ಭಾರತ-ಬಾಂಗ್ಲಾ ಗಡಿಯ ಸಾಂದರ್ಭಿಕ ಚಿತ್ರ 
ದೇಶ

ಗಡಿಯಲ್ಲಿ ಉದ್ವಿಗ್ನತೆ: ಭಾರತೀಯ ರಾಯಭಾರಿಗೆ ಬಾಂಗ್ಲಾದೇಶ ಸಮನ್ಸ್

ಭಾರತ ದ್ವಿಪಕ್ಷೀಯ ಒಪ್ಪಂದವನ್ನು ಉಲ್ಲಂಘಿಸಿ ಬಾಂಗ್ಲಾ ಗಡಿಯ ಐದು ಸ್ಥಳಗಳಲ್ಲಿ ಬೇಲಿಗಳನ್ನು ನಿರ್ಮಿಸಲು ಪ್ರಯತ್ನಿಸುತ್ತಿದೆ ಎಂದು ಢಾಕಾ ಆರೋಪಿಸಿದ ಕೆಲವೇ ಗಂಟೆಗಳ ನಂತರ ಈ ಬೆಳವಣಿಗೆ ನಡೆದಿದೆ

ಢಾಕಾ: ಗಡಿ ಉದ್ವಿಗ್ನತೆ ಕುರಿತು ಬಾಂಗ್ಲಾದೇಶದ ವಿದೇಶಾಂಗ ಸಚಿವಾಲಯ ಭಾನುವಾರ ಭಾರತೀಯ ಹೈಕಮಿಷನರ್ ಪ್ರಣಯ್ ವರ್ಮಾ ಅವರಿಗೆ ಸಮನ್ಸ್ ನೀಡಿದೆ.

ಭಾರತ ದ್ವಿಪಕ್ಷೀಯ ಒಪ್ಪಂದವನ್ನು ಉಲ್ಲಂಘಿಸಿ ಬಾಂಗ್ಲಾ ಗಡಿಯ ಐದು ಸ್ಥಳಗಳಲ್ಲಿ ಬೇಲಿಗಳನ್ನು ನಿರ್ಮಿಸಲು ಪ್ರಯತ್ನಿಸುತ್ತಿದೆ ಎಂದು ಢಾಕಾ ಆರೋಪಿಸಿದ ಕೆಲವೇ ಗಂಟೆಗಳ ನಂತರ ಈ ಬೆಳವಣಿಗೆ ನಡೆದಿದೆ. ವರ್ಮಾ ಮಧ್ಯಾಹ್ನ 3:00 ಗಂಟೆಯ ಸುಮಾರಿಗೆ ಸಚಿವಾಲಯಕ್ಕೆ ಭೇಟಿ ನೀಡಿ ಚರ್ಚಿಸಿದ್ದಾರೆ.

ವಿದೇಶಾಂಗ ಕಾರ್ಯದರ್ಶಿ ಜಾಶಿಮ್ ಉದ್ದೀನ್ ಅವರೊಂದಿಗಿನ ಸುಮಾರು 45 ನಿಮಿಷಗಳ ಕಾಲ ಸಭೆ ನಡೆಸಿದ್ದಾರೆ. ಚರ್ಚೆಯ ಕುರಿತು ಮಧ್ಯಂತರ ಸರ್ಕಾರವು ಯಾವುದೇ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡದಿದ್ದರೂ, ಅಧಿಕಾರಿಗಳು ರಾಯಭಾರಿಗೆ ಸಮನ್ಸ್ ನೀಡಿರುವುದನ್ನು ಖಚಿತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ