ಜಗಜಿತ್ ಸಿಂಗ್ ದಲ್ಲೆವಾಲ್ 
ದೇಶ

'ರೈತರಿಗಿಂತ ನನ್ನ ಜೀವ ಮುಖ್ಯವಲ್ಲ': ಖಾನೌರಿ ಮಹಾಪಂಚಾಯತ್‌ನಲ್ಲಿ ದಲ್ಲೆವಾಲ್

"ಸಂಕಷ್ಟದಲ್ಲಿ ತತ್ತರಿಸುತ್ತಿರುವ ಲಕ್ಷಾಂತರ ಭಾರತೀಯ ರೈತರ ಜೀವಕ್ಕಿಂತ ನನ್ನ ಜೀವ ಮುಖ್ಯವಲ್ಲ. ಈಗಾಗಲೇ ಏಳು ಲಕ್ಷಕ್ಕೂ ಹೆಚ್ಚು ರೈತರು ಕೃಷಿ ವಲಯದಲ್ಲಿನ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ"

ಚಂಡೀಗಢ: ಕನಿಷ್ಠ ಬೆಂಬಲ ಬೆಲೆ(ಎಂಎಸ್​ಪಿ)ಗೆ ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ 40 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರು 'ನಿಮಗಿಂತ ನನ್ನ ಜೀವ ಮುಖ್ಯವಲ್ಲ' ಎಂದು ಶನಿವಾರ ರೈತರಿಗೆ ಹೇಳಿದ್ದಾರೆ.

ಇಂದು ಖಾನೌರಿ ಗಡಿಯಲ್ಲಿ(ಪಂಜಾಬ್-ಹರಿಯಾಣ ಗಡಿ) ಕಿಸಾನ್ ಮಹಾಪಂಚಾಯತ್ ಅನ್ನು ಉದ್ದೇಶಿಸಿ ಮಾತನಾಡಿದ ದಲ್ಲೆವಾಲ್ ಅವರು, ಸವಾಲುಗಳಿಂದ "ಸಂಕಷ್ಟದಲ್ಲಿ ತತ್ತರಿಸುತ್ತಿರುವ" ತಮ್ಮ ಸಹವರ್ತಿ ರೈತರ ಜೀವನದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದಾಗಿ ತಿಳಿಸಿದ್ದಾರೆ.

"ಸಂಕಷ್ಟದಲ್ಲಿ ತತ್ತರಿಸುತ್ತಿರುವ ಲಕ್ಷಾಂತರ ಭಾರತೀಯ ರೈತರ ಜೀವಕ್ಕಿಂತ ನನ್ನ ಜೀವ ಮುಖ್ಯವಲ್ಲ. ಈಗಾಗಲೇ ಏಳು ಲಕ್ಷಕ್ಕೂ ಹೆಚ್ಚು ರೈತರು ಕೃಷಿ ವಲಯದಲ್ಲಿನ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ" ಎಂದು ದಲ್ಲೆವಾಲ್ ಹೇಳಿದರು.

ಆಮರಣಾಂತ ಉಪವಾಸ ಸತ್ಯಾಗ್ರಹದ 40ನೇ ದಿನದಂದು ರೈತರ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ದಲ್ಲೆವಾಲ್, ಸಂಯುಕ್ತ ಕಿಸಾನ್ ಮೋರ್ಚಾ(ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಬ್ಯಾನರ್ ಅಡಿಯಲ್ಲಿ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ ಖಾನೌರಿ ಗಡಿಯಲ್ಲಿರುವ ಪ್ರತಿ ಹಳ್ಳಿಯಿಂದ ರೈತರು ಭಾಗವಹಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನಾ ನಿರತ ರೈತರ ನಿರಂತರ ಬೆಂಬಲಕ್ಕೆ ಧನ್ಯವಾದ ಹೇಳಿದ 70 ವರ್ಷದ ರೈತ ನಾಯಕ ದಲ್ಲೆವಾಲ್ ಅವರು, ಹೋರಾಟದಲ್ಲಿ ಒಗ್ಗಟ್ಟಾಗಿ ಇರುವಂತೆ ಒತ್ತಾಯಿಸಿದರು.

ದಲ್ಲೆವಾಲ್‌ ಅವರನ್ನು ಸ್ಟ್ರೆಚರ್‌ನಲ್ಲಿ ಪ್ರತಿಭಟನಾ ಸ್ಥಳಕ್ಕೆ ತರಲಾಗಿದ್ದು, ಅವರು ವೇದಿಕೆಯಲ್ಲಿ ಹಾಸಿಗೆಯಲ್ಲಿ ಮಲಗಿಕೊಂಡೇ ರೈತರ ಸಮಾವೇಶವನ್ನುದ್ದೇಶಿಸಿ ಮಾತನಾಡಿದರು. ,ಆರೋಗ್ಯ ಹದಗೆಟ್ಟಿದ್ದರೂ ಯಾವುದೇ ವೈದ್ಯಕೀಯ ನೆರವು ಪಡೆಯಲು ಅವರು ಈವರೆಗೆ ನಿರಾಕರಿಸುತ್ತಲೇ ಬಂದಿದ್ದಾರೆ.

ಕಳೆದ ಕೆಲವು ದಿನಗಳಲ್ಲಿ ದಲ್ಲೆವಾಲ್ ಅವರು ಕಿರು ವೀಡಿಯೊ ಸಂದೇಶಗಳ ಮೂಲಕ ರೈತರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಆದರೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ ಬಳಿಕ ಶನಿವಾರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT