ದೇಶ

ಬಿಜಾಪುರದಲ್ಲಿ ನಕ್ಸಲೀಯರ ಅಟ್ಟಹಾಸ: ಐಇಡಿ ಬಳಸಿ ಸೇನಾ ವಾಹನ ಸ್ಫೋಟ; 9 ಯೋಧರು ಹುತಾತ್ಮ, ದೇಹಗಳು ಚೆಲ್ಲಾಪಿಲ್ಲಿ! Video

ಬಸ್ತಾರ್ ಪೊಲೀಸರಿಂದ ಬಂದ ಮಾಹಿತಿಯ ಪ್ರಕಾರ, ಬಿಜಾಪುರದ ಕುಟ್ರು-ಬೇದ್ರೆ ರಸ್ತೆಯಲ್ಲಿ ನಕ್ಸಲೀಯರು ಐಇಡಿ ಸ್ಫೋಟ ನಡೆಸಿದ್ದಾರೆ.

ಬಿಜಾಪುರ: ಛತ್ತೀಸ್‌ಗಢದ ನಕ್ಸಲ್ ಪೀಡಿತ ಪ್ರದೇಶವಾದ ಬಿಜಾಪುರದಲ್ಲಿ ನಕ್ಸಲೀಯರು ದೊಡ್ಡ ಕುಕೃತ್ಯ ಎಸಗಿದ್ದಾರೆ. ಜಂಟಿ ಕಾರ್ಯಾಚರಣೆಯಿಂದ ಹಿಂದಿರುಗುತ್ತಿದ್ದ ಸೇನಾ ವಾಹನವನ್ನು ನಕ್ಸಲಿಯರು ಐಇಡಿಯಿಂದ ಸ್ಫೋಟಿಸಿದ್ದಾರೆ. ಸ್ಫೋಟದಲ್ಲಿ 8 ಯೋಧರು ಮತ್ತು ಚಾಲಕ ಹುತಾತ್ಮರಾಗಿದ್ದಾರೆ. ಹುತಾತ್ಮರಾದ ಎಲ್ಲಾ ಯೋಧರು ದಾಂತೇವಾಡ ಡಿಆರ್‌ಜಿಯವರು ಎಂದು ಹೇಳಲಾಗಿದೆ. ಈ ಘಟನೆಯನ್ನು ಬಸ್ತಾರ್ ಐಜಿ ಪಿ ಸುಂದರರಾಜ್ ಖಚಿತಪಡಿಸಿದ್ದಾರೆ.

ಬಸ್ತಾರ್ ಪೊಲೀಸರಿಂದ ಬಂದ ಮಾಹಿತಿಯ ಪ್ರಕಾರ, ಬಿಜಾಪುರದ ಕುಟ್ರು-ಬೇದ್ರೆ ರಸ್ತೆಯಲ್ಲಿ ನಕ್ಸಲೀಯರು ಐಇಡಿ ಸ್ಫೋಟ ನಡೆಸಿದ್ದಾರೆ. ದಂತೇವಾಡ, ನಾರಾಯಣಪುರ ಮತ್ತು ಬಿಜಾಪುರದ ಜಂಟಿ ಕಾರ್ಯಾಚರಣೆ ತಂಡವು ಕಾರ್ಯಾಚರಣೆ ಮುಗಿಸಿ ಹಿಂತಿರುಗುತ್ತಿತ್ತು. ಜನವರಿ 6ರಂದು ಮಧ್ಯಾಹ್ನ 2.15ರ ಸುಮಾರಿಗೆ ಬಿಜಾಪುರ ಜಿಲ್ಲೆಯ ಕುಟ್ರು ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಲಿ ಗ್ರಾಮದ ಬಳಿ ಮಾವೋವಾದಿಗಳು ಐಇಡಿ ಸ್ಫೋಟಿಸುವ ಮೂಲಕ ಭದ್ರತಾ ಪಡೆಯ ವಾಹನವನ್ನು ಸ್ಫೋಟಿಸಿದ್ದಾರೆ. ಸ್ಫೋಟದಲ್ಲಿ 9ಕ್ಕೂ ಹೆಚ್ಚು ಯೋಧರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT