ದೇಶ

ಜಾತಿ ರಾಜಕಾರಣ ಹೆಸರಿನಲ್ಲಿ ಕೆಲವರು ಶಾಂತಿ ಕದಡಲು ಯತ್ನಿಸುತ್ತಿದ್ದಾರೆ: ಪ್ರಧಾನಿ ಮೋದಿ

ದೆಹಲಿಯಲ್ಲಿ ಗ್ರಾಮೀಣ ಭಾರತ ಮಹೋತ್ಸವವನ್ನು ಉದ್ಘಾಟಿಸಿದ ಪ್ರಧಾನ ಮಂತ್ರಿಯವರು, 2047 ರ ವೇಳೆಗೆ ವಿಕಸಿತ ಭಾರತ ಕನಸನ್ನು ಮುಂದಕ್ಕೆ ತೆಗೆದುಕೊಂಡು ಹೋಗುವಲ್ಲಿ ಗ್ರಾಮಗಳು ಪ್ರಮುಖ ಪಾತ್ರ ವಹಿಸಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನವದೆಹಲಿ: ಜಾತಿ ರಾಜಕಾರಣ ಹೆಸರಿನಲ್ಲಿ ಕೆಲವರು ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದ್ದಾರೆ ಎಂದಿರುವ ಪ್ರಧಾನಿ ನರೇಂದ್ರ ಮೋದಿ, ದೇಶದ ಗ್ರಾಮೀಣ ಭಾಗಗಳಲ್ಲಿ ಸಾಮಾಜಿಕ ಸೌಹಾರ್ದತೆಯನ್ನು ಕಾಪಾಡಲು ಇಂತಹ ಕುಕೃತ್ಯಗಳನ್ನು ವಿಫಲಗೊಳಿಸುವಂತೆ ಕರೆ ನೀಡಿದ್ದಾರೆ.

ಇಂದು ದೆಹಲಿಯಲ್ಲಿ ಗ್ರಾಮೀಣ ಭಾರತ ಮಹೋತ್ಸವವನ್ನು ಉದ್ಘಾಟಿಸಿದ ಪ್ರಧಾನ ಮಂತ್ರಿಯವರು, 2047 ರ ವೇಳೆಗೆ ವಿಕಸಿತ ಭಾರತ ಕನಸನ್ನು ಮುಂದಕ್ಕೆ ತೆಗೆದುಕೊಂಡು ಹೋಗುವಲ್ಲಿ ಗ್ರಾಮಗಳು ಪ್ರಮುಖ ಪಾತ್ರ ವಹಿಸಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಾತಿ ರಾಜಕಾರಣದ ವಿಷವನ್ನು ಹರಡುವ ಮೂಲಕ ಕೆಲವರು ಶಾಂತಿ ಕದಡಲು ಪ್ರಯತ್ನಿಸುತ್ತಿದ್ದಾರೆ ಎಂದು ಯಾರ ಹೆಸರನ್ನು ಉಲ್ಲೇಖಿಸದೆ ಮೋದಿ ಹೇಳಿದರು. ಗ್ರಾಮಗಳಲ್ಲಿ ಶಾಂತಿ ಸೌಹಾರ್ದತೆಯ ಪರಂಪರೆಯನ್ನು ಬಲಪಡಿಸುವ ಕೆಲಸ ಮಾಡಬೇಕಾಗಿದೆ ಎಂದರು.

2014 ರಿಂದ ಎನ್‌ಡಿಎ ಸರ್ಕಾರವು ಗ್ರಾಮೀಣಾಭಿವೃದ್ಧಿಗಾಗಿ ಕೈಗೊಂಡ ಕ್ರಮಗಳನ್ನು ನೆನಪಿಸಿಕೊಂಡ ಮೋದಿ, ಎಸ್‌ಬಿಐ ಸಂಶೋಧನಾ ವರದಿಯನ್ನು ಉಲ್ಲೇಖಿಸಿ, ಗ್ರಾಮೀಣ ಭಾರತದಲ್ಲಿ ಬಡತನವು 2012 ರಲ್ಲಿ ಶೇಕಡಾ 26 ರಿಂದ ಈಗ ಶೇಕಡಾ 5 ಕ್ಕಿಂತ ಕಡಿಮೆಯಾಗಿದೆ ಎಂದು ಹೇಳಿದರು.

ಸ್ವಾತಂತ್ರ್ಯ ಸಿಕ್ಕಿದ ದಶಕಗಳ ನಂತರವೂ ಗ್ರಾಮೀಣ ಭಾರತವನ್ನು ನಿರ್ಲಕ್ಷಿಸಿಕೊಂಡು ಬರಲಾಗುತ್ತಿತ್ತು. ಮೂಲಭೂತ ಅವಶ್ಯಕತೆಗಳಿಂದ ವಂಚಿತವಾಗಿರುವ ಗ್ರಾಮಗಳನ್ನು ಬಿಟ್ಟುಹೋದ ಹಿಂದಿನ ಸರ್ಕಾರಕ್ಕಿಂತ ಭಿನ್ನವಾಗಿ ಇಂದಿನ ನಮ್ಮ ಸರ್ಕಾರವು ಈಗ ಹಳ್ಳಿಗಳನ್ನು ಸಬಲೀಕರಣಗೊಳಿಸಲು ಮತ್ತು ಆರಂಭದಲ್ಲಿ ಕಡೆಗಣಿಸಲ್ಪಟ್ಟವರ ಅಗತ್ಯಗಳನ್ನು ಪರಿಹರಿಸಲು ಗಮನಹರಿಸಿದೆ ಎಂದು ಒತ್ತಿ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಪ್ರಧಾನ ಮಂತ್ರಿ ಜನ್ ಧನ್ ಯೋಜನೆ, ಪಿಎಂ ಮುದ್ರಾ ಮತ್ತು ಪಿಎಂ ಸ್ವನಿಧಿ ಸೇರಿದಂತೆ 16 ಸರ್ಕಾರಿ ಯೋಜನೆಗಳಿಗೆ ಬ್ಯಾಂಕ್‌ಗಳು ಸ್ಯಾಚುರೇಶನ್ ಅಭಿಯಾನವನ್ನು ಕೈಗೊಂಡಿವೆ.

ಮಹೋತ್ಸವವು ವಿವಿಧ ಚರ್ಚೆಗಳು, ಕಾರ್ಯಾಗಾರಗಳು ಮತ್ತು ಮಾಸ್ಟರ್‌ಕ್ಲಾಸ್‌ಗಳ ಮೂಲಕ, ಗ್ರಾಮೀಣ ಮೂಲಸೌಕರ್ಯಗಳನ್ನು ಹೆಚ್ಚಿಸಲು, ಸ್ವಾವಲಂಬಿ ಆರ್ಥಿಕತೆಯನ್ನು ಸೃಷ್ಟಿಸಲು ಮತ್ತು ಗ್ರಾಮೀಣ ಸಮುದಾಯಗಳಲ್ಲಿ ನಾವೀನ್ಯತೆಯನ್ನು ಬೆಳೆಸುವ ಗುರಿಯನ್ನು ಹೊಂದಿದೆ.

ಇದರ ಉದ್ದೇಶಗಳು ಆರ್ಥಿಕ ಒಳಗೊಳ್ಳುವಿಕೆ ಮತ್ತು ಸುಸ್ಥಿರ ಕೃಷಿ ಪದ್ಧತಿಗಳನ್ನು ಬೆಂಬಲಿಸುವ ಮೂಲಕ ಈಶಾನ್ಯ ಭಾರತದ ಮೇಲೆ ವಿಶೇಷ ಗಮನವನ್ನು ನೀಡುವ ಮೂಲಕ ಗ್ರಾಮೀಣ ಜನಸಂಖ್ಯೆಯಲ್ಲಿ ಆರ್ಥಿಕ ಸ್ಥಿರತೆ ಮತ್ತು ಆರ್ಥಿಕ ಭದ್ರತೆಯನ್ನು ಉತ್ತೇಜಿಸುವುದನ್ನು ಒಳಗೊಂಡಿವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT