ಪುಣೆ ಪೊಲೀಸರು  
ದೇಶ

ಪುಣೆ ಬಸ್ಸಿನಲ್ಲಿ ಅತ್ಯಾಚಾರ ಪ್ರಕರಣ: ನಾಪತ್ತೆಯಾಗಿದ್ದ ಆರೋಪಿ ಕೊನೆಗೂ ಬಂಧನ

ಆರಂಭದಲ್ಲಿ ಮಹಿಳೆಯನ್ನು ಅಕ್ಕ ಎಂದು ಕರೆದು ಮಾತಾಡಿಸಿದ್ದ ಆರೋಪಿ, ಬಳಿಕ ಸತಾರಾಕ್ಕೆ ಹೋಗುವ ಬಸ್ ಮತ್ತೊಂದು ಪ್ಲಾಟ್‌ಫಾರ್ಮ್‌ಗೆ ಬಂದಿದೆ ಎಂದು ಹೇಳಿ, ನಿಲ್ಲಿಸಿದ್ದ ಖಾಲಿ ಬಸ್‌ ಬಳಿ ಕರೆದೊಯ್ದಿದ್ದ.

ಪುಣೆ: ಪುಣೆಯ ಸ್ವಾರ್ಗೇಟ್​ ಬಸ್​ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ಧಾರೆ.

ಬಂಧಿತ ಆರೋಪಿಯನ್ನು ಪುಣೆಯ ಗುನಾತ್ ಗ್ರಾಮದ ದತ್ತಾತ್ರಯ ರಾಮದಾಸ್ ಗಡೆ (37) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಶಿರೂರಿನಲ್ಲಿ ಬಂಧಿಸಿರುವ ಪೊಲೀಸರು, ಪುಣೆಗೆ ಕರೆತರುತ್ತಿದ್ದಾರೆ.

ಬಂಧಿತ ಆರೋಪಿ ಮಂಗಳವಾರ ಬೆಳಿಗ್ಗೆ ಪೊಲೀಸ್ ಠಾಣೆಯಿಂದ 100 ಮೀಟರ್ ದೂರದಲ್ಲಿದ್ದ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸ್ವರ್ಗೇಟ್ ಬಸ್ ನಿಲ್ದಾಣದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ.

ಆರಂಭದಲ್ಲಿ ಮಹಿಳೆಯನ್ನು ಅಕ್ಕ ಎಂದು ಕರೆದು ಮಾತಾಡಿಸಿದ್ದ ಆರೋಪಿ, ಬಳಿಕ ಸತಾರಾಕ್ಕೆ ಹೋಗುವ ಬಸ್ ಮತ್ತೊಂದು ಪ್ಲಾಟ್‌ಫಾರ್ಮ್‌ಗೆ ಬಂದಿದೆ ಎಂದು ಹೇಳಿ, ನಿಲ್ಲಿಸಿದ್ದ ಖಾಲಿ ಬಸ್‌ ಬಳಿ ಕರೆದೊಯ್ದಿದ್ದ. ಮಹಿಳೆ ಬಸ್ಸಿನೊಳಗೆ ಲೈಟ್‌ ಆನ್‌ ಇರದ ಕಾರಣ ಬಸ್‌ ಹತ್ತಲು ಹಿಂಜರಿದಿದ್ದಳು. ಈ ವೇಳೆ, ಇದೇ ಸರಿಯಾದ ಬಸ್‌ ಎಂದು ಹೇಳಿ ಒಳಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ.

ಆರೋಪಿಯು ಹಲವಾರು ತಿಂಗಳುಗಳಿಂದ ಪೊಲೀಸರ ಸೋಗಿನಲ್ಲಿ ಓಡಾಡಿಕೊಂಡಿದ್ದ ಎಂದು ಹೇಳಲಾಗಿದೆ. ಆತನ ವಿರುದ್ಧ ಪುಣೆ ಮತ್ತು ಅಹಲ್ಯಾನಗರ ಜಿಲ್ಲೆಗಳಲ್ಲಿ ಕಳ್ಳತನ, ದರೋಡೆ ಮತ್ತು ಸರಗಳ್ಳತನದ ಪ್ರಕರಣಗಳಿವೆ ಎಂದು ತಿಳಿದುಬಂದಿದೆ.

ಅಲ್ಲದೆ, ಪ್ರಕರಣ ಒಂದರಲ್ಲಿ ಆತ 2019ರಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಈ ನಡುವೆ ಆರೋಪಿ ಬಂಧನಕ್ಕಾಗಿ ಪೊಲೀಸರು ಮಹಾರಾಷ್ಟ್ರದಾದ್ಯಂತ ಒಟ್ಟು 13 ತಂಡಗಳನ್ನು ನಿಯೋಜಿಸಿದ್ದರು. ಶೋಧ ಕಾರ್ಯಾಚರಣೆಯ ಭಾಗವಾಗಿ ಸ್ನಿಫರ್ ಡಾಗ್ಸ್ ಮತ್ತು ಡ್ರೋನ್‌ಗಳನ್ನೂ ಕೂಡ ನಿಯೋಜಿಸಿದ್ದರು.

ಆರೋಪಿ ಇರುವಿಕೆಯ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ನಗದು ಬಹುಮಾನವನ್ನೂ ಕೂಡ ಪುಣೆ ಪೊಲೀಸರು ಘೋಷಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran war: ಅಲಿ ಖಮೇನಿ ಪುತ್ರ ಮೊಜ್ತಾಬಾ ಖಮೇನಿ ಇರಾನ್ ನೂತನ ಪರಮೋಚ್ಛ ನಾಯಕರಾಗಿ ಆಯ್ಕೆ

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಅವರನ್ನು ನಿರ್ಮೂಲನೆ ಮಾಡುತ್ತೇವೆ: ಇಸ್ರೇಲ್ ಬೆದರಿಕೆ

ರೋಚಕ ಎನಿಸುವ ಇರಾನ್ ಸಮರಾಂಗಣ ವಿಶ್ಲೇಷಣೆಗಳ ಅಸಲಿಯತ್ತೇನು? (ತೆರೆದ ಕಿಟಕಿ)

US-Israel Iran War: ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದ್ದೇ ಆದರೆ, ರಾಜ್ಯದ ಆರ್ಥಿಕತೆ ಮೇಲೆ ಭಾರೀ ಹೊಡೆತ..!

Israel Iran war: ಭಾರತಕ್ಕೆ ಬಿಗ್ ಶಾಕ್, ಕತಾರ್ ನಿಂದ ಕೈಗಾರಿಕೆಗಳಿಗೆ ಅನಿಲ ಸರಬರಾಜು ಕಡಿತ!

SCROLL FOR NEXT