ಸಾಂದರ್ಭಿಕ ಚಿತ್ರ 
ದೇಶ

ಪಶ್ಚಿಮ ಬಂಗಾಳ: ಮಾಲ್ಡಾದಲ್ಲಿ ಹಾಡಹಗಲೇ ಗುಂಡಿಕ್ಕಿ ಟಿಎಂಸಿ ಕಾರ್ಯಕರ್ತನ ಹತ್ಯೆ, ಪಕ್ಷದ ಇತರ ಇಬ್ಬರಿಗೆ ಗಾಯ

ಹಿಂದಿನ ಘಟನೆಯಂತೆಯೇ ಪಕ್ಷದೊಳಗೆ ಆಂತರಿಕ ಪೈಪೋಟಿಯಿಂದ ಇಂದು ಶೂಟೌಟ್ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮೃತನನ್ನು ಹಸನ್ ಶೇಕ್ ಎಂದು ಗುರುತಿಸಲಾಗಿದೆ.

ಮಾಲ್ಡಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಟಿಎಂಸಿ ಹಿರಿಯ ಕೌನ್ಸಿಲರ್ ಒಬ್ಬರು ಹತ್ಯೆಯಾಗಿ ಇನ್ನೂ ಹದಿನೈದು ದಿನ ಕಳೆದಿಲ್ಲ. ಹೀಗಿರುವಾಗಲೇ ಮತ್ತೋರ್ವ ಟಿಎಂಸಿ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಅದೇ ವಲಯದಲ್ಲಿ ಮಂಗಳವಾರ ಹಾಡಹಗಲೇ ನಡೆದ ಶೂಟೌಟ್ ಘಟನೆಯಲ್ಲಿ ಟಿಎಂಸಿಯ ಇತರ ಇಬ್ಬರು ಕಾರ್ಯಕರ್ತರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿಂದಿನ ಘಟನೆಯಂತೆಯೇ ಪಕ್ಷದೊಳಗೆ ಆಂತರಿಕ ಪೈಪೋಟಿಯಿಂದ ಇಂದು ಶೂಟೌಟ್ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮೃತನನ್ನು ಹಸನ್ ಶೇಕ್ ಎಂದು ಗುರುತಿಸಲಾಗಿದೆ. ಟಿಎಂಸಿ ಸ್ಥಳೀಯ ಸಮಿತಿ ಅಧ್ಯಕ್ಷ ಬಕುಲ್ ಶೇಕ್ ಮತ್ತು ಎಸರುದ್ದೀನ್ ಶೇಖ್ ಗಾಯಗೊಂಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟಿಎಂಸಿ ಸ್ಥಳೀಯ ಸಮಿತಿ ಅಧ್ಯಕ್ಷರು ಪಕ್ಷದ ಕಾರ್ಯಕರ್ತರೊಂದಿಗೆ ರಸ್ತೆ ಉದ್ಘಾಟನೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಕಾಲಿಯಾಗಂಜ್ ಪ್ರದೇಶದಲ್ಲಿ ಬೆಳಗ್ಗೆ ಈ ಘಟನೆ ನಡೆದಿದೆ. ಗುಂಡೇಟಿನಿಂದ ಪಕ್ಷದ ಕಾರ್ಯಕರ್ತರೊಬ್ಬರು ಮೃತಪಟ್ಟಿದ್ದಾರೆ ಎಂದು ಮಾಲ್ಡಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯರು ಘೋಷಿಸಿದರು. ಇನ್ನಿಬ್ಬರು ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.

ಸಾಕ್ಷಿಗಳ ವಿಚಾರಣೆ ನಡೆಸುತ್ತಿದ್ದೇವೆ. ಈ ಘಟನೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೂ ಯಾರನ್ನೂ ಬಂಧಿಸಿಲ್ಲ ಎಂದು ಪೊಲೀಸ್ ಅಧಿಕಾರಿ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದರು.

ಜನವರಿ 2 ರಂದು ಮಾಲ್ಡಾದಲ್ಲಿ ಟಿಎಂಸಿ ಕೌನ್ಸಿಲರ್ ದುಲಾಲ್ ಸರ್ಕಾರ್ ಅವರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿಯನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್