ಭದ್ರತಾ ಪಡೆಗಳ ಚಿತ್ರ 
ದೇಶ

ಛತ್ತೀಸ್ ಗಢ: ಎನ್ ಕೌಂಟರ್ ನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ನಕ್ಸಲೀಯರ ಹತ್ಯೆ

ಜನವರಿ 6 ರಂದು ನಾರಾಯಣಪುರ- ದಾಂತೇವಾಡ- ಬಿಜಾಪುರ ಜಿಲ್ಲೆಯ ಗಡಿಯಲ್ಲಿ ನಡೆದ ಮೂರು ದಿನಗಳ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ನಕ್ಸಲೀಯರನ್ನು ಹತ್ಯೆ ಮಾಡಲಾಗಿತ್ತು.

ಬಿಜಾಪುರ: ಛತ್ತೀಸ್ ಗಢದ ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳೊಂದಿಗೆ ನಡೆಸಿದ ಎನ್ ಕೌಂಟರ್ ನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ನಕ್ಸಲೀಯರು ಹತ್ಯೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭದ್ರತಾ ಪಡೆಗಳ ಜಂಟಿ ತಂಡವೊಂದು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದಾಗ ಮದ್ದೇಡ್ ಪೊಲೀಸ್ ಠಾಣಾ ವ್ಯಾಪ್ತಿಯ ಬಂಡೆಪಾರ-ಕೊರಂಜೆಡ್ ಗ್ರಾಮಗಳ ಅರಣ್ಯ ಪ್ರದೇಶದಲ್ಲಿ ಇಂದು ಬೆಳಗ್ಗೆ ಎನ್ ಕೌಂಟರ್ ನಡೆದಿದೆ ಎಂದು ಬಸ್ತಾರ್ ವಲಯದ ಐಜಿಪಿ ಪಿ. ಸುಂದರ್ ರಾಜ್ ತಿಳಿಸಿದ್ದಾರೆ.

ಇಂದ್ರವತಿ ರಾಷ್ಟ್ರೀಯ ಉದ್ಯಾನವನದಲ್ಲಿ ಬರುವ ಅರಣ್ಯ ಪ್ರದೇಶದಲ್ಲಿ ನಕ್ಸಲೀಯರ ಚಲನವಲನ ಬಗ್ಗೆ ಮಾಹಿತಿ ಸಿಕ್ಕ ನಂತರ ಜಿಲ್ಲಾ ಮೀಸಲು ಪಡೆ, ವಿಶೇಷ ಕಾರ್ಯ ಪಡೆ ಶನಿವಾರ ಕಾರ್ಯಾಚರಣೆಯನ್ನು ಆರಂಭಿಸಿತ್ತು. ಇಂದು ಮಧ್ಯಾಹ್ನ 3-4 ಗಂಟೆಯವರೆಗೂ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಮಹಿಳೆಯರು ಸೇರಿದಂತೆ ಐವರು ನಕ್ಸಲೀಯರ ಮೃತದೇಹಗಳು ಪತ್ತೆಯಾಗಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಎನ್ ಕೌಂಟರ್ ನಡೆದ ಸ್ಥಳದಿಂದ ಒಂದು SLR (ಸೆಲ್ಫ್ ಲೋಡಿಂಗ್ ರೈಫಲ್ ) ಒಂದು 12 ಬೋರ್ ರೈಪಲ್, ಎರಡು ಸಿಂಗ್ ಶಾಟ್ ರೈಫಲ್ಸ್ ಮತ್ತಿತರ ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿದೆ. ಹತ್ಯೆಯಾದ ನಕ್ಸಲೀಯರ ಗುರುತನ್ನು ಇನ್ನೂ ಪತ್ತೆ ಹಚ್ಚಬೇಕಾಗಿದೆ ಎಂದು ಐಜಿಪಿ ತಿಳಿಸಿದ್ದಾರೆ. ಇದರೊಂದಿಗೆ 2025ರಲ್ಲಿ ಛತ್ತೀಸ್ ಗಢದಲ್ಲಿ ನಡೆದ ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ 14 ನಕ್ಸಲೀಯರ ಹತ್ಯೆಯಾಗಿದೆ.

ಜನವರಿ 6 ರಂದು ನಾರಾಯಣಪುರ- ದಾಂತೇವಾಡ- ಬಿಜಾಪುರ ಜಿಲ್ಲೆಯ ಗಡಿಯಲ್ಲಿ ನಡೆದ ಮೂರು ದಿನಗಳ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ನಕ್ಸಲೀಯರನ್ನು ಹತ್ಯೆ ಮಾಡಲಾಗಿತ್ತು. ಜನವರಿ 9 ರಂದು ಸುಕ್ಮಾ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಮೂವರು ನಕ್ಸಲೀಯರು ಹತ್ಯೆಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT