ನಟ ಅಲ್ಲು ಅರ್ಜುನ್ 
ದೇಶ

'ಪುಷ್ಪ 2' ಕಾಲ್ತುಳಿತ ಪ್ರಕರಣ: ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ಬಾಲಕನನ್ನು ಭೇಟಿಯಾದ ಅಲ್ಲು ಅರ್ಜುನ್!

ಆಸ್ಪತ್ರೆ ಮತ್ತು ಸುತ್ತಮುತ್ತ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕಾಪಾಡಲು ಭೇಟಿಯನ್ನು ರಹಸ್ಯವಾಗಿಡುವಂತೆ ಮನವಿ ಮಾಡುತ್ತೇವೆ. ರಾಮಗೋಪಾಲಪೇಟೆ ಪೊಲೀಸರು ಭೇಟಿ ವೇಳೆ ಬೆಂಗಾವಲಾಗಿ ಇರುತ್ತಾರೆ ಎಂದು ನೋಟಿಸ್ ನಲ್ಲಿ ಹೇಳಲಾಗಿತ್ತು. ಪೊಲೀಸರಿಗೆ ಮಾಹಿತಿ ನೀಡಿದ ನಂತರ ಅಲ್ಲು ಅರ್ಜುನ್ ಆಸ್ಪತ್ರೆಗೆ ಭೇಟಿ

ಹೈದರಾಬಾದ್: ಸಂಧ್ಯಾ ಥಿಯೇಟರ್ ಕಾಲ್ತುಳಿತ ದುರಂತ ಸಂಭವಿಸಿದ 30 ದಿನಗಳ ನಂತರ, ನಟ ಅಲ್ಲು ಅರ್ಜುನ್ ಮಂಗಳವಾರ ಬೆಳಗ್ಗೆ ಸಿಕಂದರಾಬಾದ್‌ನ ಕಿಮ್ಸ್‌ನಲ್ಲಿ ಗಾಯಾಳು ಒಂಬತ್ತು ವರ್ಷದ ಶ್ರೀ ತೇಜ್ ಅವರನ್ನು ಭೇಟಿ ಮಾಡಿದರು. ಅಲ್ಲು ಅರ್ಜುನ್ ಜೊತೆ TGFDC ಅಧ್ಯಕ್ಷ ದಿಲ್ ರಾಜು ಕೂಡ ಇದ್ದರು. ಪೊಲೀಸ್ ಸಿಬ್ಬಂದಿ ಅವರನ್ನು ಆಸ್ಪತ್ರೆಗೆ ಕರೆದೊಯ್ದರು.

ಆರಂಭದಲ್ಲಿ ಡಿಸೆಂಬರ್ 5 ರಂದು ಶ್ರೀ ತೇಜ್ ಅವರನ್ನು ಭೇಟಿ ಮಾಡಲು ಅಲ್ಲು ಅರ್ಜುನ್ ಯೋಜಿಸಿದ್ದರು. ಆದರೆ ಅವರ ಭೇಟಿಯನ್ನು ಮರುಪರಿಶೀಲಿಸುವಂತೆ ರಾಮಗೋಪಾಲಪೇಟೆ ಪೊಲೀಸರು ನೋಟಿಸ್ ನೀಡಿದ ನಂತರ ಭೇಟಿಯನ್ನು ರದ್ದುಗೊಳಿಸಿದ್ದರು. ಆದರೆ, ನಂತರದ ನೋಟಿಸ್‌ನಲ್ಲಿ ಅಲ್ಲು ಅರ್ಜುನ್ ಆಸ್ಪತ್ರೆಗೆ ಭೇಟಿ ನೀಡಲು ಅಗತ್ಯ ವ್ಯವಸ್ಥೆ ಮಾಡಲು ಸಿದ್ಧ ಎಂದು ಪೊಲೀಸರು ತಿಳಿಸಿದ್ದರು.

ಆಸ್ಪತ್ರೆ ಮತ್ತು ಸುತ್ತಮುತ್ತ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕಾಪಾಡಲು ಭೇಟಿಯನ್ನು ರಹಸ್ಯವಾಗಿಡುವಂತೆ ಮನವಿ ಮಾಡುತ್ತೇವೆ. ರಾಮಗೋಪಾಲಪೇಟೆ ಪೊಲೀಸರು ಭೇಟಿ ವೇಳೆ ಬೆಂಗಾವಲಾಗಿ ಇರುತ್ತಾರೆ ಎಂದು ನೋಟಿಸ್ ನಲ್ಲಿ ಹೇಳಲಾಗಿತ್ತು. ಪೊಲೀಸರಿಗೆ ಮಾಹಿತಿ ನೀಡಿದ ನಂತರ ಅಲ್ಲು ಅರ್ಜುನ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಡಿಸೆಂಬರ್ 4 ರಂದು ಸಂಧ್ಯಾ ಥಿಯೇಟರ್‌ನಲ್ಲಿ ಪುಷ್ಪ 2 ಪ್ರದರ್ಶನದ ವೇಳೆ 39 ವರ್ಷದ ರೇವತಿ ಪ್ರಾಣ ಕಳೆದುಕೊಂಡಿದ್ದರು. ಅವರ ಒಂಬತ್ತು ವರ್ಷದ ಮಗ ಶ್ರೀ ತೇಜ್ ತೀವ್ರವಾಗಿ ಗಾಯಗೊಂಡಿದ್ದರು. ಕಳೆದ 34 ದಿನಗಳಿಂದ ಶ್ರೀ ತೇಜ್ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ ಭಯಗೊಂಡಿದ್ದು ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ, CEC ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ': ಇಂದು CJP ಪ್ರತಿಭಟನೆ ಮುಂದುವರಿಕೆ

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!