ಲೈಂಗಿಕ ಕಿರುಕುಳ  online desk
ದೇಶ

18 ವರ್ಷದ ಯುವತಿ ಮೇಲೆ 60 ಮಂದಿಯಿಂದ 5 ವರ್ಷ ನಿರಂತರ ಅತ್ಯಾಚಾರ!: ಭೀಭತ್ಸ ಘಟನೆ ಬಿಚ್ಚಿಟ್ಟ ಸಂತ್ರಸ್ತೆ!

ಸಂತ್ರಸ್ತ ಯುವತಿ ಕೇರಳದವರಾಗಿದ್ದು, ಪತ್ತನಂತಿಟ್ಟದಲ್ಲಿ ಈ ಘಟನೆ ವರದಿಯಾಗಿದೆ. ಸಂತ್ರಸ್ತೆಯ ನೋವಿನ ಕಥೆ ಕೇಳಿದ ಮಕ್ಕಳ ಕಲ್ಯಾಣ ಸಮಿತಿ ಪೊಲೀಸರಿಗೆ ಮಾಹಿತಿ ರವಾನಿಸಿದೆ.

ಪತ್ತನಂತಿಟ್ಟ: 5 ವರ್ಷಗಳಿಂದ ತನ್ನ ಮೇಲೆ 60 ಮಂದಿ ನಿರಂತರ ಅತ್ಯಾಚಾರವೆಸಗಿದ್ದಾರೆ ಎಂಬ ಅಘಾತಕಾರಿ ಅಂಶವನ್ನು 18 ವರ್ಷದ ಯುವತಿಯೊಬ್ಬರು ಬಹಿರಂಗಪಡಿಸಿದ್ದಾರೆ.

ಸಂತ್ರಸ್ತ ಯುವತಿ ಕೇರಳದವರಾಗಿದ್ದು, ಪತ್ತನಂತಿಟ್ಟದಲ್ಲಿ ಈ ಘಟನೆ ವರದಿಯಾಗಿದೆ. ಸಂತ್ರಸ್ತೆಯ ನೋವಿನ ಕಥೆ ಕೇಳಿದ ಮಕ್ಕಳ ಕಲ್ಯಾಣ ಸಮಿತಿ ಪೊಲೀಸರಿಗೆ ಮಾಹಿತಿ ರವಾನಿಸಿದೆ.

ಪೊಲೀಸರ ಪ್ರಕಾರ, ಪ್ರಾಥಮಿಕ ತನಿಖೆಯಲ್ಲಿ 60 ಕ್ಕೂ ಹೆಚ್ಚು ಆರೋಪಿಗಳಿದ್ದಾರೆ ಎಂದು ಬಾಲಕಿ ಹೇಳಿದ್ದಾಳೆ. ಎಲವುಂತಿಟ್ಟ ಪೊಲೀಸರು ಈ ಪ್ರಕರಣದಲ್ಲಿ ಇದುವರೆಗೆ ಐದು ಆರೋಪಿಗಳನ್ನು ಬಂಧಿಸಿದ್ದಾರೆ. ಸುಬಿನ್, 24, ಎಸ್ ಸಂದೀಪ್(30), ವಿಕೆ ವಿನೀತ್(30), ಕೆ.ಆನಂದು(21), ಮತ್ತು ಶ್ರೀನಿ ಅಲಿಯಾಸ್ ಎಸ್ ಸುಧಿ ಶ್ರೀನಿ, (24), ಇವರೆಲ್ಲರೂ ಬಂಧನಕ್ಕೊಳಗಾದ ಪತ್ತನಂತಿಟ್ಟದ ಚೆನ್ನೀರ್ಕರ ನಿವಾಸಿಗಳಾಗಿದ್ದಾರೆ. ಬಂಧಿತ ವ್ಯಕ್ತಿಗಳ ಮೊಬೈಲ್ ಫೋನ್‌ಗಳಲ್ಲಿನ ಫೋಟೋಗಳಿಂದ ತನ್ನ ಮೇಲೆ ದೌರ್ಜನ್ಯ ಎಸಗಿದ ಇತರ 40 ಜನರನ್ನು ಬಾಲಕಿ ಗುರುತಿಸಿದ್ದಾಳೆ.

ಬಾಲಕಿ 16 ವರ್ಷದವಳಿದ್ದಾಗ, ಸುಬಿನ್ ಆಕೆಯನ್ನು ಏಕಾಂತ ಸ್ಥಳಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ. ಆ ಕೃತ್ಯದ ವೀಡಿಯೊಗಳನ್ನು ತನ್ನ ಫೋನ್‌ನಲ್ಲಿ ರೆಕಾರ್ಡ್ ಮಾಡಿದ್ದ. ಇದರ ನಂತರ ಆಕೆಯ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ನಡೆಯುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಲೈಂಗಿಕ ದೌರ್ಜನ್ಯದ ಈ ದೃಶ್ಯಗಳನ್ನು ಸುಬಿನ್‌ ತನ್ನ ಸ್ನೇಹಿತರೊಂದಿಗೆ ಹಂಚಿಕೊಂಡಿದ್ದು, ಅವರು ಕೂಡ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ. ನಿರಂತರ ದೌರ್ಜನ್ಯದ ಪರಿಣಾಮ ಬಾಲಕಿಯ ಶೈಕ್ಷಣಿಕ ಸಾಧನೆಯಲ್ಲಿಯೂ ಕುಸಿತ ಕಂಡುಬಂದಿತ್ತು. ಕೌನ್ಸೆಲಿಂಗ್ ಅವಧಿಯಲ್ಲಿ ಮಹಿಳಾ ಸಬಲೀಕರಣ ಸಮೂಹದ ಎದುರು ಈ ವಿಷಯವನ್ನು ಮೊದಲು ಬಹಿರಂಗಪಡಿಸಿದ್ದಾರೆ. 'ತನಿಖೆ ಮುಂದುವರೆದಂತೆ ಇನ್ನಷ್ಟು ಆರೋಪಿಗಳನ್ನು ಗುರುತಿಸಲಾಗುವುದು' ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಮಹಿಳಾ ಸಬಲೀಕರಣ ಸಮೂಹ ಸಿಡಬ್ಲ್ಯೂಸಿಗೆ ಮಾಹಿತಿ ನೀಡಿತು. ಇದಾದ ನಂತರ, ಯುವತಿ ತನ್ನ ತಾಯಿಯೊಂದಿಗೆ ಇಡೀ ಘಟನೆಯನ್ನು ಸಿಡಬ್ಲ್ಯೂಸಿ ಸದಸ್ಯರಿಗೆ ವಿವರಿಸಿದ್ದಾರೆ.

ಪೊಲೀಸರ ಪ್ರಕಾರ, ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ) ಪ್ರಕರಣಗಳಲ್ಲಿ ಅಪರೂಪದ ಪ್ರಕರಣವಾಗಿದ್ದು, ಇದರಲ್ಲಿ ಆರೋಪಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ, ಬಾಲಕಿ ಪರಿಶಿಷ್ಟ ಜಾತಿಗೆ ಸೇರಿದವಳಾಗಿರುವುದರಿಂದ ಎಸ್‌ಸಿ/ಎಸ್‌ಟಿ ಕಾಯ್ದೆಯನ್ನು ಸೇರಿಸಲಾಗುತ್ತದೆ.

ಘಟನೆಗೆ ಸಂಬಂಧಿಸಿದಂತೆ ಪತ್ತನಂತಿಟ್ಟ ಪೊಲೀಸ್ ಠಾಣೆಯಲ್ಲಿಯೂ ಪ್ರಕರಣ ದಾಖಲಾಗಿದೆ. ವಿವಿಧ ಠಾಣೆಗಳಲ್ಲಿ ತನಿಖೆ ಮುಂದುವರೆದಂತೆ ಹೆಚ್ಚಿನ ಆರೋಪಿಗಳನ್ನು ಗುರುತಿಸುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT