ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಇಲಾಖೆಗಳ ಮುಖ್ಯಸ್ಥರು ಪ್ರಧಾನಿ ಮೋದಿಯ 'ಮನ್ ಕಿ ಬಾತ್' ಕೇಳುವುದು ಕಡ್ಡಾಯ: ಗೋವಾ ಸರ್ಕಾರ

ಗೋವಾದಲ್ಲಿರುವ ಎಲ್ಲಾ ಸರ್ಕಾರಿ ಇಲಾಖೆಗಳ ಮುಖ್ಯಸ್ಥರು ಮನ್ ಕಿ ಬಾತ್ ಅನ್ನು ಕಡ್ಡಾಯವಾಗಿ ಕೇಳಬೇಕು ಎಂದು ನಿರ್ದೇಶಿಸಲಾಗಿದೆ.

ಮನ್ ಕಿ ಬಾತ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
Lingaraj Badiger
Updated On : 9 Jan 2025, 8:38 pm

ಪಣಜಿ: ಪ್ರಧಾನಿ ನರೇಂದ್ರ ಮೋದಿಯವರ ರೇಡಿಯೋ ಕಾರ್ಯಕ್ರಮ 'ಮನ್ ಕಿ ಬಾತ್' ಅನ್ನುಎಲ್ಲಾ ಇಲಾಖೆಗಳ ಮುಖ್ಯಸ್ಥರು ಕಡ್ಡಾಯವಾಗಿ ಕೇಳಬೇಕು ಎಂದು ಬಿಜೆಪಿ ನೇತೃತ್ವದ ಗೋವಾ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಗೋವಾ ಸರ್ಕಾರ ಇಂದು ಹೊರಡಿಸಿದ ಸುತ್ತೋಲೆಯಲ್ಲಿ, ಎಲ್ಲಾ ಇಲಾಖೆಗಳ ಮುಖ್ಯಸ್ಥರು 'ಮನ್ ಕಿ ಬಾತ್' ಅನ್ನು ಕೇಳಿಕೊಂಡು ಕಾರ್ಯಕ್ರಮದಲ್ಲಿ ಉಲ್ಲೇಖಿಸಲಾದ ಸಲಹೆಗಳು ಮತ್ತು ಉತ್ತಮ ಆಡಳಿತ ಬಗ್ಗೆ ಸ್ಫೂರ್ತಿ ಪಡೆಯಬೇಕೆಂದು ಸೂಚಿಸಲಾಗಿದೆ.

ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಸುತ್ತೋಲೆಯನ್ನು ಪೋಸ್ಟ್ ಮಾಡಿದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು, "ಮನ್ ಕಿ ಬಾತ್, ಗೌರವಾನ್ವಿತ ಪ್ರಧಾನಿ ಮೋದಿಜಿ ಅವರ ಮಾಸಿಕ ರೇಡಿಯೋ ಕಾರ್ಯಕ್ರಮವಾಗಿದೆ. ಅದರಲ್ಲಿ ಪ್ರಧಾನಿ ಉತ್ತಮ ಆಡಳಿತದ ಕುರಿತು ಸಾರ್ವಜನಿಕರ ಗಮನ ಸೆಳೆಯುವ ಹೊಸ ಬಗೆಯ ಆಲೋಚನೆಗಳನ್ನು ಹಂಚಿಕೊಳ್ಳುತ್ತಾರೆ. ಇವುಗಳನ್ನು ಅನುಷ್ಠಾನಗೊಳಿಸುವುದರಿಂದ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ" ಎಂದು ಹೇಳಿದ್ದಾರೆ.

Advertisement

Advertisement

Also Read

'ಮನ್ ಕಿ ಬಾತ್ 'ಗೆ 10 ವರ್ಷ: ಈ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಹೇಳಿದ್ದೇನು?

'ಗೋವಾದಲ್ಲಿರುವ ಎಲ್ಲಾ ಸರ್ಕಾರಿ ಇಲಾಖೆಗಳ ಮುಖ್ಯಸ್ಥರು ಮನ್ ಕಿ ಬಾತ್ ಅನ್ನು ಕಡ್ಡಾಯವಾಗಿ ಕೇಳಬೇಕು ಎಂದು ನಿರ್ದೇಶಿಸಲಾಗಿದೆ. ರಾಷ್ಟ್ರಾದ್ಯಂತ ಸಕಾರಾತ್ಮಕ ಬದಲಾವಣೆಯನ್ನು ತಂದ ಯಶಸ್ಸಿನ ಕಥೆಗಳು ಮತ್ತು ಕಾರ್ಯಕ್ರಮದ ಸಮಯದಲ್ಲಿ ಹಂಚಿಕೊಳ್ಳಲಾದ ಉತ್ತಮ ಪದ್ಧತಿಗಳು ನಮಗೆ ಸ್ಫೂರ್ತಿಯಾಗಲಿವೆ' ಎಂದು ಸಾವಂತ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments