ಕಲ್ಲಿದ್ದಲು ಗಣಿ ದುರಂತ 
ದೇಶ

Assam coal mine tragedy: 3 ಮೃತದೇಹ ಪತ್ತೆ; ವಿಶಾಖಪಟ್ಟಣಂ ಮುಳುಗು ತಜ್ಞರಿಗೆ ಬುಲಾವ್; ಸೇನೆಯಿಂದ ರಕ್ಷಣಾ ಕಾರ್ಯಾಚರಣೆ

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ 30 ಸದಸ್ಯರ ತಂಡವು ಸ್ಥಳದಲ್ಲಿ ಬೀಡುಬಿಟ್ಟಿದ್ದು, ಎಂಟು ಸಿಬ್ಬಂದಿಯೊಂದಿಗೆ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಮತ್ತೊಂದು ತಂಡವನ್ನು ಸ್ಥಳಕ್ಕೆ ನಿಯೋಜಿಸಲಾಗಿದೆ.

ಗುವಾಹತಿ: ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ದುರಂತದಲ್ಲಿ ಈವರೆಗೂ 3 ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಇನ್ನೂ ಒಂಬತ್ತು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಸರ್ಕಾರದ ವರದಿಯ ಪ್ರಕಾರ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ 30 ಸದಸ್ಯರ ತಂಡವು ಸ್ಥಳದಲ್ಲಿ ಬೀಡುಬಿಟ್ಟಿದ್ದು, ಎಂಟು ಸಿಬ್ಬಂದಿಯೊಂದಿಗೆ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಮತ್ತೊಂದು ತಂಡವನ್ನು ಸ್ಥಳಕ್ಕೆ ನಿಯೋಜಿಸಲಾಗಿದೆ.

ಸೋಮವಾರ ರಾತ್ರಿಯೇ ಸಿಕ್ಕಿಬಿದ್ದಿರುವ ಗಣಿಗಾರರ ಹೆಸರುಗಳನ್ನೂ ಮುಖ್ಯಮಂತ್ರಿ ಕಚೇರಿ ಬಿಡುಗಡೆ ಮಾಡಿದ್ದು, ಸಂತ್ರಸ್ಥ ಕಾರ್ಮಿಕರನ್ನು ನೇಪಾಳದ ಗಂಗಾ ಬಹದ್ದೂರ್ ಶ್ರೇತ್ (38), ಪಶ್ಚಿಮ ಬಂಗಾಳದ ಸಂಜಿತ್ ಸರ್ಕಾರ್ (35), ಅಸ್ಸಾಂನ ಹುಸೇನ್ ಅಲಿ (30), ಜಾಕಿರ್ ಹುಸೇನ್ (38), ಸರ್ಪಾ ಬರ್ಮನ್ (46), ಮುಸ್ತಫಾ ಸೇಖ್ (44), ಖುಸಿ ಮೋಹನ್ ರೈ (57), ಲಿಜನ್ ಮಗರ್ (26) ಮತ್ತು ಶರತ್ ಗೊಯಾರಿ (37) ಎಂದು ಗುರುತಿಸಲಾಗಿದೆ.

ಕಾರ್ಯಾಚರಣೆಗೆ ಸೇನೆ ನಿಯೋಜನೆ

ಇನ್ನು ಕಲ್ಲಿದ್ದಲು ಗಣಿಯಲ್ಲಿ ಸಿಲುಕಿರುವವರ ರಕ್ಷಣೆಗೆ ಇದೇ ಸೇನೆ ಧುಮುಕಿದ್ದು, 'ಸಿಕ್ಕಿಬಿದ್ದಿರುವ ಗಣಿಗಾರರನ್ನು ರಕ್ಷಿಸುವಲ್ಲಿ ನಾಗರಿಕ ಆಡಳಿತಕ್ಕೆ ಸಹಾಯ ಮಾಡಲು ಸೇನೆಯ ಪರಿಹಾರ ಅಂಕಣಗಳು ಮಂಗಳವಾರ ಮುಂಜಾನೆ ಉಮ್ರಾಂಗ್ಸೊ ತಲುಪಿವೆ ಎಂದು ಗುವಾಹಟಿ ಮೂಲದ ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಮಹೇಂದರ್ ರಾವತ್ ಹೇಳಿದ್ದಾರೆ.

ವಿಶಾಖಪಟ್ಟಣಂ ಮುಳುಗು ತಜ್ಞರಿಗೆ ಬುಲಾವ್

ಇದೇ ವೇಳೆ ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡಲು ನೌಕಾಪಡೆಯ ಆಳವಾದ ಡೈವರ್‌ಗಳನ್ನು ಕೋರಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. "ಸ್ಥಳೀಯ ತಂಡದ ಮೌಲ್ಯಮಾಪನದ ಪ್ರಕಾರ ಗಣಿ ಒಳಗೆ ನೀರಿನ ಮಟ್ಟವು ಸುಮಾರು 100 ಅಡಿಗಳಿಗೆ ಏರಿದೆ. ಹೀಗಾಗಿ ವಿಶಾಖಪಟ್ಟಣಂ ಮುಳುಗು ತಜ್ಞರಿಗೆ ಬುಲಾವ್ ನೀಡಲಾಗಿದ್ದು, ಈಗಾಗಲೇ ಡೈವರ್ ಗಳು ವಿಶಾಖಪಟ್ಟಣಂನಿಂದ ವಿಮಾನದಲ್ಲಿ ಆಗಮಿಸುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಕಲ್ಲಿದ್ದಲು ಗಣಿ ದುರಂತಗಳು ಈಶಾನ್ಯ ಭಾರತದಲ್ಲಿ ಸಾಮಾನ್ಯವಾಗಿದ್ದು, ಈ ಹಿಂದೆ ಜನವರಿ 2024 ರಲ್ಲಿ, ನಾಗಾಲ್ಯಾಂಡ್‌ನ ವೋಖಾ ಜಿಲ್ಲೆಯ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಬೆಂಕಿಯಲ್ಲಿ ಆರು ಕಾರ್ಮಿಕರು ಸಾವನ್ನಪ್ಪಿ, ನಾಲ್ವರು ಗಾಯಗೊಂಡಿದ್ದರು. ಅಂತೆಯೇ ಮೇ ತಿಂಗಳಲ್ಲಿ, ಅಸ್ಸಾಂನ ತಿನ್ಸುಕಿಯಾ ಜಿಲ್ಲೆಯಲ್ಲಿ ಗಣಿ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದರು.

ನಂತರ ಸೆಪ್ಟೆಂಬರ್ 2022 ರಲ್ಲಿ, ಅದೇ ಜಿಲ್ಲೆಯಲ್ಲಿ ಶಂಕಿತ ವಿಷಕಾರಿ ಅನಿಲ ಸೋರಿಕೆಯಾಗಿ ಮೂವರು ಕಲ್ಲಿದ್ದಲು ಗಣಿಗಾರರು ಕೊಲ್ಲಲ್ಪಟ್ಟರು. ಡಿಸೆಂಬರ್ 13, 2018 ರಂದು ಮೇಘಾಲಯದ ಕ್ಸಾನ್ ಪ್ರದೇಶದಲ್ಲಿ ಪ್ರವಾಹಕ್ಕೆ ಸಿಲುಕಿದ ಇಲಿ-ಹೋಲ್ ಕಲ್ಲಿದ್ದಲು ಗಣಿಯಲ್ಲಿ 15 ಕಾರ್ಮಿಕರು ಸಾವನ್ನಪ್ಪಿದ್ಜರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮದ್ದೂರಿನಲ್ಲಿ ಕಲ್ಲು ತೂರಾಟ: ಶಾಂತಿ ಕದಡುವುದೇ ಬಿಜೆಪಿ ಉದ್ದೇಶ; ಜಾತಿ, ಧರ್ಮ, ಪಕ್ಷ ಲೆಕ್ಕಿಸದೆ ಕ್ರಮ

ಮದ್ದೂರಿನಲ್ಲಿ ಕಲ್ಲು ತೂರಾಟ: ಲೈಟ್ ಆಫ್ ಮಾಡಿರುವುದು ಅನುಮಾನ ಮೂಡಿಸುತ್ತಿದೆ - IGP

ಮುಂದಿನ ಜನ್ಮದಲ್ಲಿ 'ಮುಸ್ಲಿಂ' ಆಗಿ ಹುಟ್ಟುವ ಆಸೆ: ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ ವಿರುದ್ಧ ಬಿಜೆಪಿ ಕಿಡಿ! Video

ಆಗ KGF, ಈಗ ಕಾಂತಾರ ಚಾಪ್ಟರ್ 1: ಮತ್ತೆ ಕನ್ನಡ ಚಿತ್ರದ ಕೇರಳ ವಿತರಣೆ ಹಕ್ಕು ಪಡೆದ Actor Prithviraj Sukumaran

Trade Agreement: ಇಸ್ರೇಲ್‌ನೊಂದಿಗೆ ವ್ಯಾಪಾರ ಒಪ್ಪಂದಕ್ಕೆ ಭಾರತ ಸಹಿ, 'ನರಹಂತಕ ಸರ್ಕಾರ' ಬೆಂಬಲಿಸುವುದು ರಾಷ್ಟ್ರೀಯ ಹಿತಾಸಕ್ತಿಯಲ್ಲ- ಓವೈಸಿ

SCROLL FOR NEXT