ಪ್ರಪಾತಕ್ಕೆ ಬಿದ್ದ ಸೇನಾ ವಾಹನ ನಜ್ಜುಗುಜ್ಜಾಗಿರುವ ಚಿತ್ರ 
ದೇಶ

ಜಮ್ಮು-ಕಾಶ್ಮೀರ: ರಸ್ತೆಯಲ್ಲಿ ಸ್ಕೀಡ್ ಆಗಿ ಪ್ರಪಾತಕ್ಕೆ ಬಿದ್ದ ಸೇನಾ ವಾಹನ, ನಾಲ್ವರು ಯೋಧರು ಹುತಾತ್ಮ!

ಉತ್ತರ ಕಾಶ್ಮೀರ ಜಿಲ್ಲೆಯ ಎಸ್ ಕೆ ಪಾಯನ್ ಬಳಿ ಈ ಘಟನೆ ನಡೆದಿದೆ. ಪ್ರತಿಕೂಲ ಹವಾಮಾನ ಮತ್ತು ಅಸ್ಪಷ್ಟ ಗೋಚರತೆಯಿಂದಾಗಿ ರಸ್ತೆಯಲ್ಲಿ ಸ್ಕೀಡ್ ಆಗಿ ಸೇನಾ ವಾಹನಕ್ಕೆ ಪ್ರಪಾತಕ್ಕೆ ಉರುಳಿ ಬಿದ್ದಿದೆ.

ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನಗಳ ಅಪಘಾತ ಮುಂದುವರೆದಿದೆ. ಕಳೆದ ವಾರವಷ್ಟೇ ಸೇನಾ ವಾಹನವೊಂದು ಕಮರಿಗೆ ಉರುಳಿ ಬಿದ್ದ ಪರಿಣಾಮ ಕರ್ನಾಟಕದ ನಾಲ್ವರು ಸೇರಿದಂತೆ ಒಟ್ಟು ಐದು ಮಂದಿ ಯೋಧರು ಹುತಾತ್ಮರಾಗಿದ್ದರು. ಇದೀಗ ಬಂಡಿಪೋರಾ ಜಿಲ್ಲೆಯಲ್ಲಿ ಮತ್ತೆ ಅಂತಹುದೇ ಅಪಘಾತ ಸಂಭವಿಸಿದೆ.

ಸೇನಾ ವಾಹನವೊಂದು ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಉತ್ತರ ಕಾಶ್ಮೀರ ಜಿಲ್ಲೆಯ ಎಸ್ ಕೆ ಪಾಯನ್ ಬಳಿ ಈ ಘಟನೆ ನಡೆದಿದೆ.

ಪ್ರತಿಕೂಲ ಹವಾಮಾನ ಮತ್ತು ಅಸ್ಪಷ್ಟ ಗೋಚರತೆಯಿಂದಾಗಿ ರಸ್ತೆಯಲ್ಲಿ ಸ್ಕೀಡ್ ಆಗಿ ಸೇನಾ ವಾಹನ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಪರಿಣಾಮ ಮೂವರು ಯೋಧರು ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿರುವುದಾಗಿ ಸೇನೆಯ ಚಿನಾರ್ ಕಾರ್ಪ್ಸ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಹಿತಿ ಹಂಚಿಕೊಂಡಿತ್ತು. ಘಟನೆಯಲ್ಲಿ ಗಾಯಗೊಂಡ ಯೋಧರನ್ನು ಸ್ಥಳೀಯ ಜನರ ನೆರವಿನಿಂದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಕೂಡಲೇ ಸ್ಪಂದಿಸಿದ ನಾಗರಿಕರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿತ್ತು.

ಇದಾದ ಕೆಲವು ತಾಸುಗಳ ಬಳಿಕ ಮತ್ತೊಂದು ಫೋಸ್ಟ್ ಮಾಡಿರುವ Army's Chinar Corps, ಘಟನೆಯಲ್ಲಿ ಗಾಯಗೊಂಡಿದ್ದ ಮತ್ತೋರ್ವ ಯೋಧ ಹುತಾತ್ಮರಾಗಿರುವುದಾಗಿ ತಿಳಿಸಿದೆ.

ಭಾರತೀಯ ಯೋಧರ ಸಾವಿಗೆ ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ತೀವ್ರ ಸಂತಾಪ ಸೂಚಿಸಿದ್ದಾರೆ. ಹುತಾತ್ಮ ಯೋಧರ ಸೇವೆ ಮತ್ತು ಬದ್ಧತೆಗೆ ರಾಷ್ಟ್ರ ಕೃತಜ್ಞವಾಗಿದೆ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

FlyDubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್; 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ; ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ; Video!