ನಿತೀಶ್ ಕುಮಾರ್ 
ದೇಶ

ನಿತೀಶ್‌ ಕುಮಾರ್‌ಗೆ ಮೈತ್ರಿ ಬಾಗಿಲು ಸದಾ ತೆರೆದಿರುತ್ತದೆ: ಲಾಲು ಹೇಳಿಕೆಗೆ ಜೆಡಿಯು ಪ್ರತಿಕ್ರಿಯೆ ಹೀಗಿತ್ತು...

ಆರ್‌ಜೆಡಿ ಮುಖ್ಯಸ್ಥರು ಆತಂಕದಿಂದ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಬಿಹಾರ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಹೇಳಿದ್ದಾರೆ.

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ಗೆ ಮೈತ್ರಿ ಬಾಗಿಲು ಸದಾ ತೆರೆದಿರುತ್ತದೆ ಎಂಬ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್‌ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಹಾಗೂ ಜೆಡಿಯು ನಾಯಕ ಲಲ್ಲನ್‌ ಸಿಂಗ್‌ ಅವರು, ತಮ್ಮ ಪಕ್ಷ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್‌ಡಿಎ)ದ ಜತೆಗಿದೆ ಎಂದು ಗುರುವಾರ ಹೇಳಿದ್ದಾರೆ.

"...ನಾವು ಎನ್‌ಡಿಎ ಜೊತೆಗಿದ್ದೇವೆ ಮತ್ತು ಸಂಪೂರ್ಣ ಮೈತ್ರಿಗೆ ಬದ್ಧವಾಗಿದ್ದೇವೆ. ಬೇರೆಯವರು ಹೇಳುವುದಕ್ಕೆ ನಾನು ಪ್ರತಿಕ್ರಿಯಿಸಲಾರೆ. ಅವರಿಗೆ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ; ಜನರು ಏನು ಬೇಕಾದರೂ ಹೇಳಬಹುದು ಎಂದು ಸಿಂಗ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಸಿಎಂ ನಿತೀಶ್‌ ಕುಮಾರ್‌ಗೆ ಪ್ರತಿಪಕ್ಷಗಳ ಮೈತ್ರಿ ಬಾಗಿಲು ಸದಾ ತೆರೆದಿರುತ್ತದೆ ಎಂದು ಲಾಲು ಪ್ರಸಾದ್ ಯಾದವ್ ಅವರು ಹೇಳಿದ ನಂತರ ಜೆಡಿಯು ಈ ರೀತಿ ಪ್ರತಿಕ್ರಿಯೆ ನೀಡಿದೆ.

ಆದರೆ, ಲಾಲು ಹೇಳಿಕೆಗೆ ಪ್ರತಿಕ್ರಿಯಿಸಿದ ಅವರ ಪುತ್ರ ತೇಜಸ್ವಿ ಯಾದವ್ ಅವರು, "ನೀವು ಅವರನ್ನು ಈ ರೀತಿ ಕೇಳುತ್ತಲೇ ಇರುತ್ತೀರಿ; ಅವರು ಇನ್ನೇನು ಹೇಳುತ್ತಾರೆ? ಅವರು ನಿಮ್ಮೆಲ್ಲರನ್ನು ಸಮಾಧಾನಪಡಿಸಲು ಹೀಗೆ ಹೇಳಿದ್ದಾರೆ" ಎಂದರು.

ಆರ್‌ಜೆಡಿ ಮುಖ್ಯಸ್ಥರು ಆತಂಕದಿಂದ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಬಿಹಾರ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಹೇಳಿದ್ದಾರೆ.

ಇನ್ನು ಗಾಂಧಿ ಅನುಯಾಯಿಗಳು, ಗೋಡ್ಸೆ ಅನುಯಾಯಿಗಳಿಂದ ಬೇರ್ಪಟ್ಟರೆ ನಾವು ಅವರೊಂದಿಗೆ ಇದ್ದೇವೆ ಎಂದು ಕಾಂಗ್ರೆಸ್ ನಾಯಕ ಶಕೀಲ್ ಅಹ್ಮದ್ ಖಾನ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್