ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್‌ಗಢದ ಸುಕ್ಮಾದಲ್ಲಿ ಎನ್​ಕೌಂಟರ್: ಮೂವರು ನಕ್ಸಲರ ಹತ್ಯೆ

ಸುಕ್ಮಾದಲ್ಲಿ ನಡೆದ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಯಶಸ್ಸನ್ನು ಸಾಧಿಸಿವೆ ಎಂದು ಅವರು ಹೇಳಿದ್ದಾರೆ.

ಸುಕ್ಮಾ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆಗಳ ನಡೆಸಿದ ಎನ್​ಕೌಂಟರ್ ನಲ್ಲಿ ಮೂವರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ತಿಳಿಸಿದ್ದಾರೆ.

ಸುಕ್ಮಾದಲ್ಲಿ ನಡೆದ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಯಶಸ್ಸನ್ನು ಸಾಧಿಸಿವೆ ಎಂದು ಅವರು ಹೇಳಿದ್ದಾರೆ.

ಇಲ್ಲಿಯವರೆಗೆ, ಮೂವರು ನಕ್ಸಲರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಗೃಹ ಖಾತೆಯನ್ನು ಹೊಂದಿರುವ ಶರ್ಮಾ ರಾಯ್‌ಪುರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಜನವರಿ 6 ರಂದು ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ನಡೆಸಿದ ಐಇಡಿ ಸ್ಫೋಟದಲ್ಲಿ ಎಂಟು ಭದ್ರತಾ ಸಿಬ್ಬಂದಿ ಮತ್ತು ಅವರ ವಾಹನದ ಚಾಲಕ ಸಾವನ್ನಪ್ಪಿದ ಬಗ್ಗೆ ಉಲ್ಲೇಖಿಸಿದ ಉಪಮುಖ್ಯಮಂತ್ರಿ, "ನಕ್ಸಲರ ಹೀನ ಕೃತ್ಯದಿಂದ ಭದ್ರತಾ ಪಡೆಗಳು ಆಕ್ರೋಶಗೊಂಡಿವೆ" ಎಂದು ಹೇಳಿದರು.

"ನಾನು ಅವರನ್ನು (ಭದ್ರತಾ ಪಡೆಗಳು) ಭೇಟಿಯಾಗಿದ್ದೇನೆ. ನಮ್ಮ ಯೋಧರ ಶಕ್ತಿ ಮತ್ತು ಧೈರ್ಯದಿಂದ, ನಿಗದಿತ ಸಮಯದೊಳಗೆ ನಕ್ಸಲ್ ಬೆದರಿಕೆಯನ್ನು ನಿರ್ಮೂಲನೆ ಮಾಡಲಾಗುವುದು ಎಂದು ಪುನರುಚ್ಚರಿಸುತ್ತೇನೆ" ಎಂದರು.

ಇಂದು ಬೆಳಗ್ಗೆ, ಸುಕ್ಮಾ ಮತ್ತು ಬಿಜಾಪುರ ಜಿಲ್ಲೆಗಳ ಗಡಿಯಲ್ಲಿರುವ ಕಾಡಿನಲ್ಲಿ ಭದ್ರತಾ ಸಿಬ್ಬಂದಿಯ ಜಂಟಿ ತಂಡ ನಕ್ಸಲೈಟ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಎನ್‌ಕೌಂಟರ್ ನಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲಾ ಮೀಸಲು ಪಡೆ, ವಿಶೇಷ ಕಾರ್ಯಪಡೆ ಮತ್ತು ಕೋಬ್ರಾ(ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ - ಸಿಆರ್‌ಪಿಎಫ್‌ನ ಗಣ್ಯ ಘಟಕ)ಗೆ ಸೇರಿದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT