ಸಾಂದರ್ಭಿಕ ಚಿತ್ರ 
ದೇಶ

ಕೇರಳ: ದಲಿತ ಯುವತಿ ಮೇಲೆ 60ಕ್ಕೂ ಹೆಚ್ಚು ಮಂದಿಯಿಂದ ಲೈಂಗಿಕ ದೌರ್ಜನ್ಯ, 12 ಮಂದಿ ಬಂಧನ

ಪ್ರಾಥಮಿಕ ತನಿಖೆಯ ಪ್ರಕಾರ 60 ಕ್ಕೂ ಹೆಚ್ಚು ಆರೋಪಿಗಳಿದ್ದಾರೆ ಎಂದು ಯುವತಿ ತಿಳಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 15 ಮಂದಿಯನ್ನು ಬಂಧಿಸಲಾಗಿದೆ.

ಪತ್ತನಂತಿಟ್ಟ: ಕೇರಳದ ಪತ್ತನಂತಿಟ್ಟದಲ್ಲಿ ಕಳೆದ ಐದು ವರ್ಷಗಳಿಂದ 60 ಕ್ಕೂ ಹೆಚ್ಚು ಜನರು ತನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಅಥ್ಲೀಟ್ ಆಗಿರುವ 18 ವರ್ಷದ ದಲಿತ ಯುವತಿ ಆಘಾತಕಾರಿ ಘಟನೆಯನ್ನು ಮಕ್ಕಳ ಕಲ್ಯಾಣ ಸಮಿತಿಯ (ಸಿಡಬ್ಲ್ಯೂಸಿ) ಸದಸ್ಯರಿಗೆ ನೀಡಿದ ನಂತರ ಅವರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ 60 ಕ್ಕೂ ಹೆಚ್ಚು ಆರೋಪಿಗಳಿದ್ದಾರೆ ಎಂದು ಯುವತಿ ತಿಳಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 15 ಮಂದಿಯನ್ನು ಬಂಧಿಸಲಾಗಿದೆ. ಪತ್ತನಂತಿಟ್ಟ ಜಿಲ್ಲೆಯ ಎರಡು ಪೊಲೀಸ್ ಠಾಣೆಗಳಲ್ಲಿ ಐದು ಎಫ್‌ಐಆರ್‌ಗಳನ್ನು ದಾಖಲಿಸಿದ ನಂತರ ಶುಕ್ರವಾರ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ಮತ್ತೆ ಒಂಬತ್ತು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಯುವತಿ 13 ವರ್ಷದವಳಿದ್ದಾಗ, ಆಕೆಯ ತಂದೆಯ ಸ್ನೇಹಿತನ ಮಗ ಸುಬಿನ್ ಎಂಬಾತ ತನ್ನ ಮೊಬೈಲ್ ಫೋನ್‌ನಲ್ಲಿ ಅಶ್ಲೀಲ ದೃಶ್ಯಗಳನ್ನು ತೋರಿಸಿ ಆಮಿಷವೊಡುವ ಮೂಲಕ ಲೈಂಗಿಕ ದೌರ್ಜನ್ಯವಸೆಗಿದ್ದಾನೆ. ಅಲ್ಲದೇ ಯುವತಿಯ ನಗ್ನ ಚಿತ್ರವನ್ನು ತನ್ನ ಮೊಬೈಲ್ ನಲ್ಲಿ ತೆಗೆದುಕೊಂಡಿದ್ದ.

ಬಳಿಕ ಆಕೆಗೆ 16 ವರ್ಷವಾದಾಗ ಸುಬಿನ್ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಈ ಕೃತ್ಯದ ವಿಡಿಯೋಗಳನ್ನೂ ತನ್ನ ಫೋನ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾನೆ. ಇದಾದ ನಂತರ ನಿರಂತರ ಲೈಂಗಿಕ ದೌರ್ಜನ್ಯಗಳು ನಡೆಯುತ್ತಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.ಈ ದೃಶ್ಯಗಳನ್ನು ಸುಬಿನ್ ಸ್ನೇಹಿತರಲ್ಲಿ ಹಂಚಿಕೊಂಡಿದ್ದು, ಅವರು ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ.

ಪುನರಾವರ್ತಿತ ದೌರ್ಜನ್ಯದ ನಂತರ ಶೈಕ್ಷಣಿಕವಾಗಿ ಹಿಂದುಳಿದ ಯುವತಿ ಕೌನ್ಸಿಲಿಂಗ್ ವೇಳೆ ಮೊದಲಿಗೆ ವಿಷಯ ಬಾಯ್ಬಿಟ್ಟಿದ್ದಾಳೆ. ಆಕೆಯ ತರಬೇತುದಾರರು, ಸಹ ಕ್ರೀಡಾಪಟುಗಳು ಮತ್ತು ಸಹಪಾಠಿಗಳು ಸೇರಿದಂತೆ ಅನೇಕ ಮಂದಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವುದಕ್ಕೆ ಸಾಕ್ಷಿಗಳು ಸಿಕ್ಕಿವೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT