ಕರ್ನಾಟಕ, ಗುಜರಾತ್ ನಂತರ ತಮಿಳುನಾಡಿನಲ್ಲೂ HMPV ಪತ್ತೆ; ಚೆನ್ನೈನಲ್ಲಿ ಇಬ್ಬರು ಮಕ್ಕಳಿಗೆ ಪಾಸಿಟಿವ್
ಚೆನ್ನೈನಲ್ಲಿ ಇಬ್ಬರು ಮಕ್ಕಳಿಗೆ ಎಚ್ಎಂಪಿವಿ ಪಾಸಿಟಿವ್ ದೃಢಪಟ್ಟಿದ್ದು, ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಚೆನ್ನೈ: ಭಾರತದಲ್ಲೂ HMPV ಮಾರಣಾಂತಿಕ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಕರ್ನಾಟಕ, ಪಶ್ಚಿಮ ಬಂಗಾಳ ಮತ್ತು ಗುಜರಾತ್ ನಂತರ ಇದೀಗ ತಮಿಳುನಾಡಿನಲ್ಲೂ ಹೊಸ ವೈರಸ್ ಪತ್ತೆಯಾಗಿದೆ.
ಚೆನ್ನೈನಲ್ಲಿ ಇಬ್ಬರು ಮಕ್ಕಳಿಗೆ ಎಚ್ಎಂಪಿವಿ ಪಾಸಿಟಿವ್ ದೃಢಪಟ್ಟಿದ್ದು, ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಈ ಎರಡು ಪ್ರಕರಣಗಳು ನಗರದಲ್ಲಿ ಎರಡು ಆಸ್ಪತ್ರೆಗಳಲ್ಲಿ ವರದಿಯಾಗಿದ್ದು, ಇದರೊಂದಿಗೆ ದೇಶದಲ್ಲಿ ಸೋಂಕಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
HMPV ಕೋವಿಡ್‌ನಂತೆ ಹರಡಲ್ಲ; ಭಯಪಡುವಕರ್ನಾಟಕದಲ್ಲಿ ಮೊದಲ ಸೋಂಕು ಪತ್ತೆಯಾಗಿತ್ತು. ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದ ಮೂರು ಮತ್ತು ಎಂಟು ತಿಂಗಳ ಎರಡು ಮಕ್ಕಳಲ್ಲಿ ಈ ವೈರಸ್ ದೃಢಪಟ್ಟಿತ್ತು.
ಬಳಿಕ, ಗುಜರಾತ್ನ ಅಹಮದಾಬಾದ್ನಲ್ಲಿ 2 ವರ್ಷದ ಮಗುವಿಗೆ ಎಚ್ಎಂಪಿವಿ ತಗುಲಿರುವುದು ಪತ್ತೆಯಾಗಿತ್ತು. ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ 5 ತಿಂಗಳ ಮಗುವಿನಲ್ಲೂ ಈ ವೈರಸ್ ಪತ್ತೆಯಾಗಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.