ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ಮುರ್ಮು-ಪ್ರಧಾನಿ ಮೋದಿ ಭೇಟಿ (ಸಂಗ್ರಹ ಚಿತ್ರ) 
ದೇಶ

ದೇಶದಾದ್ಯಂತ ಹೊಸ ವರ್ಷದ ಸಂಭ್ರಮ: ಜನತೆಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಶುಭಾಶಯ

ಹೊಸ ವರ್ಷದ ಶುಭಾಶಯಗಳು. ಈ ವರ್ಷ ಎಲ್ಲರಿಗೂ ಹೊಸ ಅವಕಾಶಗಳು, ಯಶಸ್ಸು ಮತ್ತು ಅಂತ್ಯವಿಲ್ಲದ ಸಂತೋಷವನ್ನು ತರಲಿ. ಪ್ರತಿಯೊಬ್ಬರೂ ಆರೋಗ್ಯ ಮತ್ತು ಸಮೃದ್ಧಿ ಲಭಿಸಲಿ.

ನವದೆಹಲಿ: ದೇಶದಾದ್ಯಂತ ಹೊಸ ವರ್ಷದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಗಣ್ಯರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. 2025 ರ ವರ್ಷವು ಎಲ್ಲರಿಗೂ ಸಂತೋಷ, ಸಾಮರಸ್ಯ ಮತ್ತು ಸಮೃದ್ಧಿಯನ್ನು ತರಲಿ. ಈ ಸಂದರ್ಭದಲ್ಲಿ ಭಾರತ ಮತ್ತು ವಿಶ್ವಕ್ಕೆ ಉಜ್ವಲ, ಅಂತರ್ಗತ ಮತ್ತು ಸುಸ್ಥಿರ ಭವಿಷ್ಯವನ್ನು ಸೃಷ್ಟಿಸಲು ಒಟ್ಟಾಗಿ ಕೆಲಸ ಸಂಕಲ್ಪ ಮಾಡೋಣ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿಯವರು ಟ್ವೀಟ್ ಮಾಡಿ ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಈ ವರ್ಷ ಎಲ್ಲರಿಗೂ ಹೊಸ ಅವಕಾಶಗಳು, ಯಶಸ್ಸು ಮತ್ತು ಅಂತ್ಯವಿಲ್ಲದ ಸಂತೋಷವನ್ನು ತರಲಿ. ಪ್ರತಿಯೊಬ್ಬರೂ ಆರೋಗ್ಯ ಮತ್ತು ಸಮೃದ್ಧಿ ಲಭಿಸಲಿ ಎಂದು ತಿಳಿಸಿದ್ದಾರೆ.

2025ರ ವರ್ಷ ನಿಮ್ಮ ಪಾಲಿಗೆ ಭರವಸೆ, ಸಂತೋಷ ಮತ್ತು ಬಹಳಷ್ಟು ಯಶಸ್ಸಿನಿಂದ ಕೂಡಿರಲಿ. ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸಿಗುವಂತಾಗಲಿ ಎಂದು ಆಶಿಸುತ್ತೇನೆ’ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಟ್ವೀಟ್ ಮಾಡಿ, ನಿಮ್ಮೆಲ್ಲರಿಗೂ ಹೊಸ ವರ್ಷದ ಶುಭಾಶಯಗಳು, ಈ ವರ್ಷವು ನಿಮ್ಮ ಜೀವನದಲ್ಲಿ ಹೊಸ ಉತ್ಸಾಹ, ಹೊಸ ಸಂತೋಷ ತರಲಿ ಎಂದು ಆಶಿಸುತ್ತೇನೆ’ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT