ರಾಹುಲ್ ಗಾಂಧಿ 
ದೇಶ

ಸಾವರ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ: ರಾಹುಲ್ ಗಾಂಧಿಗೆ ಜಾಮೀನು

ರಾಹುಲ್ ಗಾಂಧಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನ್ಯಾಯಾಲಯದ ಮುಂದೆ ಹಾಜರಾದ ನಂತರ ಸಂಸದ/ಶಾಸಕರ ವಿಶೇಷ ನ್ಯಾಯಾಲಯವು 25,000 ರೂ.ಗಳ ಶ್ಯೂರಿಟಿ ಬಾಂಡ್ ಆಧಾರದ ಮೇಲೆ ಜಾಮೀನು ನೀಡಿದೆ.

ಪುಣೆ: ಹಿಂದುತ್ವವಾದಿ ವಿ ಡಿ ಸಾವರ್ಕರ್ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ದಾಖಲಿಸಲಾದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಪುಣೆ ವಿಶೇಷ ನ್ಯಾಯಾಲಯವು ಶುಕ್ರವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾಮೀನು ಮಂಜೂರು ಮಾಡಿದೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನ್ಯಾಯಾಲಯದ ಮುಂದೆ ಹಾಜರಾದ ನಂತರ ಸಂಸದ/ಶಾಸಕರ ವಿಶೇಷ ನ್ಯಾಯಾಲಯವು 25,000 ರೂ.ಗಳ ಶ್ಯೂರಿಟಿ ಬಾಂಡ್ ಆಧಾರದ ಮೇಲೆ ಜಾಮೀನು ನೀಡಿದೆ.

ಹಿರಿಯ ಕಾಂಗ್ರೆಸ್ ನಾಯಕ ಮೋಹನ್ ಜೋಶಿ ಅವರು ನ್ಯಾಯಾಲಯದ ಮುಂದೆ ಶ್ಯೂರಿಟಿಯಾಗಿ ನಿಂತರು.

ರಾಹುಲ್ ಗಾಂಧಿಯವರ ಪರವಾಗಿ ವಾದ ಮಂಡಿಸಿದ ವಕೀಲ ಮಿಲಿಂದ್ ಪವಾರ್, ನ್ಯಾಯಾಲಯವು ಕಾಂಗ್ರೆಸ್ ನಾಯಕನಿಗೆ ನ್ಯಾಯಾಲಯದ ಮುಂದೆ ಹಾಜರಾಗುವುದರಿಂದ ಶಾಶ್ವತ ವಿನಾಯಿತಿ ನೀಡಿದೆ ಎಂದು ತಿಳಿಸಿದರು.

ಈ ಪ್ರಕರಣವನ್ನು ಈಗ ಫೆಬ್ರವರಿ 18 ರಂದು ವಿಚಾರಣೆ ನಡೆಸಲಾಗುವುದು ಎಂದು ಪವಾರ್ ಹೇಳಿದ್ದಾರೆ.

2023 ರ ಮಾರ್ಚ್‌ನಲ್ಲಿ ಲಂಡನ್‌ನಲ್ಲಿ ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಸಾವರ್ಕರ್ ಅವರು ತಮ್ಮ ಸ್ನೇಹಿತರೊಂದಿಗೆ ಮುಸ್ಲಿಂ ವ್ಯಕ್ತಿಯನ್ನು ಹೊಡೆದು ಖುಷಿಪಟ್ಟಿದ್ದಾಗಿ ಪುಸ್ತಕದಲ್ಲಿ ಬರೆದುಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಈ ಸಂಬಂಧ ಸಾವರ್ಕರ್ ಅವರ ಮೊಮ್ಮಗ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತೆಮ್ ನವಿ ಪಿಳ್ಳೆಗೆ ಒಲಿದ ನೊಬೆಲ್ ಶಾಂತಿ ಗರಿ

ಯಮನಿಗೇ ಚಳ್ಳೇಹಣ್ಣು: ಗುದ್ದಿದ ಲಾರಿಯನ್ನೇ ಹಿಡಿದು ಪ್ರಾಣ ಉಳಿಸಿಕೊಂಡ ಯುವತಿ!-ರೋಚಕ Video

'ಪೋಷಕರು ನನ್ನ ಆ ಖಾಸಗಿ ವಿಡಿಯೋ ನೋಡಿದ್ದರು, ಏರ್‌ಪೋರ್ಟ್‌ನಲ್ಲೇ ಕುಳಿತು ಅತ್ತಿದ್ದೆ: ವೈರಲ್‌ ಪಾರ್ಟಿ ಬಗ್ಗೆ ಅಪೂರ್ವ ಮುಖಿಜಾ! Video

ಪ್ರಜ್ವಲ್​​ ರೇವಣ್ಣಗೆ ಬಿಗ್ ಶಾಕ್; ಪರಪ್ಪನ ಅಗ್ರಹಾರದಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಮಾಜಿ ಸಂಸದನ ಶಿಫ್ಟ್!