್ಷಿಸಿ ಮಾನಾ ಬಳಿಯ ಸೇನಾ ಶಿಬಿರಕ್ಕೆ ಕಳುಹಿಸಲಾಗಿದೆ" ಎಂದು ಉತ್ತರಾಖಂಡ ಪೊಲೀಸ್ ವಕ್ತಾರ ನೀಲೇಶ್ ಆನಂದ್ ಭರ್ನೆ ಎಎನ್‌ಐಗೆ ತಿಳಿಸಿದ್ದಾರೆ.

ಮೂರರಿಂದ ನಾಲ್ಕು ಆಂಬ್ಯುಲೆನ್ಸ್‌ಗಳನ್ನು ಕಳುಹಿಸಲಾಗಿದೆ. ಆದರೆ ಭಾರೀ ಹಿಮಪಾತದಿಂದಾಗಿ, ರಕ್ಷಣಾ ತಂಡ ಸ್ಥಳಕ್ಕೆ ತಲುಪಲು ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದೆ ಎಂದು ಬಿಆರ್‌ಒ(ಗಡಿ ರಸ್ತೆ ಸಂಸ್ಥೆ) ಕಾರ್ಯನಿರ್ವಾಹಕ ಎಂಜಿನಿಯರ್ ಸಿಆರ್ ಮೀನಾ ಅವರು ಹೇಳಿದ್ದಾರೆ.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಘಟನೆಯ ಬಗ್ಗೆ ಎಕ್ಸ್‌ನಲ್ಲಿ ದುಃಖ ವ್ಯಕ್ತಪಡಿಸಿದ್ದು, ಐಟಿಬಿಪಿ, ಬಿಆರ್‌ಒ ಮತ್ತು ಇತರ ರಕ್ಷಣಾ ತಂಡಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ ಎಂದು ತಿಳಿಸಿದ್ದಾರೆ.

"ಚಮೋಲಿ ಜಿಲ್ಲೆಯ ಮಾನಾ ಗ್ರಾಮದ ಬಳಿ ಬಿಆರ್‌ಒ ನಡೆಸುತ್ತಿರುವ ನಿರ್ಮಾಣ ಕಾರ್ಯದ ಸಮಯದಲ್ಲಿ ಅನೇಕ ಕಾರ್ಮಿಕರು ಹಿಮಪಾತದ ಅಡಿಯಲ್ಲಿ ಸಮಾಧಿಯಾಗಿರುವ ಬಗ್ಗೆ ದುಃಖದ ಸುದ್ದಿ ಬಂದಿದೆ. ಐಟಿಬಿಪಿ, ಬಿಆರ್‌ಒ ಮತ್ತು ಇತರ ರಕ್ಷಣಾ ತಂಡಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಎಲ್ಲಾ ಕಾರ್ಮಿಕ ಸಹೋದರರ ಸುರಕ್ಷತೆಗಾಗಿ ನಾನು ಭಗವಾನ್ ಬದ್ರಿ ವಿಶಾಲ್‌ನಲ್ಲಿ ಪ್ರಾರ್ಥಿಸುತ್ತೇನೆ" ಎಂದು ಧಾಮಿ ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ.

ಉತ್ತರಖಂಡ್‌ನ ಮಾಲಾದಿಂದ ಘಸೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಈ ಸುದ್ದಿ ತಿಳಿಯುತ್ತಿದ್ದಂತೆ ಪ್ರಧಾನಿ ನರೇಂದ್ರಮೋದಿ ಅವರು ಉತ್ತರಖಂಡ್‌ ಮುಖ್ಯಮಂತ್ರಿ ಪುಷ್ಕರ್‌ ಧಾಮಿ ಜೊತೆ ಮಾತನಾಡಿ ರಕ್ಷಣಾ ಕಾರ್ಯದ ಬಗ್ಗೆ ಎಲ್ಲಾ ರೀತಿಯ ನೆರವು ನೀಡುವುದಾಗಿ ಅಭಯ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT