ಕಾಂಗ್ರೆಸ್ ಭರವಸೆ PTI
ದೇಶ

ದೆಹಲಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿರುದ್ಯೋಗಿ ಯುವಕರಿಗೆ 8,500 ರೂ. ಗ್ಯಾರಂಟಿ ಯೋಜನೆ!

ಜನವರಿ 8ರಂದು ಪಕ್ಷವು 'ಜೀವನ ರಕ್ಷಾ ಯೋಜನೆ'ಯನ್ನು ಘೋಷಿಸಿತು. ಇದರಲ್ಲಿ 25 ಲಕ್ಷ ರೂ.ಗಳವರೆಗೆ ಉಚಿತ ಆರೋಗ್ಯ ವಿಮೆಯ ಭರವಸೆ ನೀಡಿತು. 70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರವರಿ 5 ರಂದು ಮತದಾನ ನಡೆಯಲಿದೆ.

ನವದೆಹಲಿ: ಈ ಬಾರಿ ದೆಹಲಿ ಚುನಾವಣೆಯಲ್ಲಿ ಭರವಸೆಗಳ ಮಹಾಪೂರವೇ ಹರಿದುಬರುತ್ತಿದೆ. ಆಮ್ ಆದ್ಮಿ ಪಕ್ಷ ಮೊದಲು ಮಹಿಳಾ ಸಮ್ಮಾನ್ ಯೋಜನೆಯನ್ನು ಘೋಷಿಸಿತು. ನಂತರ ಬಿಜೆಪಿ ಕೂಡ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತ್ತು. ಆದರೆ ಈಗ ಕಾಂಗ್ರೆಸ್ ಕೂಡ ದೊಡ್ಡ ಘೋಷಣೆಗಳನ್ನು ಮಾಡಲು ಪ್ರಾರಂಭಿಸಿದೆ. ಇಂದು ಕಾಂಗ್ರೆಸ್ ಪಕ್ಷವು ದೆಹಲಿಯ ವಿದ್ಯಾವಂತ ನಿರುದ್ಯೋಗಿ ಯುವಕರಿಗೆ 8500 ರೂ.ಗಳನ್ನು ನೀಡುವುದಾಗಿ ಘೋಷಿಸಿದೆ. ಇದಕ್ಕೂ ಮುಂಚೆಯೇ, ಕಾಂಗ್ರೆಸ್ ಪಕ್ಷವು ದೆಹಲಿಯ ಜನರಿಗೆ ಅನೇಕ ಚುನಾವಣಾ ಭರವಸೆಗಳನ್ನು ನೀಡಿದೆ.

ಯುವಕರು ತರಬೇತಿ ಪಡೆದ ಕ್ಷೇತ್ರಗಳಲ್ಲಿ ಅವರನ್ನು ನಿಯೋಜಿಸಲು ನಾವು ಪ್ರಯತ್ನಿಸುತ್ತೇವೆ. ಇದರಿಂದ ಅವರು... ತಮ್ಮ ಕೌಶಲ್ಯಗಳನ್ನು ಸುಧಾರಿಸಿಕೊಳ್ಳಬಹುದು. ಜನವರಿ 6ರಂದು ಕಾಂಗ್ರೆಸ್ 'ಪ್ಯಾರಿ ದೀದಿ ಯೋಜನೆ'ಯನ್ನು ಘೋಷಿಸಿತು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಮಾಸಿಕ 2,500 ರೂ.ಗಳ ಆರ್ಥಿಕ ಸಹಾಯವನ್ನು ನೀಡುವುದಾಗಿ ಭರವಸೆ ನೀಡಿತು.

ಜನವರಿ 8ರಂದು ಪಕ್ಷವು 'ಜೀವನ ರಕ್ಷಾ ಯೋಜನೆ'ಯನ್ನು ಘೋಷಿಸಿತು. ಇದರಲ್ಲಿ 25 ಲಕ್ಷ ರೂ.ಗಳವರೆಗೆ ಉಚಿತ ಆರೋಗ್ಯ ವಿಮೆಯ ಭರವಸೆ ನೀಡಿತು. 70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರವರಿ 5 ರಂದು ಮತದಾನ ನಡೆಯಲಿದ್ದು, ಫೆಬ್ರವರಿ 8 ರಂದು ಮತ ಎಣಿಕೆ ನಡೆಯಲಿದೆ. ದೆಹಲಿ ಚುನಾವಣೆಗೆ ಕಾಂಗ್ರೆಸ್ ಪಕ್ಷ ಇದುವರೆಗೆ 49 ಅಭ್ಯರ್ಥಿಗಳನ್ನು ಘೋಷಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT